ಮೆಕ್ಕೆಜೋಳ ಮತ್ತು ಹೆಸರು ಕಾಳು ಬೆಳೆಗಳಿಗೆ ಬೆಂಬಲ ಬೆಲೆ ನೀಡಿ- ಮೋದಿಗೆ ಪತ್ರ ಕೊಟ್ಟ ದಿನೇಶ್ ಗುಂಡೂರಾವ್

ಮೆಕ್ಕೆಜೋಳ ಮತ್ತು ಹೆಸರು ಕಾಳು ಬೆಳೆಗಳಿಗೆ ಬೆಂಬಲ ಬೆಲೆ ನೀಡಿ-  ಮೋದಿಗೆ ಪತ್ರ ಕೊಟ್ಟ ದಿನೇಶ್ ಗುಂಡೂರಾವ್

 ಸಿಎಂ ಸಿದ್ದರಾಮಯ್ಯ ಅವರು ಬರೆದಿರುವ ಮನವಿ ಪತ್ರವನ್ನು ಉಡುಪಿಗೆ ಬಂದ ಮೋದಿಗೆ  ಸಚಿವ ದಿನೇಶ್‌ ಗುಂಡೂರಾವ್‌  ನೀಡಿದ್ರು. . ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಧಾನಿಗಳನ್ನು ಸ್ವಾಗತಿಸಿದ ವೇಳೆ ಆರೋಗ್ಯ ಸಚಿವರು ಮನವಿ ಪತ್ರ ನೀಡಿದ್ರು. ಮೆಕ್ಕೆಜೋಳ ಮತ್ತು ಹೆಸರು ಕಾಳು ಬೆಳೆಗಳಿಗೆ ಬೆಂಬಲ ಬೆಲೆ ನೀಡಿ ರೈತರ‌ ಬೆಳೆಗಳನ್ನು ಖರೀದಿಸಲು ಕ್ರಮ ಕೈಗೊಳ್ಳಬೇಕು ಎಂದು  ಪತ್ರದಲ್ಲಿ ತಿಳಿಸಿದ್ದಾರೆ.

ಮೋದಿ ಕೊಟ್ಟ ಪತ್ರದ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ  ಸಚಿವ ದಿನೇಶ್‌ ಗುಂಡೂರಾವ್‌  ಮಾಹಿತಿ ಹಂಚಿಕೊಂಡಿದ್ದಾರೆ. ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಂಗಳೂರಿಗೆ ಆಗಮಿಸಿದ್ದು, ಈ ವೇಳೆ ಅವರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಹೃದಯಪೂರ್ವಕವಾಗಿ ಸ್ವಾಗತಿಸಿದೆ. ಇದೇ ವೇಳೆ ಅವರಿಗಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಬರೆದಿರುವ ಪತ್ರವನ್ನು ನೀಡಲಾಗಿದೆ.

ಇದನ್ನೂ ಓದಿ: ರಸ್ತೆಯಲ್ಲಿ ಮಹಿಳೆಗೆ ಸಿಕ್ತು ಕಂತೆ ಕಂತೆ ಹಣ! – 10 ಲಕ್ಷ ದುಡ್ಡು ಏನಾಯ್ತು ಗೊತ್ತಾ?

ರೈತರ ಬೆಳೆಗಳಿಗೆ ಬೆಂಬಲ ಬೆಲೆಯಿಲ್ಲದೆ ತೀವ್ರ ಸಂಕಷ್ಟಕ್ಕೆ ಗುರಿಯಾಗಿರುವುದನ್ನು ತಿಳಿಸಿ, ಬೆಂಬಲ ಬೆಲೆಯಂತೆ ಬೆಳೆ ಖರೀದಿ ವ್ಯವಸ್ಥೆ ನಿರ್ಮಿಸುವಲ್ಲಿ ಕೇಂದ್ರ ಸರ್ಕಾರ ಇಚ್ಛಾಶಕ್ತಿ ತೋರಿಸಬೇಕೆಂದು ಮನವಿ ಮಾಡಿರುವ ಪತ್ರ ಇದಾಗಿದೆ ಎಂದು‌ ತಿಳಿಸಿ, ಪರಿಸ್ಥಿತಿಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವರಿಕೆ ಮಾಡಿಕೊಡಲಾಯಿತು. ಈ ಪತ್ರದಲ್ಲಿ‌ರುವಂತೆ ನಮ್ಮ ರಾಜ್ಯದ ರೈತರ ಸಂಕಷ್ಟವನ್ನು ಕೂಲಂಕುಷವಾಗಿ ಮಾನ್ಯ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ವಿವರಿಸಿದ್ದೇನೆ  ಅಂತ ಪೋಸ್ಟ್ ಹಾಕಿ ತಿಳಿಸಿದ್ದಾರೆ.

