2 ತಿಂಗಳ ಪೆಂಡಿಂಗ್ ಗೃಹಲಕ್ಷ್ಮೀ ಹಣ ಕೂಡ್ಲೇ ಬರುತ್ತೆ – ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಮಾತು

2 ತಿಂಗಳ ಪೆಂಡಿಂಗ್ ಗೃಹಲಕ್ಷ್ಮೀ ಹಣ ಕೂಡ್ಲೇ ಬರುತ್ತೆ  – ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಮಾತು

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಗ್ಯಾರಂಟಿ ಗದ್ದಲ ಜೋರಾಗಿದೆ. ಮಹಿಳಾ-ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ  ವಿಪಕ್ಷ ನಾಯಕರು ತೀವ್ರ ವಾಗ್ದಾಳಿ ನಡೆಸಿದರು. ಫೆಬ್ರವರಿ-ಮಾರ್ಚ್ ತಿಂಗಳ ಹಣ ಬಿಡುಗಡೆಯಾಗಿಲ್ಲ ಎಂದು ವಾದ ಮಾಡಿದರು. ಈ ಫೆಬ್ರವರಿ-ಮಾರ್ಚ್ ತಿಂಗಳ ಹಣ ಬಿಡುಗಡೆಯಾಗಿಲ್ಲ ಎಂಬ ಪ್ರಶ್ನೆಗೆ ಹೆಬ್ಬಾಳ್ಕರ್​​ ಸ್ಪಷ್ಟ ಉತ್ತರ ನೀಡದೇ ತತ್ತರಿಸಿದ್ದು, ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಬೆಂಬಲ ನೀಡಿದ್ದಾರೆ.

ಗೃಹಲಕ್ಷ್ಮಿ ವಿಳಂಬದ ಬಗ್ಗೆ ಸ್ಪಷ್ಟ ಉತ್ತರ ನೀಡದಕ್ಕೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ವಿರುದ್ಧ ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದವು. ಆಗ ಸ್ವತಃ ಸಿಎಂ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆ ಬಗ್ಗೆ ಸ್ಪಷ್ಟನೆ ಕೊಟ್ರು. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಕಾಂಗ್ರೆಸ್​ ಗ್ಯಾರಂಟಿಗಳ ಬಗ್ಗೆ ಭಾರೀ ಚರ್ಚೆ ನಡೀತು. ಅದರಲ್ಲೂ ಗೃಹಲಕ್ಷ್ಮಿ ಹಣ ವಿಳಂಬದ ಬಗ್ಗೆ ವಿರೋಧ ಪಕ್ಷದವರು ಸಿಡಿದೆದ್ದಿದ್ದು, ಸ್ಪಷ್ಟ ಉತ್ತರ ನೀಡದೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತತ್ತರಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ಪ್ರಶ್ನೆಗಳಿಗೆ ಉತ್ತರ ನೀಡಿದ್ದಾರೆ. ಜೊತೆಗೆ ಗೃಹ ಲಕ್ಷ್ಮೀ ಫಲಾನುಭವಿಗಳಿಗೂ ಗುಡ್​ ನ್ಯೂಸ್​ ಕೊಟ್ಟಿದ್ದಾರೆ.

ಇದನ್ನೂ ಓದಿ: 7 ವೈಡ್ ಹಾಕಿದ ಅರ್ಶ್‌ದೀಪ್ ಮೇಲೆ ಕೋಚ್ ಸಿಟ್ಟು – ಗಂಭೀರ್ ಬೈಗುಳಕ್ಕೆ ಬೌಲರ್ ಥಂಡಾ

ಶಾಸಕ ಮಹೇಶ್ ಟೆಂಗಿನಕಾಯಿ ಗೃಹಲಕ್ಷ್ಮಿ ಯೋಜನೆಯ ಫೆಬ್ರವರಿ-ಮಾರ್ಚ್ ತಿಂಗಳ ಹಣ ಇನ್ನೂ ಬಿಡುಗಡೆಯಾಗಿಲ್ಲ ಎಂದು ಸ್ಪಷ್ಟನೆ ಕೇಳಿದ್ದಾರೆ. ಈ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನಾನು ಎಲ್ಲವನ್ನೂ ಹೇಳಿದ್ದೇನೆ ಎಂದು ಮಾತ್ರ ಉತ್ತರಿಸಿದ್ದಾರೆ. ಯಾವ ತಿಂಗಳವರೆಗೆ ಹಣ ಬಿಡುಗಡೆಯಾಗಿದೆ ಎಂಬುದನ್ನು ಸ್ಪಷ್ಟವಾಗಿ ಹೇಳಲಿಲ್ಲ. ಇದಕ್ಕೆ ವಿಪಕ್ಷ ನಾಯಕ ಆರ್. ಅಶೋಕ್ ಮತ್ತು ಬಿಜೆಪಿ ಶಾಸಕ ಸುನೀಲ್ ಕುಮಾರ್ ಸಚಿವರು ಸದನದ ಹಕ್ಕುಚ್ಯುತಿ ಮಾಡಿದ್ದಾರೆ, ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿಪಕ್ಷಗಳ ಪ್ರಶ್ನೆಗೆ ಸಿಎಂ ಇಂದು ಉತ್ತರಿಸಿದ ಸಿದ್ದರಾಮಯ್ಯ.  ಆಗಸ್ಟ್ ತನಕ ಹಣ ಬಿಡುಗಡೆ ಮಾಡಿದ್ದೇವೆ ಎಂದು ಸಚಿವರು ಹೇಳಿದ್ದಾರೆ. ಒಂದು ವೇಳೆ ಮಾರ್ಚ್ ತಿಂಗಳ ಹಣ ಬಂದಿಲ್ಲ ಅಂದರೆ ಮಾಡಿಸೋಣ. ಸಾಮಾನ್ಯವಾಗಿ ಎರಡು ತಿಂಗಳು ವಿಳಂಬವಾಗುತ್ತದೆ. ಬಂದಿಲ್ಲ ಅಂದರೆ ಕೂಡಲೇ ಕೊಡಿಸುವ ಕೆಲಸ ಮಾಡೋಣ. ಈಗಾಗಲೇ ಸೆಪ್ಟೆಂಬರ್ ವರೆಗೂ ಕೊಟ್ಟಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

Kishor KV