ಬೆಂಗಳೂರು ಏರ್‌ಪೋರ್ಟ್‌ನಲ್ಲಿ 58 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ! – ಕಾರಣವೇನು ಗೊತ್ತಾ?

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 58 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ! – ಕಾರಣವೇನು ಗೊತ್ತಾ?

ವಿಮಾನ ಪ್ರಯಾಣ ಮಾಡುವವರಿಗೆ ಮಹತ್ವದ ಸುದ್ದಿಯಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಲಿರುವ ಸುಮಾರು 58 ವಿಮಾನಗಳು ವಿಳಂಬವಾಗಿ ಸಂಚರಿಸುತ್ತಿವೆ ಎಂದು ವರದಿಯಾಗಿದೆ.

ಇದನ್ನೂ ಓದಿ: LKG, UKG ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್!‌ – ಮಧ್ಯಾಹ್ನದ ಬಿಸಿಯೂಟ, ಹಾಲು, ಮೊಟ್ಟೆ, ಹಣ್ಣು ವಿತರಣೆ

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಯನ್ನು ನಿರ್ವಹಿಸುವ ‘ಥರ್ಡ್ ಪಾರ್ಟಿ ಸಿಸ್ಟಂ’ನಲ್ಲಿ ಉಂಟಾದ ಅಡಚಣೆಯಿಂದಾಗಿ ಚೆಕ್-ಇನ್ ಮೇಲೆ ಪರಿಣಾಮವಾಗುತ್ತಿದೆ. ಇದರ ಪರಿಣಾಮವಾಗಿ ಏರ್ ಇಂಡಿಯಾ ಸೇರಿದಂತೆ ಹಲವಾರು ಏರ್​ಲೈನ್ಸ್​​ಗಳ ಕಾರ್ಯಾಚರಣೆಯಲ್ಲಿ ವಿಳಂಬವಾಗುತ್ತಿದೆ ಮಂಗಳವಾರ ಸುಮಾರು 29 ವಿಮಾನಗಳು ವಿಳಂಬವಾಗಿ ಹಾರಾಟ ನಡೆಸಿವೆ. ಅದರಲ್ಲೂ ಇಂಡಿಗೋ ಏರ್​ಲೈನ್ಸ್​ನ ಹೆಚ್ಚಿನ ವಿಮಾನಗಳು ವಿಳಂಬವಾಗಿವೆ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ಮೂಲಗಳ ಪ್ರಕಾರ, ವಿಮಾನಯಾನ ಸಂಸ್ಥೆಗಳ ಕಾರ್ಯಾಚರಣೆಯ ಕಾರಣಗಳಿಂದ ಈ ವಿಳಂಬವಾಗಿದೆ. ವಿಮಾನ ನಿಲ್ದಾಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ.

ಪ್ರಯಾಣಿಕರಿಗೆ ಸುಗಮ ಚೆಕ್-ಇನ್ ಮಾಡಿಕೊಡುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ತಂಡಗಳು ಶ್ರದ್ಧೆಯಿಂದ ಕೆಲಸ ಮಾಡುತ್ತಿವೆ. ವ್ಯವಸ್ಥೆಯನ್ನು ಹಂತಹಂತವಾಗಿ ಪುನಃಸ್ಥಾಪಿಸಲಾಗುತ್ತಿದ್ದರೂ, ಪರಿಸ್ಥಿತಿ ಸಂಪೂರ್ಣವಾಗಿ ಮೊದಲಿನ ಸ್ಥಿತಿಗೆ ಬರುವ ವರೆಗೆ ನಮ್ಮ ಕೆಲವು ವಿಮಾನಗಳು ವಿಳಂಬವಾಗಿ ಸಂಚರಿಸಬಹುದು ಎಂದು ಏರ್ ಇಂಡಿಯಾ ಎಕ್ಸ್‌ ಹೇಳಿಕೆಯಲ್ಲಿ ತಿಳಿಸಿದೆ.

ಇನ್ನು ವಿಮಾನ ನಿಲ್ದಾಣಕ್ಕೆ ಹೊರಡುವ ಮುನ್ನ ತಾವು ಪ್ರಯಾಣಿಸಲಿರುವ ವಿಮಾನದ ಸ್ಥಿತಿಗತಿ ಪರಿಶೀಲಿಸಿಕೊಂಡು ಹೊರಡುವಂತೆ ಪ್ರಯಾಣಿಕರಿಗೆ ಏರ್ ಇಂಡಿಯಾ ಮನವಿ ಮಾಡಿದೆ. ಸ್ಟಾರ್ ಏರ್, ಸ್ಪೈಸ್‌ಜೆಟ್,ಅಕಾಸಾ ಏರ್, ಸಿಂಗಾಪುರ್ ಏರ್‌ಲೈನ್ಸ್, ಬಾಟಿಕ್ ಏರ್ ಮಲೇಷ್ಯಾ, ಏರ್ ಫ್ರಾನ್ಸ್, ಲುಫ್ಥಾನ್ಸ, ವರ್ಜಿನ್ ಅಟ್ಲಾಂಟಿಕ್ ಮತ್ತು ಕುವೈತ್ ಏರ್‌ವೇ ಗಳ ಕೆಲ ವಿಮಾನಗಳು ಕೂಡ ವಿಳಂಬವಾಗಿ ಸಂಚರಿಸಿವೆ ಎಂದು ಮಾಹಿತಿ ನೀಡಿದೆ.

Shwetha M