ಬಾಂಗ್ಲಾ Vs ಭಾರತ ನಡುವೆ ಶೇಖ್ ಹಸೀನಾ ಕಗ್ಗಂಟು – ಬಾಂಗ್ಲಾದೇಶ ಮಹಿಳಾ ತಂಡದ ಭಾರತ ಪ್ರವಾಸ ಮುಂದೂಡಿಕೆ

ಡಿಸೆಂಬರ್‌ನಲ್ಲಿ ನಡೆಯಬೇಕಿದ್ದ ಬಾಂಗ್ಲಾದೇಶ ಮಹಿಳಾ ತಂಡದ ಸೀಮಿತ ಓವರ್‌ಗಳ ಭಾರತ ಪ್ರವಾಸವನ್ನು ಮುಂದೂಡಲಾಗಿದೆ ಎಂದು ವರದಿಯಾಗಿದೆ. ಇಎಸ್‌ಪಿಎನ್ ಕ್ರಿಕ್‌ಇನ್ಫೋ ವರದಿಯ ಪ್ರಕಾರ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ), ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ಸರಣಿ ಮುಂದೂಡಿಕೆಯ ಪತ್ರವನ್ನು ಸ್ವೀಕರಿಸಿದೆ ಎನ್ನಲಾಗಿದೆ.
ಹೊಸದಾಗಿ ವಿಶ್ವ ಚಾಂಪಿಯನ್ ಆಗಿರುವ ಭಾರತ ತಂಡವು ಬಾಂಗ್ಲಾದೇಶ ವಿರುದ್ಧ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳಲ್ಲಿ ಸೆಣಸಬೇಕಿತ್ತು. ಈ ಏಕದಿನ ಸರಣಿಯು ಎರಡೂ ತಂಡಗಳಿಗೆ ಐಸಿಸಿ ಮಹಿಳಾ ಏಕದಿನ ಚಾಂಪಿಯನ್‌ಶಿಪ್‌ನ ಆರಂಭಿಕ ಪಂದ್ಯವಾಗಿತ್ತು. ಅಕ್ಟೋಬರ್‌ನಲ್ಲಿ ನವಿ ಮುಂಬೈನಲ್ಲಿ ನಡೆದ ಮಹಿಳಾ ವಿಶ್ವಕಪ್‌ನ ಲೀಗ್ ಹಂತದಲ್ಲಿ ಎರಡೂ ತಂಡಗಳು ಕೊನೆಯ ಬಾರಿಗೆ ಮುಖಾಮುಖಿಯಾಗಿದ್ದವು. ಆದರೆ ಪಂದ್ಯ ಮಳೆಯಿಂದಾಗಿ ಅರ್ಧಕ್ಕೆ ರದ್ದುಗೊಂಡಿತ್ತು.
ಇದನ್ನೂ ಓದಿ: ನಮ್ಮ ಮೆಟ್ರೋ ವಿಸ್ತರಣೆಯಿಂದ ತುಮಕೂರು ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಲಿದೆ- ಸಚಿವ ಡಾ. ಜಿ.ಪರಮೇಶ್ವರ್
ಎರಡೂ ದೇಶಗಳ ನಡುವೆ ನಡೆಯುತ್ತಿರುವ ರಾಜಕೀಯ ಉದ್ವಿಗ್ನತೆಗಳು ಸರಣಿ ನಿಗದಿಯಂತೆ ಮುಂದುವರಿಯದಿರಲು ಪ್ರಮುಖ ಅಂಶವಾಗಿರಬಹುದು ಎಂದು ತಿಳಿದುಬಂದಿದೆ. ಪಂದ್ಯಗಳು ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮತ್ತು ಕಟಕ್‌ನ ಬಾರಾಬತಿ ಕ್ರೀಡಾಂಗಣದಲ್ಲಿ ನಡೆಯಬೇಕಿತ್ತು. ಭಾರತ ಮತ್ತು ಬಾಂಗ್ಲಾದೇಶ ಸರಣಿ ಮುಂದೂಡಲ್ಪಟ್ಟಿದ್ದು ಇದೇ ಮೊದಲಲ್ಲ. ಆಗಸ್ಟ್ ಆರಂಭದಲ್ಲಿ, ಭಾರತದ ಪುರುಷರ ತಂಡದ ಏಕದಿನ ಸರಣಿಯ ಬಾಂಗ್ಲಾದೇಶ ಪ್ರವಾಸವನ್ನು ಮುಂದೂಡಲಾಗಿತ್ತು.
ವಿದ್ಯಾರ್ಥಿಗಳ ದಂಗೆಗೆ ಬೆಚ್ಚಿ ಭಾರತಕ್ಕೆ ಕಳೆದ ವರ್ಷ ಪಲಾಯನ ಮಾಡಿ ಭಾರತಕ್ಕೆ ಬಂದ ಬಾಂಗ್ಲಾದೇಶಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಬಾಂಗ್ಲಾ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ ಸೋಮವಾರ ಗಲ್ಲು ಶಿಕ್ಷೆ ವಿಧಿಸಿದೆ. ಅವರ ಅವಾಮಿ ಲೀಗ್ ನೇತೃತ್ವದ ಸರ್ಕಾರ ಪತನಕ್ಕೆ ಕಾರಣವಾದ ವಿದ್ಯಾರ್ಥಿಗಳ ನೇತೃತ್ವದ ದಂಗೆ ಹತ್ತಿಕ್ಕಲು ನರಮೇಧ ನಡೆಸಿದ ಹಾಗೂ ‘ಮಾನವೀಯತೆ ವಿರುದ್ಧದ ಅಪರಾಧ’ ಎಸಗಿದ ಆರೋಪ ಹೊರಿಸಿ ಅವರಿಗೆ ಸಜೆ ನೀಡಲಾಗಿದೆ.

ನೋಡಿರಿ

