66ನೇ ವಸಂತಕ್ಕೆ ಕಾಲಿಟ್ಟ ಹೆಚ್.ಡಿ. ಕುಮಾರಸ್ವಾಮಿ – ಪ್ರಧಾನಿ ಮೋದಿ ಶುಭಹಾರೈಕೆಗೆ ಭಾವುಕರಾದ ಕೇಂದ್ರ ಸಚಿವ

66ನೇ ವಸಂತಕ್ಕೆ ಕಾಲಿಟ್ಟ ಹೆಚ್.ಡಿ. ಕುಮಾರಸ್ವಾಮಿ – ಪ್ರಧಾನಿ ಮೋದಿ ಶುಭಹಾರೈಕೆಗೆ ಭಾವುಕರಾದ ಕೇಂದ್ರ ಸಚಿವ

ಜೆಡಿಎಸ್​​ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಹೆಚ್‌ಡಿ ಕುಮಾರಸ್ವಾಮಿ ಅವರು 66ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹೆಚ್‌ಡಿಕೆ ಹುಟ್ಟು ಹಬ್ಬಕ್ಕೆ ಪ್ರಧಾನಿ ಮೋದಿ ಶುಭಕೋರಿದ್ದಾರೆ.

ಇದನ್ನೂ ಓದಿ: ಮಗುವಿಗೆ ಬಾಟಲ್‌ನಲ್ಲಿ ಹಾಲು ಕುಡಿಸೋದು ಡೇಂಜರ್!‌ – ಒಂದು ತಪ್ಪು ಭವಿಷ್ಯಕ್ಕೆ ಕುತ್ತು!

ಪ್ರಧಾನಿ ಮೋದಿ ಎಕ್ಸ್‌ ನಲ್ಲಿ ಹೆಚ್‌ಡಿಕೆ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಉಕ್ಕು ಮತ್ತು ಭಾರೀ ಕೈಗಾರಿಕೆಗಳಲ್ಲಿ ತಮ್ಮ ಕೆಲಸದ ಮೂಲಕ ಆತ್ಮನಿರ್ಭರತೆಯತ್ತ ನಮ್ಮ ಪ್ರಯತ್ನಗಳನ್ನು ಬಲಪಡಿಸುತ್ತಿದ್ದೀರ. ಸಮಾಜ ಸೇವೆಯಲ್ಲಿ ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನ ಸಿಗಲಿ ಎಂದು ಹಾರೈಸಿದ್ದಾರೆ.

ಪ್ರಧಾನಿ ಮೋದಿ ಅವರ ಶುಭಹಾರೈಕೆ ಕುಮಾರಸ್ವಾಮಿ ಭಾವುಕರಾಗಿದ್ದಾರೆ. ಎಕ್ಸ್‌ನಲ್ಲಿ ಮೋದಿ ಟ್ವೀಟ್‌ ಶೇರ್‌ ಮಾಡಿ, ಪ್ರಧಾನಿಯವರ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ . ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ. ಮಾನ್ಯ ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಹೆಚ್‌ಡಿ ಕುಮಾರಸ್ವಾಮಿ ಅವರಿಗೆ ತಂದೆ, ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿಯೂ ಆಗಿರುವ ದೇವೇಗೌಡ ಕುಮಾರಸ್ವಾಮಿ ಜನ್ಮ ದಿನಕ್ಕೆ ಶುಭಕೋರಿದ್ದಾರೆ. ಜನಪರ ಕಾಳಜಿ ಹಾಗೂ ಬದ್ಧತೆಯಿಂದ ರಾಜ್ಯ ಮತ್ತು ರಾಷ್ಟ್ರದ ಅಭಿವೃದ್ಧಿಗೆ ನಿಮ್ಮ ನಿರಂತರ ಪರಿಶ್ರಮ ಹೀಗೇ ಮುಂದುವರಿಯಲಿ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಇನ್ನು ಕುಮಾರಸ್ವಾಮಿ ಅವರ ಜನ್ಮ ದಿನ ಪ್ರಯುಕ್ತ ಮಂಡ್ಯ ಮತ್ತು ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹೆಚ್‌ಡಿಕೆಗೆ ಮದ್ದೂರಿನ ಟಿಬಿ ವೃತ್ತದಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರಿಂದ ಸನ್ಮಾನ ನಡೆಯಲಿದೆ. ಅದಾದ ಬಳಿಕ ಮಂಡ್ಯದ ಜಯಚಾಮರಾಜ ಒಡೆಯರ್ (ಸಂಜಯ್) ವೃತ್ತದಲ್ಲಿ ನಡೆಯಲಿರುವ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಶ್ರೀರಂಗಪಟ್ಟಣ ಬಸ್ ನಿಲ್ದಾಣದ ಬಳಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಗಳನ್ನು ಮುಗಿಸಿ ಮೈಸೂರಿಗೆ ಆಗಮಿಸಲಿರುವ ಅವರು ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಮಂಡ್ಯದ ಮಳವಳ್ಳಿಗೆ ಹಿಂತಿರುಗಿ ಅಧ್ಯಕ್ಷೆ ದ್ರೌಪದಿ ಮುರ್ಮು ಅವರೊಂದಿಗೆ ಆದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿ ಸ್ವಾಮೀಜಿ ಅವರ 1066 ನೇ ಜಯಂತಿ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ.

Shwetha M