ಕೆಂಗೇರಿ ನಿಲ್ದಾಣದಲ್ಲಿ ಮೆಟ್ರೋ ಟ್ರ್ಯಾಕ್‌ಗೆ ಹಾರಿ ಪ್ರಾಣ ಬಿಟ್ಟ ಯುವಕ – ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

ಕೆಂಗೇರಿ ನಿಲ್ದಾಣದಲ್ಲಿ ಮೆಟ್ರೋ  ಟ್ರ್ಯಾಕ್‌ಗೆ ಹಾರಿ ಪ್ರಾಣ ಬಿಟ್ಟ ಯುವಕ – ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತ

ನಮ್ಮ ಮೆಟ್ರೋ ಟ್ಯ್ರಾಕ್‌ಗೆ ಹಾರಿ ವ್ಯಕ್ತಿಯೊಬ್ಬರು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ  ಕೆಂಗೇರಿ ನಮ್ಮ ಮೆಟ್ರೋ  ಸ್ಟೇಷನ್‌ನಲ್ಲಿ  ಬೆಳಂಬಳಗ್ಗೆ ಈ ಅಹಿತಕರ ಘಟನೆ ನಡೆದಿದೆ.  ಬೆಳಗ್ಗೆ ಸುಮಾರು 8.15ಕ್ಕೆ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬಳಿಕ ನೇರಳೆ ಮಾರ್ಗದಲ್ಲಿ ಮೆಟ್ರೋ ಸಂಚಾರಕ್ಕೆ ತಾತ್ಕಾಲಿಕ ಅಡಚಣೆ ಉಂಟಾಗಿದೆ. ಮೈಸೂರು ರಸ್ತೆ–ಚಲ್ಲಘಟ್ಟ ನಡುವೆ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರಸ್ತುತ ಮೆಟ್ರೋ ರೈಲುಗಳು ವೈಟ್‌ಫೀಲ್ಡ್​​ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ.

ಇದನ್ನೂ ಓದಿ: ಮನೆಯ ದೇವರ ಕೋಣೆಯಲ್ಲಿ ಯಾವ ರೀತಿಯ ಫೋಟೋಗಳನ್ನ ಇಡಬೇಕು ಗೊತ್ತಾ?, ಒಮ್ಮೆ ಇದ್ದನ್ನ ಓದಿ

ಮೃತನನ್ನು ವಿಜಯಪುರ ಜಿಲ್ಲೆ ದೇವರಹಿಪ್ಪರಗಿಯ 25 ವರ್ಷದ ಶಾಂತಗೌಡ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಕೆಂಗೇರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶಾಂತನಗೌಡ ಮೃತದೇಹವನ್ನು ರಾಜರಾಜೇಶ್ವರಿನಗರ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸ್ಥಳಕ್ಕೆ ಮೆಟ್ರೋ ಸುರಕ್ಷತಾ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಆತ್ಮ*ಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ.

ನೇರಳೆ ಮಾರ್ಗದ ಮೆಟ್ರೋ ರೈಲುಗಳು ಪ್ರಸ್ತುತ ಮೈಸೂರು ರಸ್ತೆ ನಿಲ್ದಾಣದವರೆಗೆ ಮಾತ್ರ ಸಂಚರಿಸುತ್ತಿವೆ. ಮೈಸೂರು ರಸ್ತೆ ಮತ್ತು ಚಲಘಟ್ಟ ನಡುವಿನ ಸೇವೆಗಳು ಕೆಂಗೇರಿ ನಿಲ್ದಾಣದಲ್ಲಿ ಸಂಭವಿಸಿದ ಆತ್ಮಹತ್ಯೆ ಪ್ರಯತ್ನದ ಕಾರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ. ಪ್ರಯಾಣಿಕರಿಗೆ ಉಂಟಾದ ತೊಂದರೆಗೆ ವಿಷಾದ ವ್ಯಕ್ತಪಡಿಸುತ್ತೇವೆ ಎಂದು ಬಿಎಂಆರ್​ಸಿಎಲ್ ಎಕ್ಸ್​ ಸಂದೇಶದ ಮೂಲಕ ತಿಳಿಸಿದೆ.

ಪ್ರಯಾಣಿಕರ ಗಮನಕ್ಕೆ

ಪ್ರಸ್ತುತ ಚಲ್ಲಘಟ್ಟ, ರಾಜರಾಜೇಶ್ವರಿನಗರ, ಜ್ಞಾನಭಾರತಿ, ಪಟ್ಟಣಗೆರೆ, ಕೆಂಗೇರಿ ಬಸ್ ಟರ್ಮಿನಲ್, ಪಂತರಪಾಳ್ಯ, ಕೆಂಗೇರಿ ನಿಲ್ದಾಣಗಳಲ್ಲಿ ಮೆಟ್ರೋ ರೈಲು ಸಂಚಾರ ಇರುವುದಿಲ್ಲ. ವೈಟ್‌ಫೀಲ್ಡ್​​ನಿಂದ ಮೈಸೂರು ರಸ್ತೆ ಮೆಟ್ರೋ ನಿಲ್ದಾಣದವರೆಗೆ ರೈಲು ಸಂಚಾರ ಎಂದಿನಂತೆಯೇ ಇರಲಿದೆ. ಕೆಲವೇ ಗಂಟೆಯಲ್ಲಿ ಸಂಚಾರ ಸುಗಮವಾಗಲಿದೆ..

 

Kishor KV