ಕಟ್ಟಡದಲ್ಲಿ ಭೀಕರ ಬೆಂಕಿ ಅವಘಡ – ಸಾವಿನ ಸಂಖ್ಯೆ 94ಕ್ಕೆ ಏರಿಕೆ.. 200ಕ್ಕೂ ಅಧಿಕ ಮಂದಿ ನಾಪತ್ತೆ!

ಹಾಂಗ್ಕಾಂಗ್ನ ತೈಪೋ ಜಿಲ್ಲೆಯಲ್ಲಿ ನಡೆದ ಅಗ್ನಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ ಏರಿಕೆಯಾಗಿದೆ. ಗುರುವಾರವೂ ಕಟ್ಟದಲ್ಲಿ ಬೆಂಕಿ ವ್ಯಾಪಿಸಿದ್ದರಿಂದ ಸಾವನ್ನಪ್ಪಿರುವವರ ಸಂಖ್ಯೆ 94ಕ್ಕೆ ಏರಿಕೆಯಾಗಿದೆ.
ಇದನ್ನೂ ಓದಿ: ರಾಜ್ಯದಲ್ಲಿ ಕುರ್ಚಿ ಕದನ – ಸಿಎಂ ತವರಿನಲ್ಲಿ ಡಿಕೆಶಿ ಪರ ಬ್ಯಾಟ್ ಬೀಸಿದ ಒಕ್ಕಲಿಗ ಸಂಘ!
ಹಾಂಗ್ಕಾಂಗ್ನ ತೈಪೊ ಜಿಲ್ಲೆಯ ವಾಂಗ್ ಫುಕ್ ಕೋರ್ಟ್ ಎಂಬ 8 ಬಹುಮಹಡಿ ಕಟ್ಟಡಗಳ ಸಂಕೀರ್ಣದಲ್ಲಿ ಸಂಭವಿಸಿದ ಅಗ್ನಿ ಅವಘಡ ಸಂಭವಿಸಿದೆ. ಸಾವಿನ ಸಂಖ್ಯೆ 94ಕ್ಕೆ ಏರಿಕೆಯಾಗಿದೆ. ಅನೇಕರು ನಾಪತ್ತೆಯಾಗಿದ್ದು, ಸಾವುನೋವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ. ಸದ್ಯ ಕಟ್ಟಡಲ್ಲಿ ವ್ಯಾಪಿಸಿರುವ ಬೆಂಕಿಯನ್ನ ನಂದಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುಮಾರು 2,000 ಅಪಾರ್ಟ್ಮೆಂಟ್ಗಳನ್ನ ಹೊಂದಿರುವ ಈ ಬೃಹತ್ ವಸತಿ ಸಮುಚ್ಚಯದಲ್ಲಿ ದುರಸ್ತಿ ಮತ್ತು ನಿರ್ವಹಣಾ ಕಾರ್ಯಗಳು ನಡೆಯುತ್ತಿದ್ದವು. ಇದಕ್ಕಾಗಿ ಕಟ್ಟಡಗಳ ಹೊರಭಾಗದಲ್ಲಿ ಬಿದಿರಿನ ಅಟ್ಟಣಿಗೆ ರಚಿಸಲಾಗಿತ್ತು. ಈ ಬಿದಿರಿನ ರಚನೆಗಳಿಗೆ ಮೊದಲು ಬೆಂಕಿ ಹೊತ್ತಿಕೊಂಡಿದ್ದು, ಬಲವಾದ ಗಾಳಿ ಮತ್ತು ಉರಿಯುತ್ತಿದ್ದ ಅವಶೇಷಗಳು ತೂರಿಬಂದ ಪರಿಣಾಮ, ಪಕ್ಕದ 7 ಕಟ್ಟಡಗಳಿಗೂ ಬೆಂಕಿ ವ್ಯಾಪಿಸಿತ್ತು.
ಘಟನೆಗೆ ಸಂಬಂಧಿಸಿದಂತೆ ಹಾಂಗ್ಕಾಂಗ್ ಪೊಲೀಸರು ತ್ವರಿತ ತನಿಖೆ ಆರಂಭಿಸಿದ್ದು, ನಿರ್ಲಕ್ಷ್ಯದ ನರಹತ್ಯೆ ಆರೋಪದ ಮೇಲೆ ಮೂವರು ಶಂಕಿತರನ್ನು ಬಂಧಿಸಿದ್ದಾರೆ.

ನೋಡಿರಿ

