ದತ್ತ ಜಯಂತಿ ಬ್ಯಾನರ್ ತೆರವು ವಿಚಾರಕ್ಕೆ ಹೋಯ್ತು ಕೈ ಕಾರ್ಯಕರ್ತನ ಪ್ರಾಣ – ಸಖರಾಯಪಟ್ಟಣ ಬಂದ್, ಬಿಗಿ ಭದ್ರತೆ

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಉಂಟಾದ ಗಲಾಟೆ ಕೊ*ಲೆಯೊಂದಿಗೆ ಅಂತ್ಯವಾಗಿದೆ. 40 ವರ್ಷದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಎಂಬಾತನನ್ನ ಸಂಜಯ್ ಮತ್ತು ಮಿಥುನ್ ಎಂಬವರು ಹ*ತ್ಯೆ ಮಾಡಿದ್ದಾರೆ. ಆರೋಪಿಗಳು ಬಜರಂಗದಳ ಕಾರ್ಯಕರ್ತರು ಎನ್ನಲಾಗಿದೆ. ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಈತನನ್ನು ಚಿಕ್ಕಮಗಳೂರು ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ ಮತ್ತೋರ್ವ ಆರೋಪಿ ಮಿಥುನ್ ಎಸ್ಕೇಪ್ ಆಗಿದ್ದಾನೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು – ಕುಟುಂಬ ಭೇಟಿ ಮಾಡಲು ಹೊರಟ ಲೋಕಾಯುಕ್ತ ಇನ್ಸ್‌ಪೆಕ್ಟರ್ ದುರಂತ ಅಂತ್ಯ!
ಮೃತ ಗಣೇಶ್ ಸಖರಾಯಪಟ್ಟಣ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಘಟನೆ ಬಳಿಕ ಸಖರಾಯಪಟ್ಟಣದಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ. ಆರೋಪಿಗಳ ಪತ್ತೆಗೆ ನಾಲ್ಕು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ತಿಳಿಸಿದ್ದಾರೆ. ಗಲಾಟೆಯಲ್ಲಿ ಶಾಮೀಲಾದ ಇಬ್ಬರು ಈಗಾಗಲೇ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸಖರಾಯಪಟ್ಟಣ ಬಂದ್ ಮಾಡಿಸಲು ಕಾಂಗ್ರೆಸ್ ಕಾರ್ಯಕರ್ತರ ಸಿದ್ಧತೆ ನಡೆಸಿದ್ದಾರೆ. ಸಖರಾಯಪಟ್ಟಣ ಬ್ಲಾಕ್ ಕಾಂಗ್ರೆಸ್, ಯೂಥ್ ಕಾಂಗ್ರೆಸ್ ನೇತೃತ್ವದಲ್ಲಿ ಬಂದ್ಗೆ ಕರೆ ನೀಡಲಾಗಿದೆ. ಸಖರಾಯಪಟ್ಟಣ ಬಸ್ ನಿಲ್ದಾಣದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ನೋಡಿರಿ

