KSCA ಅಧ್ಯಕ್ಷರಾದ ಬೆನ್ನಲ್ಲೇ ವೆಂಕಟೇಶ್ ಪ್ರಸಾದ್ ಅಲರ್ಟ್ – ಚಿನ್ನಸ್ವಾಮಿಯಲ್ಲೇ RCB ಪಂದ್ಯಗಳು ಫಿಕ್ಸ್?

KSCA ಅಧ್ಯಕ್ಷರಾದ ಬೆನ್ನಲ್ಲೇ ವೆಂಕಟೇಶ್ ಪ್ರಸಾದ್ ಅಲರ್ಟ್ – ಚಿನ್ನಸ್ವಾಮಿಯಲ್ಲೇ RCB ಪಂದ್ಯಗಳು ಫಿಕ್ಸ್?

2026ರ ಐಪಿಎಲ್ ಗೆ ಇನ್ನೇನು ಮೂರು ತಿಂಗಳಷ್ಟೇ ಬಾಕಿ. 19ನೇ ಸೀಸನ್ ಶುರು ಆಗಲಿದೆ. ಆದ್ರೆ ಹಾಲಿ ಚಾಂಪಿಯನ್ ಆಗಿರೋ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳಿಗೆ ಇದ್ದಿದ್ದು ಒಂದೇ ಟೆನ್ಷನ್. ಚಿನ್ನಸ್ವಾಮಿ ಮೈದಾನದಲ್ಲಿ ಪಂದ್ಯಗಳನ್ನ ಮಿಸ್ ಮಾಡಿಕೊಳ್ತೀವಿ ಅನ್ನೋದು. ಆದ್ರೆ ಮುಂದಿನ ಆವೃತ್ತಿಯಲ್ಲೂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಪಂದ್ಯಗಳಿಗೆ ಅನುಮತಿ ಸಿಗುವ ಎಲ್ಲಾ ಬೆಳವಣಿಗೆಗಳೂ ನಡೀತಿವೆ. ಕೆಎಸ್ ಸಿಎ ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಇಟ್ಟಿರುವ ಹೆಜ್ಜೆ ಗುಡ್ ನ್ಯೂಸ್ ಹಿಂಟ್ ಕೊಟ್ಟಿದೆ.

ಇದನ್ನೂ ಓದಿ : ಕೆ.ಎಲ್ ರಾಹುಲ್ ರೀತಿ ಮಾಡೋಕೆ ಹೋಗಿ ಯಡವಟ್ಟು – ಸೂರ್ಯಕುಮಾರ್‌ಗೆ ಕೈ ಕೊಟ್ಟ ಕನ್ನಡಿಗನ ಟ್ರಿಕ್..!

ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಸಾವನ್ನಪ್ಪಿದ್ರು. ಇದಾದ ಮೇಲೆ ದೊಡ್ಡ ದೊಡ್ಡ ಪಂದ್ಯಗಳ ಆಯೋಜನೆ ಸರ್ಕಾರ ಅನುಮತಿ ನೀಡಿಲ್ಲ. ಹೀಗಾಗಿ 2026ರ ಐಪಿಎಲ್ ನಲ್ಲೂ ಆರ್ ಸಿಬಿ ಪಂದ್ಯಗಳನ್ನ ಆಯೋಜನೆ ಮಾಡಲು ಅನುಮತಿ ಸಿಗಲ್ಲ ಅನ್ನೋ ಚರ್ಚೆ ನಡೆಯುತ್ತಾ ಇತ್ತು. ಆದರೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸೇರಿದಂತೆ ಇತರೆ ಕ್ರಿಕೆಟ್ ಪಂದ್ಯಗಳನ್ನು ಆಯೋಜಿಸುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ ನೀಡಿದ್ದಾರೆ. ಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ(KSCA) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ನೇತೃತ್ವದ ಪದಾಧಿಕಾರಿಗಳ ತಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಬೆಳಗಾವಿಯಲ್ಲಿ ಭೇಟಿ ಮಾಡಿ, ಪಂದ್ಯಗಳ ಆಯೋಜನೆಗೆ ಸಹಕಾರ ಮತ್ತು ಅನುಮತಿ ಕೋರಿದ್ದಾರೆ.

ಈ ಸಂಬಂಧ ಮಾತನಾಡಿರುವ ಡಿಕೆ ಶಿವಕುಮಾರ್, ವೆಂಕಟೇಶ್ ಪ್ರಸಾದ್ ಹಾಗೂ ತಂಡಕ್ಕೆ ಸರ್ಕಾರ ಅಭಿನಂದನೆ ಸಲ್ಲಿಸಿದೆ. ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಗಳ ಆಯೋಜನೆ ಕುರಿತು, ನಾಳೆ ನಡೆಯಲಿರುವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಗಳನ್ನು ನಿಲ್ಲಿಸುವ ಉದ್ದೇಶ ಸರ್ಕಾರಕ್ಕಿಲ್ಲ. ಆದರೆ, ಜನಸಂದಣಿ ನಿರ್ವಹಣೆ ಮತ್ತು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಸಮಿತಿಯ ಶಿಫಾರಸುಗಳನ್ನು ಪಾಲಿಸುವುದು ಅನಿವಾರ್ಯ ಎಂದು ಹೇಳಿದ್ದಾರೆ. ವೆಂಕಟೇಶ್ ಪ್ರಸಾದ್ ತಂಡವು ಮೈಕೆಲ್ ಕುನ್ಹಾ ಸಮಿತಿ ವರದಿಯನ್ನು ಪಾಲಿಸುವುದಾಗಿ ಭರವಸೆ ನೀಡಿದೆ. ಬೆಂಗಳೂರಿನಿಂದ ಯಾವುದೇ ಪಂದ್ಯಗಳನ್ನು ಹೊರಗೆ ಕಳುಹಿಸುವ ಇಚ್ಛೆ ಸರ್ಕಾರಕ್ಕಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಕೂಡ ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

Shantha Kumari