ಪೋಕ್ಸೊ ಕೇಸ್ನಲ್ಲಿ ಮುರುಘಾ ಶ್ರೀಗಳಿಗೆ ಬಿಗ್ ರಿಲೀಫ್! – ಮೊದಲ ಪ್ರಕರಣದಲ್ಲಿ ಖುಲಾಸೆಗೊಳಿಸಿದ ಚಿತ್ರದುರ್ಗ ಕೋರ್ಟ್

ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಮೊದಲ ಕೇಸ್ನಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇದೀಗ ಕೋರ್ಟ್ ತೀರ್ಪು ಪ್ರಕಟವಾಗಿದ್ದು, ಮೊದಲ ಪ್ರಕರಣದಲ್ಲಿ ಮುರುಘಾ ಶ್ರೀಗಳು ಖುಲಾಸೆಗೊಂಡಿದ್ದಾರೆ. 2ನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯದ ಮುರುಘಾ ಮಠದ ಶಿವಮೂರ್ತಿ ಸ್ವಾಮಿಯನ್ನು ನಿರ್ದೋಷಿ ಎಂದು ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ: ಈತನಿಗೆ ಹೆಂಡ್ತಿ ಕಂಡ್ರೆ ಭಯ! – ಬೈಕ್ ಹಿಂದೆ ಬರೆದ ಸಾಲು ನೋಡಿದ್ರೆ ಶಾಕ್ ಆಗ್ತೀರಾ!
ಚಿತ್ರದುರ್ಗದಲ್ಲಿರುವ ಮುರುಘಾ ಮಠದ ಪೀಠಾಧಿಪತಿಯಾಗಿದ್ದ ಶಿವಮೂರ್ತಿ ಸ್ವಾಮೀಜಿ ವಿರುದ್ಧ ಪೋಕ್ಸ್ ಪ್ರಕರಣ ದಾಖಲಾಗಿತ್ತು. 2022ರ ಆಗಸ್ಟ್ 26ರಂದು ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮುರುಘಾ ಮಠದ ವಸತಿ ನಿಲಯದಲ್ಲಿದ್ದ ಇಬ್ಬರು ಅಪ್ರಾಪ್ತೆಯರ ಹೇಳಿಕೆಯನ್ನಾಧರಿಸಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಎ1 ಮುರುಘಾಶ್ರೀ, ಎ2 ಲೇಡಿ ವಾರ್ಡನ್ ರಶ್ಮಿ, ಎ3 ಬಸವಾದಿತ್ಯ, ಎ4 ಮ್ಯಾನೇಜರ್ ಪರಮಶಿವಯ್ಯ, ಎ5 ವಕೀಲ ಗಂಗಾಧರಯ್ಯ ವಿರುದ್ಧ ಕೇಸ್ ದಾಖಲಾಗಿತ್ತು. ನಂತರ ಆಗಸ್ಟ್ 26ರಂದು ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣ ವರ್ಗಾವಣೆಯಾಗಿತ್ತು. 2022ರ ಸೆಪ್ಟೆಂಬರ್ 1ರಂದು ಮುರುಘಾ ಶ್ರೀ ಬಂಧನವಾಗಿತ್ತು. ವರ್ಷಗಳ ಸುದೀರ್ಘ ತನಿಖೆ ಬಳಿಕ ಚಿತ್ರದುರ್ಗದ 2ನೇ ಜಿಲ್ಲಾ ಅಪರ ಮತ್ತು ಸತ್ರ ನ್ಯಾಯಾಲಯದ ನ್ಯಾ.ಗಂಗಾಧರಪ್ಪ ಚನ್ನಬಸಪ್ಪ ಹಡಪದ್ ಅವರಿದ್ದ ಪೀಠ ನಿರ್ದೋಷಿ ಅಂತ ತೀರ್ಪು ಪ್ರಕಟಿಸಿದೆ. ಇದರೊಂದಿಗೆ ಮೊದಲ ಪ್ರಕರಣ ಖುಲಾಸೆಯಾಗಿದೆ. ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದರೆ ಮುರುಘಾ ಶ್ರೀಗಳಿಗೆ ಕನಿಷ್ಠ 20 ವರ್ಷ ಶಿಕ್ಷೆಯಾಗುವ ಸಾಧ್ಯತೆ ಇತ್ತು.

ನೋಡಿರಿ

