4 ದಿನದ ಕಾರ್ಯಾಚರಣೆ.. ಆಪರೇಷನ್‌ ಕಾಡಾನೆ ಸಕ್ಸಸ್!‌ – ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಆನೆಮರಿ ಕಡೆಗೂ ಸೇಫ್!

4 ದಿನದ ಕಾರ್ಯಾಚರಣೆ.. ಆಪರೇಷನ್‌ ಕಾಡಾನೆ ಸಕ್ಸಸ್!‌ – ನಾಲೆಗೆ ಬಿದ್ದು ಒದ್ದಾಡುತ್ತಿದ್ದ ಆನೆಮರಿ ಕಡೆಗೂ ಸೇಫ್!

ಆಹಾರ ಅರಸುತ್ತಾ ಬಂದಿದ್ದ ಕಾಡಾನೆಯೊಂದು ಶಿವವಸಮುದ್ರ ಬಳಿಯಿರುವ ನಾಲೆಗೆ ಬಿದ್ದು ಒದ್ದಾಡುತ್ತಿತ್ತು. ನಿರಂತರ ಕಾರ್ಯಾಚರಣೆ ಬಳಿಕ ಇದೀಗ ಆನೆಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.

ಇದನ್ನೂ ಓದಿ: ಇನ್ಮುಂದೆ ಆಫೀಸ್‌ನಲ್ಲಿ ಲವ್‌ ಮಾಡಿದ್ರೆ ಕೆಲಸದಿಂದ ವಜಾ! – ಜಾರಿಯಾಯ್ತು ಹೊಸ ರೂಲ್ಸ್‌!

ಕಳೆದ ನಾಲ್ಕು ದಿನಗಳ ಹಿಂದೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ‌ ಶಿವವಸಮುದ್ರ ಬಳಿಯಿರುವ ನಾಲೆಗೆ ಕಾಡಾನೆ ಬಿದ್ದಿತ್ತು. ಆದರೆ ನಾಲೆಯಲ್ಲಿ ನೀರು ಹೆಚ್ಚಾಗಿದ್ದ ಕಾರಣ ಅರಣ್ಯ ಇಲಾಖೆ ಅಧಿಕಾರಿಗಳು ಎಷ್ಟು ಪ್ರಯತ್ನಪಟ್ರೂ ಆನೆಯನ್ನ ಮೇಲಕ್ಕೆ ಎತ್ತಲು ಸಾಧ್ಯವಾಗಿರ್ಲಿಲ್ಲ. ಹೀಗಾಗಿ ಸ್ಥಳದಲ್ಲೇ ಬೀಡುಬಿಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಕಾಡಾನೆಗೆ ಆಹಾರ ನೀಡಿದ್ದರು. ಇಂದು ನಾಲೆಯ ನೀರನ್ನು ತಗ್ಗಿಸಿ ಕಾರ್ಯಚರಣೆ ಮಾಡಲಾಗಿದೆ. ಇದೀಗ ನಿರಂತರ ಕಾರ್ಯಾಚರಣೆ ಬಳಿಕ ಆನೆಯನ್ನ ಮೇಲಕ್ಕೆ ಎತ್ತಲಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಮೇಳಕ್ಕೆ ಎತ್ತಿ,  ಚಿಕಿತ್ಸೆ ನೀಡಿ ಹಲಗೂರು ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ.

ಆರಂಭದಲ್ಲಿ ಮೊದಲಿಗೆ ಪಟಾಕಿ ಸಿಡಿಸಿ ತಾನಾಗಿಯೇ ಕಾಡಾನೆ ಮೇಲಕ್ಕೆ ಬರುವಂತೆ ಮಾಡಲಾಗಿದೆ. ಆದರೆ ಅದು ಸಾಧ್ಯವಾಗಿಲ್ಲ. ಇನ್ನು ಅರಣ್ಯ ಇಲಾಖೆ ಇಟ್ಟಿರುವ ಕಂಟೇನರ್​​ನ್ನು ಕಾಡಾನೆ ದೂಡಿದೆ. ಬಳಿಕ 2 ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಕಾಡಾನೆ ಪ್ರಜ್ಞೆತಪ್ಪಿ ನಾಲೆಯಲ್ಲೇ ಕುಸಿದುಬಿದ್ದಿದೆ. ಬಳಿಕ ಸಿಬ್ಬಂದಿ ನಾಲೆಗೆ ಇಳಿದು ಕಾಡಾನೆಯ ಕಾಲುಗಳಿಗೆ ಬೆಲ್ಟ್ ಕಟ್ಟಿ ಕಬ್ಬಿಣದ ಮ್ಯಾಟ್ ಮೇಲೆ ಮಲಗಿಸಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ.

ಸುರಕ್ಷಿತವಾಗಿ ಮೇಲೆತ್ತಿ ಲಾರಿ ಮೂಲಕ ಸ್ಥಳಾಂತರಿಸಿದ್ದಾರೆ. ಸದ್ಯ ಕಾಡಾನೆಗೆ ಚಿಕಿತ್ಸೆ ನೀಡಿ ಹಲಗೂರು ಅರಣ್ಯ ಪ್ರದೇಶಕ್ಕೆ ಅರಣ್ಯ ಸಿಬ್ಬಂದಿ ಬಿಟ್ಟಿದ್ದಾರೆ. ಆ ಮೂಲಕ ಕಾಡಾನೆ ರಕ್ಷಣಾ ಕಾರ್ಯಾಚರಣೆ ಯಶಸ್ವಿ ಆಗಿದೆ.

Shwetha M