ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಡಿವೈನ್ ಸ್ಟಾರ್! – ಡಿಸಿಎಂ ಡಿಕೆಶಿ ಭೇಟಿಯಾದ ರಿಷಭ್

ಡಿವೈನ್ ಸ್ಟಾರ್ ರಿಷಭ್ ಶೆಟ್ಟಿ ಸದ್ಯ ಕಾಂತಾರ ಚಾಪ್ಟರ್ 1 ನ ಸಕ್ಸಸ್ ನ ಖುಷಿಯಲ್ಲಿದ್ದಾರೆ. ಬಾಕ್ಸ್ ಆಫೀಸ್‌ನಲ್ಲಿ ದಾಖಲೆ ಬರೆದಿದೆ ಈ ಸಿನಿಮಾ. ಸುಮಾರು 850 ಕೋಟಿ ರೂ.ಗೂ ಅಧಿಕ ಹಣವನ್ನು ಗಳಿಸಿದೆ. ಕೆಜಿಎಫ್ 2 ನಂತರ ಅತೀ ಹೆಚ್ಚು ಗಳಿಕೆ ಮಾಡಿದ ಕನ್ನಡ ಸಿನಿಮಾ ಎಂಬ ಖ್ಯಾತಿಯನ್ನು ಗಿಟ್ಟಿಸಿಕೊಂಡಿದೆ. ಅಲ್ಲದೆ, 2025ರಲ್ಲಿ ಅತೀ ಹೆಚ್ಚು ಗಳಿಕೆ ಮಾಡಿದ ಭಾರತೀಯ ಸಿನಿಮಾ ಎಂಬ ಹೆಗ್ಗಳಿಕೆ ಈ ಚಿತ್ರಕ್ಕಿದೆ. ಇದೀಗ ಡಿವೈನ್ ಸ್ಟಾರ್ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನ ಭೇಟಿ ಆಗಿದ್ದಾರೆ. ಸದ್ಯ ಈ ವಿಚಾರ ಭಾರಿ ಚರ್ಚೆಯಲ್ಲಿದೆ.
ಇದನ್ನೂ ಓದಿ: ಕ್ಲೈಮ್ಯಾಕ್ಸ್‌ಗೆ ಬಂತು ಧರ್ಮಸ್ಥಳ ಬುರುಡೆ ಕೇಸ್! – ಬುರುಡೆ ಗ್ಯಾಂಗ್‌ಗೆ ಕಾದಿದ್ಯಾ ಸಂಕಷ್ಟ?
ರಿಷಭ್ ಶೆಟ್ಟಿ ಅವರನ್ನ ಭೇಟಿ ಆಗಿರುವ ಫೋಟೋವನ್ನ ಡಿಕೆ ಶಿವಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ನನ್ನ ಗೃಹಕಚೇರಿಯಲ್ಲಿ ಖ್ಯಾತ ನಟ ರಿಷಬ್ ಶೆಟ್ಟಿಯವರು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಈ ವೇಳೆ ಕಾಂತಾರ: ಒಂದು ದಂತಕಥೆ – ಅಧ್ಯಾಯ 1ರ ಚಿತ್ರ ಯಶಸ್ವಿಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದೆ. ನಮ್ಮ ನೆಲಮೂಲದ ಆಚಾರ-ವಿಚಾರ, ಸಂಪ್ರದಾಯ, ಸಂಸೃತಿಯನ್ನು ಇಡೀ ಪ್ರಪಂಚಕ್ಕೆ ಪರಿಚಯಿಸಿರುವ ರಿಷಬ್ ಶೆಟ್ಟಿ ಅವರ ಕಾರ್ಯವೈಖರಿ ಶ್ಲಾಘನೀಯ. ಮುಂದಿನ ಅವರ ಚಿತ್ರರಂಗದ ಪಯಣಕ್ಕೆ ಒಳ್ಳೆಯದಾಗಲಿ, ಅವರು ಇನ್ನೂ ಎತ್ತರಕ್ಕೆ ಬೆಳೆಯಲಿ ಎಂದು ಶುಭಹಾರೈಸಿದೆ ಎಂದು ಬರೆದುಕೊಂಡಿದ್ದಾರೆ.
ಸದ್ಯ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭೇಟಿಯಾಗಿರುವುದಕ್ಕೆ ನಿಖರ ಕಾರಣದ ಬಗ್ಗೆ ರಿಷಬ್ ಎಲ್ಲಿಯೂ ಹೇಳಿಕೊಂಡಿಲ್ಲ. ಇದೀಗ ರಿಷಭ್ ಶೆಟ್ಟಿ ಡಿಕೆಶಿ ಅವರನ್ನ ಮೀಟ್ ಮಾಡಿರೋದು ಭಾರಿ ಕುತೂಹಲ ಮೂಡಿಸಿದೆ. ಡಿವೈನ್ ಸ್ಟಾರ್ ಭವಿಷ್ಯದಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ಅನ್ನೋ ಕ್ಯೂರಿಯಾಸಿಟಿ ಅಭಿಮಾನಿಗಳಲ್ಲಿದೆ.

ನೋಡಿರಿ

