ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳ ಸಾವಿಗೆ ಕಾರಣವೇನು?- ಅಧಿಕಾರಿಗಳ ನಿರ್ಲಕ್ಷ್ಯವೇ ಸಾ*ವಿಗೆ ಕಾರಣನಾ?

ಮೈಸೂರಿನಲ್ಲಿ ಸೆರೆ ಸಿಕ್ಕಿದ್ದ 4 ಹುಲಿ ಮರಿಗಳು ಮೃತಪಟ್ಟಿವೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಗೌಡನಕಟ್ಟೆ ಹೊಲದಲ್ಲಿ ಸೆರೆಯಾಗಿ, ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾಲ್ಕು ಹುಲಿ ಮರಿಗಳು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ತಕ್ಷಣಕ್ಕೆ ಸಾವಿಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ಡಿ. 6ರಂದು ಒಂದು, 7ರಂದು ಎರಡು ಹಾಗೂ ಮಂಗಳವಾರ ಒಂದು ಹುಲಿ ಮರಿ ಮೃತಪಟ್ಟಿದೆ. ತಾಯಿ ಹುಲಿ ಆರೋಗ್ಯದಿಂದಿದೆ. ಹುಲಿಮರಿಗಳ ಅಂಗಾಗಗಳನ್ನು ಪರೀಕ್ಷೆಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ನ. 28ರಂದು ಹನಗೋಡು ಹೋಬಳಿಯ ಗೌಡನಕಟ್ಟೆಯ ಪ್ರಕಾಶ್ ಅವರ ಜೋಳದ ಹೊಲದಲ್ಲಿ ನಾಲ್ಕು ಮರಿಗಳೊಂದಿಗೆ ತಾಯಿ ಹುಲಿ ಕಾಣಿಸಿಕೊಂಡಿತ್ತು. ಮಧ್ಯರಾತ್ರಿ ತಾಯಿ ಹುಲಿ ಸೆರೆಯಾಗಿತ್ತು. ಎರಡು ದಿನಗಳ ನಂತರ ನ. 30ರಂದು ನಾಲ್ಕು ಹುಲಿಮರಿಗಳು ಪತ್ತೆಯಾಗಿ ಅವುಗಳನ್ನು ರಕ್ಷಿಸಿ ಕೂರ್ಗಳ್ಳಿ ಪುನರ್ವಸತಿ ಕೇಂದ್ರಲ್ಲಿದ್ದ ತಾಯಿ ಹುಲಿಯೊಂದಿಗೆ ಸೇರಿಸಲಾಗಿತ್ತು.
ಇದನ್ನೂ ಓದಿ: ಪಾಂಡ್ಯ FIRE.. ಬೌಲರ್ಸ್ POWER – ಫಸ್ಟ್ ಮ್ಯಾಚಲ್ಲೇ ಪಲ್ಟಿ ಹೊಡೆದ SA
ಹುಲಿಮರಿಗಳು ಸೆರೆ ಹಿಡಿಯುವ ವೇಳೆ ಜನರ ಕಿರುಚಾಟದಿಂದ ಗಾಬರಿಯಾಗಿದ್ದವು. ಎರಡು ದಿನ ತಾಯಿಯಿಂದ ದೂರವಾಗಿದ್ದ ಮರಿಗಳು ಆಹಾರವಿಲ್ಲದೇ ಬಳಲಿದ್ದವು. ಸೆರೆ ಹಿಡಿಯುವ ವೇಳೆಯೇ ನಿತ್ರಾಣಗೊಂಡಿದ್ದವು. ಸೂಕ್ತ ಚಿಕಿತ್ಸೆಗಾಗಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಲಾಗಿತ್ತು. ಸೆರೆ ಸಿಕ್ಕ ನಂತರ ತಾಯಿ ಹಾಗೂ ನಾಲ್ಕು ಮರಿಗಳನ್ನು ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಮರಿಗಳು ಸರಿಯಾಗಿ ಆಹಾರ ಸೇವಿಸುತ್ತಿರಲಿಲ್ಲ. ಅಸ್ವಸ್ಥಗೊಂಡಿದ್ದ ಇವು ನಾಲ್ಕು ದಿನಗಳ ಅಂತರದಲ್ಲಿ ಸಾವಿಗೀಡಾಗಿವೆ. ಮರಿಗಳ ಶವ ಪರೀಕ್ಷೆ ನಡೆಸಿದ್ದು, ಮರಿಗಳ ಅಂಗಾಂಗಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶೀಘ್ರ ವರದಿ ಬರಲಿದ್ದು, ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ” ಎಂದು ಹುಣಸೂರು ಪ್ರಾದೇಶಿಕ ಅರಣ್ಯ ವಿಭಾಗದ ಡಿಸಿಎ ಮಹಮ್ಮದ್ ಯಾಜುದ್ದೀನ್ ತಿಳಿಸಿದ್ದಾರೆ.
ಹುಲಿ ಮರಿಗಳ ಮರಣೋತ್ತರ ಪರೀಕ್ಷೆ
ತಾಯಿ ಹುಲಿ ಸೆರೆ ಸಿಕ್ಕಿದ ಬಳಿಕ ಎರಡು ದಿನಗಳ ತಾಯಿಯಿಂದ ದೂರವಿದ್ದ ಹುಲಿಮರಿಗಳು, ಆಹಾರವಿಲ್ಲದೆ, ಜನರ ಕಿರುಚಾಟ ಮತ್ತು ಓಡಾಟದಿಂದ ಗಾಬರಿಯಿಂದ ನಿತ್ರಾಣಗೊಂಡಿದ್ದವು. ನಂತರ ಅವುಗಳನ್ನು ಕೂಡ ಕೂರ್ಗಳ್ಳಿ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಗಾಬರಿಯಿಂದ ಮತ್ತು ಆಹಾರ ಸೇವಿಸದೆ ಅಸ್ವಸ್ಥಗೊಂಡ ಕಾರಣ ಕಳೆದ ನಾಲ್ಕು ದಿನಗಳ ಒಳಗೆ ಒಂದಾದ ಮೇಲೆ ಒಂದು ಮರಿಗಳು ಪ್ರಾಣ ಕಳೆದುಕೊಂಡಿವೆ ಎಂದು ಹೇಳಲಾಗುತ್ತಿದೆ. ಪಶುವೈದ್ಯರು ನಾಲ್ಕೂ ಹುಲಿ ಮರಿಗಳ ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದು, ಮರಿಗಳ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ತಾಯಿ ಹುಲಿ ಮಾತ್ರ ಸಧ್ಯಕ್ಕೆ ಆರೋಗ್ಯವಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ನೋಡಿರಿ

