ರಾಜ್ಯದಲ್ಲಿ ಕುರ್ಚಿ ಕದನ – ಸಿಎಂ ತವರಿನಲ್ಲಿ ಡಿಕೆಶಿ ಪರ ಬ್ಯಾಟ್ ಬೀಸಿದ ಒಕ್ಕಲಿಗ ಸಂಘ!

ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿದೆ. ಸದ್ಯ ಈ ವಿಚಾರ ಹೈಕಮಾಂಡ್ ಅಂಗಳದಲ್ಲಿದೆ. ಡಿಸಿಎಂ ಡಿಕೆ ಶಿವಕುಮಾರ್ ಬಣ ಸಿದ್ಧರಾಮಯ್ಯ ಕುರ್ಚಿ ಬಿಟ್ಟುಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಇದ್ರ ಜೊತೆಗೆ ಆದಿ ಚುಂಚನಗಿರಿ ಶ್ರೀಗಳು ಡಿ.ಕೆ ಶಿವಕುಮಾರ್ ಸಿಎಂ ಆಗವಬೇಕು ಎಂದು ಹೇಳಿಕೆ ನೀಡಿದ್ದರು. ಇದೀಗ ಒಕ್ಕಲಿಗರ ಸಂಘ ಕೂಡ ಡಿಕೆಶಿ ಪರ ಬ್ಯಾಟ್ ಬೀಸುತ್ತಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ ಕುರ್ಚಿ ಕದನ – ದೆಹಲಿಗೆ ಹೊರಟ ಸಿಎಂ ಸಿದ್ದರಾಮಯ್ಯ ಬಣದ 6 ಸಚಿವರು
ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಇತ್ತೀಚೆಗೆ ಬಹಿರಂಗವಾಗಿಯೇ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದರು. ಒಕ್ಕಲಿಗೆ ಸಮುದಾಯದ ನಾಯಕರೊಬ್ಬರು ಕರ್ನಾಟಕದ ಮುಖ್ಯಮಂತ್ರಿ ಆಗಬೇಕು ಎಂದು ಸ್ವಾಮೀಜಿ ಹೇಳಿಕೆ ನೀಡಿದ್ದರು. ಇದ್ರ ಬೆನ್ನಲ್ಲೇ ಸಿಎಂ ತವರಿನಲ್ಲಿ ಒಕ್ಕಲಿಗ ಸಮುದಾಯದ ಮುಖಂಡರು ಡಿ.ಕೆ ಶಿವಕುಮಾರ್ ಪರವಾಗಿ ಬ್ಯಾಟ್ ಬೀಸಿದ್ದಾರೆ. ಖಾಸಗಿ ಹೋಟೆಲ್‌ನಲ್ಲಿ ಸಭೆ ನಡೆಸಿ ಡಿಕೆಶಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಮೈಸೂರು ಒಕ್ಕಲಿಗರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಒಕ್ಕಲಿಗ ಮುಖಂಡರ ಸಭೆ ನಡೆಸಿದ್ದು ಸಭೆಯಲ್ಲಿ 50ಕ್ಕೂ ಹೆಚ್ಚು ಒಕ್ಕಲಿಗ ಮುಖಂಡರು ಭಾಗಿಯಾಗಿದ್ದರು. ಸಭೆಯಲ್ಲಿ ಜೆಡಿಎಸ್ ಬಿಜೆಪಿ-ಕಾಂಗ್ರೆಸ್ ಪಕ್ಷದ ಒಕ್ಕಲಿಗ ಮುಖಂಡರು ಇದ್ದರು. ಡಿ.ಕೆ ಶಿವಕುಮಾರ್‌ಗೆ ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಡಬೇಕು. ಸಿದ್ದರಾಮಯ್ಯ ಅಧಿಕಾರ ಬಿಟ್ಟುಕೊಟ್ಟರೆ ಒಕ್ಕಲಿಗ ಸಮುದಾಯ ಸಿದ್ದರಾಮಯ್ಯ ಅವರನ್ನ ಗೌರವಿಸುತ್ತದೆ. ಡಿಕೆಶಿಗೆ ಅನ್ಯಾಯ ಆದ್ರೆ ಬೀದಿಗಿಳಿದು ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದ್ದಾರೆ.

ನೋಡಿರಿ

