ರಾಜ್ಯ ಕಾಂಗ್ರೆಸ್‌ನಲ್ಲಿ ಗದ್ದುಗೆ ಗುದ್ಧಾಟ – ಕುರ್ಚಿ ಕದನ ನಿಲ್ಲಿಸಲು ಸೋನಿಯಾ ಗಾಂಧಿ ಎಂಟ್ರಿ!

ರಾಜ್ಯದಲ್ಲಿ ಪವರ್ ಶೇರಿಂಗ್ ಫೈಟ್‌ಗೆ ಕೊಂಚ ವಿಚಾರ ಸಿಕ್ಕಂತೆ ಕಾಣ್ತಿದೆ. ಶನಿವಾರ ಬ್ರೇಕ್ ಫಾಸ್ಟ್ ಮೀಟಿಂಗ್ ಬಳಿಕ ಸಿಎಂ ಸಿದ್ಧರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸುದ್ಧಿಗೋಷ್ಠಿ ನಡೆಸಿ, ನಮ್ಮಿಬ್ಬರ ಮಧ್ಯೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ನಾವಿಬ್ಬರೂ ಒಗ್ಗಟ್ಟಾಗಿ ಇರ್ತೇವೆ ಅಂತ ಹೇಳಿದ್ರು. ಮುಂದಿನ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಹೇಳಿದ್ರು. ಇದೀಗ ಎಲ್ಲರ ಚಿತ್ತ ಹೈಕಮಾಂಡ್ ಮೇಲಿದೆ.
ಇದನ್ನೂ ಓದಿ: 334ಕ್ಕೂ ಹೆಚ್ಚು ಮಂದಿಯನ್ನು ಬಲಿ ಪಡೆದ ದಿತ್ವಾ ಚಂಡಮಾರುತ! – 370 ಕ್ಕೂ ಹೆಚ್ಚು ನಾಪತ್ತೆ
ಕಳೆದ ಒಂದು ತಿಂಗಳಿನಿಂದ ಸಿಎಂ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಶೀತರ ಸಮರ ನಡೆಯುತ್ತಿತ್ತು. ಕೆಲ ನಾಯಕರು ಡಿಸಿಎಂ ಡಿಕೆ ಶಿವಕುಮಾರ್ ಸಿಎಂ ಆಗ್ಬೇಕು ಅಂತ ಪಟ್ಟು ಹಿಡಿದಿದ್ರು. ಇವೆಲ್ಲದ್ರ ನಡುವೆ ಸಿಎಂ ಮುಂದಿನ ನಿರ್ಧಾರ ಹೈಕಮಾಂಡ್ ಮೇಲೆ ಬಿಟ್ಟಿದ್ದಾರೆ. ನಿನ್ನೆ ರಾಜ್ಯದ ಬಿಕ್ಕಟ್ಟಿನ ಬಗ್ಗೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಹೈಕಮಾಂಡ್ ಸಭೆ ನಡೆಯಲಿದೆ ಎಂದು ಹೇಳಲಾಗಿತ್ತು. ನಿನ್ನೆ ಸಭೆ ನಡೆದಿದ್ರೂ, ಕರ್ನಾಟಕದ ರಾಜಕೀಯ ಬೆಳವಣಿಗೆ ವಿಚಾರವಾಗಿ ಯಾವುದೇ ಚರ್ಚೆ ನಡೆದಿಲ್ಲ. ಸಂಸತ್ ಅಧಿವೇಶನ ಅಜೆಂಡಾಗಳ ಬಗ್ಗೆ ಚರ್ಚೆ ನಡೆದಿತ್ತು. ಈ ಬೆನ್ನಲ್ಲೇ ಇಂದು ರಾಜ್ಯದ ವಿದ್ಯಮಾನಗಳ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ , ʻಕೈʼ ನಾಯಕಿ ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿದ್ದಾರೆ ಎಂದು ಹೇಳಲಾಗ್ತಿದೆ.
ಕರ್ನಾಟಕ ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಡೆಯುತ್ತಿರುವ ಫೈಟ್, ಬ್ರೇಕ್ ಫಾಸ್ಟ್ ಮೀಟಿಂಗ್, ಜಂಟಿ ಸುದ್ದಿಗೋಷ್ಠಿ ಬಗ್ಗೆ ಖರ್ಗೆ ಅವರು ಸೋನಿಯಾ ಗಾಂಧಿ ಅವರಿಗೆ ವರದಿ ನೀಡಿದ್ದಾರೆ. ಈ ಬಗ್ಗೆ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ. ಇದಕ್ಕೆ ಶೀಘ್ರವೇ ಪರಿಶೀಲಿಸುವುದಾಗಿ ಸೋನಿಯಾ ಗಾಂಧಿ ತಿಳಿಸಿದ್ದಾರೆ. ಆದ್ರೆ ಸಿಎಂ, ಡಿಸಿಎಂ ದೆಹಲಿ ಬುಲಾವ್ ವಿಚಾರನ್ನ ತಾತ್ಕಾಲಿಕವಾಗಿ ಮುಂದೂಡಿದ್ದಾರೆ ಎನ್ನಲಾಗ್ತಿದೆ. ಇದೀಗ ಕುರ್ಚಿ ಕದನ ಎಲ್ಲಿಗೆ ತಲುಪುತ್ತೆ ಅನ್ನೋ ಕುತೂಹಲ ಎಲ್ಲರನ್ನ ಕಾಡ್ತಿದೆ.

ನೋಡಿರಿ

