ಮೊಟ್ಟೆ ಪ್ರೋಟಿನ್ ಅಲ್ಲ.. ಕ್ಯಾನ್ಸರ್ ಮೂಲ!? – ಮೊಟ್ಟೆ ಟೆಸ್ಟ್‌ಗೆ ಆರೋಗ್ಯ ಇಲಾಖೆ ಸೂಚನೆ!

ಮೊಟ್ಟೆ ಪ್ರೋಟಿನ್ ಮೂಲ. ಹೀಗಾಗೇ ಸಣ್ಣ ಮಕ್ಕಳಿಗೂ ಮೊಟ್ಟೆ ಸೇವಿಸಲು ನೀಡುತ್ತಾರೆ. ಈಗೀಗ ಮೊಟ್ಟೆಗಳನ್ನೂ ಕೂಡ ಬ್ರ್ಯಾಂಡ್ ಮಾಡಿ ಸೇಲ್ ಮಾಡಲಾಗುತ್ತೆ. ಹೆಚ್ಚು ಪ್ರೋಟಿನ್ ಇದೆ ಎಂದು ಮಾರ್ಕೆಟಿಂಗ್ ಮಾಡಲಾಗ್ತಿದೆ. ಆದ್ರೀಗ ಮೊಟ್ಟೆ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿರುವ ಬಗ್ಗೆ ಸುದ್ದಿ ಬೆಳಕಿಗೆ ಬಂದಿದೆ.
ಮೊಟ್ಟೆಯನ್ನ ಕೇವಲ ನಾನ್ ವೆಜಿಟೇರಿಯನ್ಸ್ ಮಾತ್ರ ಅಲ್ಲ, ವೆಜಿಟೇರಿಯನ್ಸ್ ಕೂಡ ತಿನ್ನುತ್ತಾರೆ. ಆದರೆ ಇತ್ತೀಚೆಗೆ ಮೊಟ್ಟೆಯಲ್ಲಿ ಕ್ಯಾನ್ಸರ್ ಅಂಶ ಪತ್ತೆಯಾಗಿದೆ ಎಂಬ ಸುದ್ದಿ ಸದ್ದು ಮಾಡ್ತಿದೆ. ಜನಪ್ರಿಯ ಬ್ರಾಂಡ್ ನ ಮೊಟ್ಟೆಗಳಲ್ಲಿ ನೈಟ್ರೋಫ್ಯೂರಾನ್ ಎಂಬ ಔಷಧದ ಕಣಗಳು ಕಂಡುಬಂದಿದ್ದು, ಇದು ಡಿಎನ್‌ಎಯಿಂದ ಸಂತಾನೋತ್ಪತ್ತಿ ಅಂಗಗಳು ಮತ್ತು ರೋಗನಿರೋಧಕ ವ್ಯವಸ್ಥೆಗೆ ಎಲ್ಲದಕ್ಕೂ ಹಾನಿ ಮಾಡುತ್ತದೆ. ಅಲ್ಲದೇ ಇದು ಕ್ಯಾನ್ಸರ್‌ನಂತಹ ಅಪಾಯಕಾರಿ ಕಾಯಿಲೆಗಳಿಗೂ ಕಾರಣವಾಗಬಹುದು ಎಂಬ ಸುದ್ದಿ ಹರಿದಾಡುತ್ತಿದೆ. ಇದ್ರ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದೆ. ಇದೀಗ ರಾಜ್ಯ ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಕ್ರಮ ಕೈಗೊಂಡಿದ್ದಾರೆ. ರಾಜ್ಯಾದ್ಯಂತ ಸ್ಯಾಂಪಲ್ ಕಲೆಕ್ಷನ್ ಕಾರ್ಯ ಶುರುವಾಗಿದ್ದು, ಒಟ್ಟು 200ಕ್ಕೂ ಅಧಿಕ ಮೊಟ್ಟೆ ಮಾದರಿಗಳನ್ನು ಸಂಗ್ರಹಿಸಲಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ 50ಕ್ಕೂ ಹೆಚ್ಚು ಸ್ಯಾಂಪಲ್‌ಗಳನ್ನು ಕಲೆಕ್ಟ್ ಮಾಡಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿವೆ.
ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶ ಪತ್ತೆ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ದಿನೇಶ್ ಗುಂಡೂರಾವ್, ಈ ಹಿಂದೆ ನಡೆಸಿದ ಪರೀಕ್ಷೆಗಳಲ್ಲಿ ಮೊಟ್ಟೆ ಹಾನಿಕಾರಕ ಅಂಶಗಳು ಕಂಡುಬಂದಿಲ್ಲ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಆಯುಕ್ತ ಶ್ರೀನಿವಾಸ್ ಅವರು ಆ ಸಮಯದಲ್ಲಿ ಪ್ರಯೋಗಾಲಯ ವರದಿಗಳು ಮೊಟ್ಟೆಗಳು ಸೇವನೆಗೆ ಸುರಕ್ಷಿತವೆಂದು ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ, ಈ ಹೊಸ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಮೊಟ್ಟೆಗಳ ಮಾದರಿಗಳನ್ನು ಸಂಗ್ರಹಿಸಿ, ಲ್ಯಾಬ್‌ಗಳಲ್ಲಿ ಕೂಲಂಕುಷ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.
ಒಂದು ವೇಳೆ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳು ಪತ್ತೆಯಾದರೆ, ಮೊಟ್ಟೆ ಉತ್ಪಾದಕರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನೋಡಿರಿ

