ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ! – ದೆಹಲಿಗೆ ಹಾರಿದ ಡಿಕೆಶಿ ಬೆಂಬಲಿಗರು

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿಗರು ಏಕಾಏಕಿ ದೆಹಲಿಗೆ ಹಾರಿದ್ದಾರೆ.
ಇದನ್ನೂ ಓದಿ: ನಾಯಿ ಕಚ್ಚಿ ಸಾವನ್ನಪ್ಪಿದ್ರೆ 5 ಲಕ್ಷ ಪರಿಹಾರ ಘೋಷಿಸಿದ ರಾಜ್ಯ ಸರ್ಕಾರ!
ಬಿಹಾರ ಚುನಾವಣೆ ಬಳಿಕ ಕರ್ನಾಟಕ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ಸಂಭವಿಸಲಿದೆ ಎಂಬ ಚರ್ಚೆ ನಡೆಯುತ್ತಿತ್ತು. ಆದರೆ, ಕಾಂಗ್ರೆಸ್ ಸರ್ಕಾರಕ್ಕೆ ಎರಡೂವರ್ಷ ತುಂಬಿದ ಸಂದರ್ಭದಲ್ಲಿ ಚಾಮರಾಜನಗರಕ್ಕೆ ಗುರುವಾರ ಭೇಟಿ ನೀಡಿರುವ ಸಿಎಂ ಸಿದ್ದರಾಮಯ್ಯ ಅವರು, ನನ್ನ ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿದೆ ಎಂದು ಹೇಳುವ ಮೂಲಕ ಉಳಿದ ಅವಧಿಯೂ ನಾನೇ ಸಿಎಂ ಎಂದು ಪರೋಕ್ಷವಾಗಿ ಡಿಕೆಶಿ ಬಣಕ್ಕೆ ಸಂದೇಶ ರವಾನಿಸಿದ್ದಾರೆ. ಆದ್ರೆ ಇವೆಲ್ಲದ್ರ ನಡುವೆ ಡಿಸಿಎಂ ಬಣದ ನಾಯಕರು ದೆಹಲಿ ಹಾರಿದ್ದಾರೆ.
ಸಚಿವ ಚೆಲುವರಾಯಸ್ವಾಮಿ, ಇಕ್ಬಾಲ್ ಹುಸೇನ್, ಮಾಗಡಿ ಬಾಲಕೃಷ್ಣ, ಗುಬ್ಬಿ ಶ್ರೀನಿವಾಸ, ಶಾಸಕ ರವಿ ಗಣಿಗ, ಶಾಸಕ ಉದಯ್ ಗೌಡ ಹೈಕಮಾಂಡ್ ಭೇಟಿಗೆ ತೆರಳಿದ್ದು ದೆಹಲಿಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ರಾಜ್ಯದ ಪ್ರಸಕ್ತ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಸಚಿವ ಶಾಸಕರು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಭೇಟಿಗೆ ಸಮಯ ಕೇಳಿದ್ದಾರೆ. ಇವತ್ತು 8 ಜನರ ಒಂದು ತಂಡ ಪ್ರಯಾಣ ಬೆಳೆಸಿದರೆ ನಾಳೆ 7 ಜನರ ತಂಡ ದೆಹಲಿಗೆ ಪ್ರಯಾಣ ಬೆಳೆಸಲು ಪ್ಲ್ಯಾನ್ ಮಾಡಿಕೊಂಡಿದೆ.
ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೆಸ್ನಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳಗಣಿಗೆಗಳು ಗರಿಗೆದರಿವೆ.

ನೋಡಿರಿ

