7 ಕೋಟಿ ದರೋಡೆ ಕೇಸ್ನ ಮಾಸ್ಟರ್‌ಮೈಂಡ್ ಒಬ್ಬನಲ್ಲ.. ಇಬ್ಬರು! – ಸೀಜ್ ಆಯ್ತು 5.30 ಕೋಟಿ ರೂ. ಹಣ!

ಹಾಡಹಗಲೇ ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣದ ತನಿಖೆ ವೇಗವಾಗಿ ಸಾಗ್ತಿದೆ. ಇದೀಗ ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನ ಪೊಲೀಸರು ಅರೆಸ್ಟ್ ಮಾಡಿದ್ದು, 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಮತ್ತೆ ಟ್ರಾಫಿಕ್ ಫೈನ್ 50% ರಿಯಾಯತಿ ಘೋಷಣೆ – ಲಾಸ್ಟ್ ಡೇಟ್ ಯಾವಾಗ?
ಬೆಂಗಳೂರಿನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳ ಪತ್ತೆಗೆ ನಾಲ್ವರು ಜಂಟಿ ಪೊಲೀಸ್ ಆಯುಕ್ತರು, 18 ಡಿಸಿಪಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈಗಾಗಲೇ ಇನ್ನೋವಾ ಕಾರು ಗುರುವಾರ ತಿರುಪತಿಯಲ್ಲಿ ಸಿಕ್ಕಿದ್ದು, ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬೆಂಗಳೂರಿನಲ್ಲಿ ಓಡಾಡುವಾಗ ಕಲ್ಯಾಣನಗರದ ಸ್ವಿಫ್ಟ್ ಕಾರಿನ ನಕಲಿ ನಂಬರ್ ಪ್ಲೇಟ್ ಬಳಸಿದ್ದ ದರೋಡೆಕೋರರು, ಕರ್ನಾಟಕದ ಗಡಿ ದಾಟುತ್ತಿದ್ದಂತೆ ಉತ್ತರಪ್ರದೇಶ ನೋಂದಣಿಯ ನಂಬರ್ ಪ್ಲೇಟ್ ಇನ್ನೋವಾ ಕಾರಿಗೆ ಅಳವಡಿಸಿದ್ದರು. ದರೋಡೆಕೋರರು ಓಡಾಡಿದ ರಸ್ತೆಯುದ್ದಕ್ಕೂ ಸಿಸಿಟಿವಿ, ಮೊಬೈಲ್ ಲೊಕೇಷನ್ ಆಧರಿಸಿ ಕಾರ್ಯಾರಚಣೆ ನಡೆಸಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಹಿಡಿದಿದ್ದರು. ಇದೀಗ ಏಳು ಕೋಟಿ ರೂ. ನಗದು ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಸಿಎಂಎಸ್ ಮಾಜಿ ನೌಕರ ಝೆವಿಯರ್‌ನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪೊಲೀಸರು ಆಂಧ್ರಪ್ರದೇಶದಲ್ಲಿ 5 ಕೋಟಿ 30 ಲಕ್ಷ ನಗದನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸಿಎಂಎಸ್‌ನ ಮಾಜಿ ನೌಕರ ಝೆವಿಯರ್ ಮತ್ತು ಪೊಲೀಸ್ ಕಾನ್ಸ್ಟೇಬಲ್ ಅಣ್ಣಪ್ಪ ಸ್ನೇಹಿತರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ. ಇನ್ನು ಉಳಿದ ಹಣದ ಸಮೇತ ಆರೋಪಿಗಳು ಪರಾರಿಯಾಗಿದ್ದು ಹಣಕ್ಕಾಗಿ ಮತ್ತು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬಾತನನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವನೇ ಹುಡುಗರನ್ನು ದರೋಡೆಗೆ ಸಿದ್ಧಪಡಿಸಿದ್ದ ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.
ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ಗ್ಯಾಂಗ್ ರೆಡಿ ಮಾಡಿದ್ದ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್, ದರೋಡೆ ಕುರಿತು ಪಕ್ಕಾ ತರಬೇತಿ ನೀಡಿದ್ದ. ಹೇಗೆ ರಾಬರಿ ಮಾಡಬೇಕು, ಹೇಗೆ ತಪ್ಪಿಸಿಕೊಳ್ಳಬೇಕೆಂದು ಟ್ರೈನಿಂಗ್ ಕೂಡ ಕೊಟ್ಟಿದ್ದ. ಪೊಲೀಸರು ಹೇಗೆ ಪತ್ತೆ ಕೆಲಸ ಮಾಡುತ್ತಾರೆಂದು ಸಹ ತಿಳಿಸಿದ್ದ ಎನ್ನಲಾಗಿದೆ. ಅದರಂತೆ ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ ತಂಡ 7.11 ಕೋಟಿ ರೂ. ದರೋಡೆ ಮಾಡಿದೆ. ಸಿಎಂಎಸ್ ಸೆಕ್ಯೂರಿಟಿ ಎಜೆನ್ಸಿಯ ಮಾಜಿ ಉದ್ಯೋಗಿ ಕೂಡ ದರೋಡೆಗೆ ಸಾಥ್ ಕೊಟ್ಟಿದ್ದಾನೆ ಎಂದು ತನಿಖೆ ವೇಳೆ ತಿಳಿದುಬಂದಿದೆ.

ನೋಡಿರಿ

