ಹದಗೆಟ್ಟ ದೆಹಲಿ ವಾಯು ಗುಣಮಟ್ಟ – ಸರ್ಕಾರಿ, ಖಾಸಗಿ ಸಂಸ್ಥೆಗಳ 50% ನೌಕರರಿಗೆ ವರ್ಕ್ ಫ್ರಂ ಹೋಂ ಕಡ್ಡಾಯ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಉಸಿರಾಡುವ ಗಾಳಿಯೇ ವಿಷವಾಗುತ್ತಿದೆ. ದಿನದಿಂದ ದಿನಕ್ಕೆ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಇದ್ರಿಂದಾಗಿ ಜನರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದ ಹಿನ್ನೆಲೆ ಪರಿಸ್ಥಿತಿ ನಿಭಾಯಿಸಲು ದೆಹಲಿ ಸರ್ಕಾರ ಮುಂದಾಗಿದೆ. ಇದೀಗ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಂಪನಿಗಳ ಶೇ.50 ರಷ್ಟು ನೌಕರರಿಗೆ ವರ್ಕ್ ಫ್ರಂ ಹೋಮ್ ಕಡ್ಡಾಯಗೊಳಿಸಿ, ಆದೇಶ ಹೊರಡಿಸಿದೆ.
ಇದನ್ನೂ ಓದಿ: ಸಾಲಗಾರರ ಕಾಟಕ್ಕೆ ಬೇಸತ್ತು ತನ್ನ ಕಿಡ್ನಿಯನ್ನೇ ಸೇಲ್ ಮಾಡಿದ ರೈತ!
ದೆಹಲಿಯಲ್ಲಿ ವಾಯುಮಾಲಿನ್ಯದ ಬಿಕ್ಕಟ್ಟು ತೀವ್ರಗೊಂಡಿದ್ದು, ವಾಯುಮಾಲಿನ್ಯ ಸೂಚ್ಯಂಕ ತೀವ್ರ ಮಟ್ಟಕ್ಕೆ ತಲುಪಿದೆ. ಈ ಪರಿಸ್ಥಿತಿಯನ್ನು ನಿಭಾಯಿಸಲು, ಸರ್ಕಾರವು ಎಲ್ಲಾ ಸರ್ಕಾರಿ ಮತ್ತು ಖಾಸಗಿ ಕಂಪನಿಗಳಿಗೆ ಶೇ.50 ರಷ್ಟು ನೌಕರರನ್ನು ಮನೆಯಿಂದಲೇ ಕೆಲಸ ಮಾಡುವಂತೆ ಕಡ್ಡಾಯಗೊಳಿಸಿದೆ. ಅಲ್ಲದೇ ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲ್ಯಾನ್ ಅಡಿಯಲ್ಲಿ ಯಾವುದೇ ನಿರ್ಮಾಣ ಚಟುವಟಿಕೆಗಳನ್ನ ದೀರ್ಘಕಾಲ ಕೈಗೊಳ್ಳದಂತೆ ಕಾರ್ಮಿಕರಿಗೆ ಸೂಚನೆ ನೀಡಿದೆ. ನಿಯಮ ಉಲ್ಲಂಘಿಸಿದರೆ ದಂಡ ವಿಧಿಸುವುದಾಗಿ ಎಚ್ಚರಿಕೆ ನೀಡಿದೆ. ಇನ್ನೂ ನಿರ್ಮಾಣ ಕಾಮಗಾರಿ ನಿಷೇಧಿಸಿರುವುದರಿಂದ, ಎಲ್ಲಾ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ 10,000 ರೂ. ಪರಿಹಾರ ನೀಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.
ಡಿಸೆಂಬರ್ 15 ರಂದು ದೆಹಲಿಯ ವಾಯುಮಾಲಿನ್ಯವು ಈ ಋತುವಿನಲ್ಲೇ ಅತ್ಯಂತ ಕೆಟ್ಟ ಸ್ಥಿತಿಗೆ ತಲುಪಿತ್ತು. ಅದಕ್ಕೂ ಹಿಂದಿನ ದಿನವೂ ವಾಯುಮಾಲಿನ್ಯ ತೀವ್ರ ಮಟ್ಟಕ್ಕೆ ಏರಿದ್ದು, ನಂತರ ತೀವ್ರ ಪ್ಲಸ್ ವಲಯಕ್ಕೆ ತಲುಪಿತ್ತು ಎಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಮಾಹಿತಿ ನೀಡಿದೆ. ಈ ಗಂಭೀರ ಪರಿಸ್ಥಿತಿಯನ್ನು ನಿಯಂತ್ರಿಸಲು, ವಾಯುಮಾಲಿನ್ಯ ನಿರ್ವಹಣಾ ಆಯೋಗವು ಕಠಿಣ ನಿರ್ಬಂಧಗಳಾದ ಗ್ರಾಪ್ 5 ಅನ್ನು ಜಾರಿಗೊಳಿಸಿತು.

ನೋಡಿರಿ

