ಈಗಲೂ ನಾನೇ ಮುಖ್ಯಮಂತ್ರಿ, ಮುಂದೆನೋ  ನಾನೇ ಮುಖ್ಯಮಂತ್ರಿ – ಶಾಕಿಂಗ್ ಹೇಳಿಕೆ ಕೊಟ್ಟ ಸಿದ್ದರಾಮಯ್ಯ

ಈಗಲೂ ನಾನೇ ಮುಖ್ಯಮಂತ್ರಿ, ಮುಂದೆನೋ  ನಾನೇ ಮುಖ್ಯಮಂತ್ರಿ – ಶಾಕಿಂಗ್ ಹೇಳಿಕೆ ಕೊಟ್ಟ ಸಿದ್ದರಾಮಯ್ಯ
ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್‌  ನಡುವೆ ಸಿಎಂ ಫೈಟ್ ನಡೆಯುತ್ತಿರುವ ಬೆನ್ನಲ್ಲೇ  ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ನೀಡಿದ್ದಾರೆ.  ಈಗಲೂ ನಾನೇ ಮುಖ್ಯಮಂತ್ರಿ, ಮುಂದೆನೋ  ನಾನೇ ಸಿಎಂ ಎಂದು ವಿಪಕ್ಷಗಳ ಮಾತಿಗೆ ಸಿಎಂ ಸಿದ್ದರಾಮಯ್ಯ ಕೌಂಟರ್ ಕೊಟ್ಟಿದ್ದಾರೆ.  ನಾವು ಸರ್ಕಾರ ರಚನೆ ಮಾಡಿದ್ದೇವೆ. ಸರ್ಕಾರ ಇರುವಾಗ ನಮ್ಮದು ಅಂತನೇ ಹೇಳಬೇಕು, ನನ್ನ ಸರ್ಕಾರ ಅಂತ ಅಲ್ಲ. ನಾನೇ ಮುಖ್ಯಮಂತ್ರಿ, ಎಲ್ಲಿಯವರೆಗೆ ಅಂದ್ರೆ ಹೈಕಮಾಂಡ್ ಹೇಳೋವರೆಗೆ ನಾನೇ ಸಿಎಂ ಎಂದ್ರು. ಹಾಗೇ  ಈ ಐದು ವರ್ಷ ಅಷ್ಟೇ ಅಲ್ಲ ಮುಂದೆ 2028ಕ್ಕೂ ನಮ್ಮದೇ ಸರ್ಕಾರ ಬರುತ್ತೆ, ನಾನೇ ಸಿಎಂ ಆಗ್ತೀನಿ ಎಂದು ಸಿದ್ದರಾಮಯ್ಯ ಆಕ್ರೋಶದಲ್ಲೇ ನುಡಿದಿದ್ದಾರೆ.
ಹಾಗೇ ವಿರೋಧ ಪಕ್ಷದ ಕಾಲೆಳೆಯುವ ಕೆಲಸವನ್ನ ಸಿಎಂ ಮಾಡಿದ್ರು.   ಉರಿಯುವುದರ ಮೇಲೆ ಉಪ್ಪು ಹಾಕಬಾರದೆಂಬ ಎಂಬ ಗಾದೆ ಮಾತಿದೆ. ವಿರೋಧಪಕ್ಷದವರು ಇರುವುದೇ ಉರಿಯುವುದರ ಮೇಲೆ ಉಪ್ಪು ಸುರಿಯಲು ಎಂದರು. ವಿರೋಧಪಕ್ಷದವರು ಏನೇ ಪ್ರಚೋದನೆ ಮಾಡಿದರೂ, ನಮ್ಮ ಶಾಸಕರಾರೂ ಪ್ರಚೋದಿತರಾಗುವುದಿಲ್ಲ. ಐದು ವರ್ಷ ನಾನೇ ಮುಖ್ಯಮಂತ್ರಿಯಾಗಿರಬೇಕೆಂದು ಜನರು ಆಶೀರ್ವಾದ ಮಾಡಿ ಕಳಿಸಿದ್ದಾರೆ. 140 ಶಾಸಕರು ನಮ್ಮೊಂದಿಗಿದ್ದಾರೆ. ವಿರೋಧಪಕ್ಷದವರು ಇದರಲ್ಲಿ ಹುಳಿ ಹಿಂಡುವ ಅಗತ್ಯವಿಲ್ಲ ಎಂದರು.
ಬಿಜೆಪಿಯ ಅಧ್ಯಕ್ಷಗಿರಿ ಆಯ್ಕೆಯಲ್ಲಿ ಒಮ್ಮತ ಸಾಧಿಸಿಲ್ಲ. ಬಿಜೆಪಿಯವರಿಗೆ ಅಸೂಯೆ ಕಾಡುತ್ತಿದೆ. ಐದು ವರ್ಷ ಸುಭದ್ರ ಸರ್ಕಾರ ನೀಡುತ್ತೇವೆ ಹಾಗೂ ಮತ್ತೆ ಚುನಾವಣೆ ಎದುರಿಸಿ 2028 ರಲ್ಲಿಯೂ ಕಾಂಗ್ರೆಸ್ ಸರ್ಕಾರವೇ ಅಧಿಕ್ಆರಕ್ಕೆ ಬರಲಿದೆ. 2013 ರಲ್ಲಿ 2023 ರಲ್ಲಿಯೂ ಕಾಂಗ್ರೆಸ್ ಗೆ ಜನರು ಆಶೀರ್ವಾದ ಮಾಡಿದ್ದಾರೆ, ಆದರೆ ಬಿಜೆಪಿಯವರಿಗೆ ಒಮ್ಮೆಯೂ ಜನಾದೇಶ ದೊರೆತಿಲ್ಲ ಹಾಗೂ ಭವಿಷ್ಯದಲ್ಲಿಯೂ ದೊರೆಯುವುದಿಲ್ಲ ಎಂದಿದ್ದಾರೆ.

Kishor KV