ಪತ್ರದಲ್ಲಿ ಏನಿದೆ? 

ನಮ್ಮ ಲಕ್ಷಾಂತರ ರೈತರು ಜೀವನೋಪಾಯಕ್ಕಾಗಿ ಕೃಷಿ ಮಾಡಿರುವ ಬೆಳೆಗಳನ್ನು ಖರೀದಿಸುತ್ತಿರುವ ಬೆಲೆ ಕೇಂದ್ರ ಸರ್ಕಾರ ಘೋಷಿಸಿರುವ ಕನಿಷ್ಠ ಬೆಂಬಲ ಬೆಲೆಗಿಂತ (MSP) ಬಹಳಷ್ಟು ಕಡಿಮೆ ಇದ್ದು, ಕೃಷಿಕರಲ್ಲಿ ವ್ಯಾಪಕ ಸಂಕಷ್ಟವನ್ನು ಸೃಷ್ಟಿಸಿದೆ. ಈ ಮುಂಗಾರು ಹಂಗಾಮಿನಲ್ಲಿ ಕರ್ನಾಟಕವು 17.94 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು 4.16 ಲಕ್ಷ ಹೆಕ್ಟೇರ್‌ಗಳಿಗಿಂತ ಹೆಚ್ಚು ಪ್ರದೇಶದಲ್ಲಿ ಹೆಸರು ಕಾಳನ್ನು ಬೆಳೆದಿದ್ದು, ರಾಜ್ಯವು 54.74 ಲಕ್ಷ ಮೆಟ್ರಿಕ್ ಟನ್‌ಗಳಿಗಿಂತ ಹೆಚ್ಚು ಮೆಕ್ಕೆಜೋಳ ಮತ್ತು 1.983 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಹೆಸರು ಕಾಳಿನ ಅಂದಾಜು ಉತ್ಪಾದನೆಯನ್ನು ನಿರೀಕ್ಷಿಸುತ್ತಿದೆ. ಇದು ಸಮೃದ್ಧಿಗೆ ಒಂದು ಅವಕಾಶವಾಗಿರಬೇಕಾಗಿದ್ದರೂ, ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಗಳು ಇದನ್ನು ಬಿಕ್ಕಟ್ಟಾಗಿ ಪರಿವರ್ತಿಸಿವೆ. ಕೇಂದ್ರ ಸರ್ಕಾರವು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ ₹2400 ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ ₹8768 ರಂತೆ MSP ಘೋಷಿಸಿದ್ದರೂ, ಕರ್ನಾಟಕದಲ್ಲಿ ಪ್ರಸ್ತುತ ಬೆಲೆಗಳು ಮೆಕ್ಕೆಜೋಳಕ್ಕೆ ಪ್ರತಿ ಮೆಟ್ರಿಕ್ ಟನ್‌ಗೆ ₹1600-1800 ಮತ್ತು ಹೆಸರು ಕಾಳಿಗೆ ಪ್ರತಿ ಮೆಟ್ರಿಕ್ ಟನ್‌ಗೆ ₹5400 ಆಗಿದ್ದು, ಇದು ತೀವ್ರ ಮತ್ತು ಆಘಾತಕಾರಿ ಕುಸಿತವಾಗಿದೆ. ಕರ್ನಾಟಕದಲ್ಲಿ ಪ್ರಸ್ತುತ ಮಾರಾಟವಾಗಲು ಅಂದಾಜು 32 ಲಕ್ಷ ಮೆಟ್ರಿಕ್ ಟನ್‌‌ಗಳಷ್ಟು ಮೆಕ್ಕೆಜೋಳ ಲಭ್ಯವಿದೆ. ಆದ್ದರಿಂದ, ಭಾರತ ಸರ್ಕಾರವು ತಕ್ಷಣವೇ ಮಧ್ಯಪ್ರವೇಶಿಸಿ ಈ ಕೆಳಗಿನಂತೆ, ದರ ನಿಗದಿ ಮಾಡುವಂತೆ ವಿನಂತಿ ಮಾಡಲಾಗಿದೆ.

Kishor KV