ಮತ್ತೆ ಟಾಸ್ ಸೋತ ಟೀಮ್ ಇಂಡಿಯಾ –ಏಕದಿನ ಸರಣಿಯಲ್ಲಿ 20 ಏಕದಿನ ಪಂದ್ಯಗಳಲ್ಲಿ ಟಾಸ್ ಗೆಲ್ಲದ ಭಾರತ

ರಾಯ್ಪುರದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಏಕದಿನ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲೂ ಟೀಮ್ ಇಂಡಿಯಾ ಟಾಸ್ ಗೆದ್ದಿಲ್ಲ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಇದನ್ನೂ ಓದಿ:ದೇಶಿ ಅಂಗಳಕ್ಕೆ ಕೊಹ್ಲಿ Re Entry – ವಿಜಯ ಹಝಾರೆ ಟೂರ್ನಿಯಲ್ಲಿ ಆಡೋಕೆ ರೆಡಿಯಾದ ವಿರಾಟ್
ರಾಯ್ಪುರದ ಶಹೀದ್ ವೀರ್ ನಾರಾಯಣ್ ಸಿಂಗ್ ಅಂತಾರಾಷ್ಟ್ರೀಯ ಮೈದಾನದಲ್ಲಿ ಸೌತ್ ಆಫ್ರಿಕಾ ವಿರುದ್ಧ ಭಾರತ ಟಾಸ್ ಸೋತಿದೆ. 2023ರ ಏಕದಿನ ವಿಶ್ವಕಪ್ ಫೈನಲ್ನಿಂದ ಭಾರತ ಇದುವರೆಗೂ ಆಡಿದ ಎಲ್ಲಾ 20 ಏಕದಿನ ಪಂದ್ಯದಲ್ಲೂ ಟಾಸ್ ಗೆಲ್ಲಲು ವಿಫಲವಾಗಿದೆ. ಮೊದಲ ಪಂದ್ಯದಲ್ಲಿ ಸೌತ್ ಆಫ್ರಿಕಾ ಕ್ಯಾಪ್ಟನ್ ಟೆಂಬಾ ಬವುಮಾ ಕಣಕ್ಕಿಳಿದಿರಲಿಲ್ಲ. ಈ ಪಂದ್ಯದಲ್ಲಿ ಬವುಮಾ ಕಣಕ್ಕಿಳಿದಿದ್ದಾರೆ. ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಟೀಮ್ ಇಂಡಿಯಾವನ್ನು ಬೌಲಿಂಗ್ಗೆ ಆಹ್ವಾನಿಸಿದೆ.
ಈ ಪಂದ್ಯವು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈ ಮ್ಯಾಚ್ನಲ್ಲೂ ಟೀಮ್ ಇಂಡಿಯಾ ಗೆದ್ದರೆ 2-0 ಅಂತರದಿಂದ ಸರಣಿ ವಶಪಡಿಸಿಕೊಳ್ಳಲಿದೆ. ಹೀಗಾಗಿ ಇಂದಿನ ಮ್ಯಾಚ್ನಲ್ಲಿ ಗೆದ್ದು ಸರಣಿ ಗೆಲುವಿನ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಾದ ಅನಿವಾರ್ಯತೆ ಸೌತ್ ಆಫ್ರಿಕಾ ತಂಡಕ್ಕಿದೆ.

ನೋಡಿರಿ

