ಧರ್ಮಸ್ಥಳ ಬುರುಡೆ ಕೇಸ್! – ಜಾಮೀನು ಮಂಜೂರಾಗಿ 24 ದಿನದ ಬಳಿಕ ಚಿನ್ನಯ್ಯಗೆ ಬಿಡುಗಡೆ ಭಾಗ್ಯ!

ಧರ್ಮಸ್ಥಳದಲ್ಲಿ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ. ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ರಿಲೀಸ್ ಆಗಿದ್ದಾರೆ.
ಇದನ್ನೂ ಓದಿ: ಹೆಲ್ಮೆಟ್ ಹಾಕದೇ ಬೈಕ್ ಓಡಿಸಿದ ವ್ಯಕ್ತಿ! – ಬೈಕ್ ಸವಾರನ ಕಾರಣ ಕೇಳಿ ಬಿದ್ದು, ಬಿದ್ದು ನಕ್ಕ ಪೊಲೀಸರು!
ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಪ್ರತ್ಯಕ್ಷವಾಗಿದ್ದ. ಮಾಸ್ಕ್ ಧರಿಸಿ ತನಿಖಾ ತಂಡಕ್ಕೆ ಶವಗಳನ್ನು ಹೂತಿಟ್ಟ ಜಾಗ ತೋರಿಸುತ್ತಿದ್ದ. ಈತ ತಿಳಿಸಿದ ಕಡೆಗಳಲ್ಲಿ ಅವಶೇಷಗಳು ಪತ್ತೆಯಾಗದ ಹಿನ್ನೆಲೆ ಮಾಸ್ಕ್ ಮ್ಯಾನ್ ಅಲಿಯಾಸ್ ಚಿನ್ನಯ್ಯನನ್ನು ಬಂಧಿಸಲಾಗಿತ್ತು. ಬೆಳ್ತಂಗಡಿ ನ್ಯಾಯಾಲಯದಲ್ಲಿ ಈತನ ವಿಚಾರಣೆ ನಡೆಯುತ್ತಿತ್ತು. ಸುರಕ್ಷತೆ ದೃಷ್ಟಿಯಿಂದ ಬುರುಡೆ ಚಿನ್ನಯ್ಯನನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿತ್ತು. ಚಿನ್ನಯ್ಯನಿಗೆ ಕಳೆದ ನವೆಂಬರ್ 24 ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನ ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀರು ಶೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಕೂಡ ಜಾಮೀನು ನೀಡಲು ಯಾರು ಮುಂದೆ ಬಾರದ ಕಾರಣ ಶಿವಮೊಗ್ಗ ಕಾರಾಗೃಹದಲ್ಲೇ ಚಿನ್ನಯ್ಯ ಇರಬೇಕಾಯಿತು. ಇದೀಗ ಚಿನ್ನಯ್ಯನಿಗೆ ಬಿಡುಗಡೆ ಭಾಗಿ ಸಿಕ್ಕಿದ್ದು ಬೆಳಗ್ಗೆ 8-30ರ ಸುಮಾರಿಗೆ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಇಂದು ಬೆಳಗ್ಗೆ ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಇನ್ನೋವಾ ಕಾರಿನಲ್ಲಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಸೇರಿದಂತೆ ಐದು ಜನರು ಆಗಮಿಸಿ ಕಾರಾಗೃಹದೊಳಗೆ ಹೋದರು. ಕ್ಯಾಮೆರಾಗಳನ್ನು ನೋಡುತ್ತಿದ್ದಂತೆ ಚಿನ್ನಯ್ಯನ ಪತ್ನಿ ತಲೆಮೇಲೆ ಸೆರಗು ಮುಚ್ಚಿಕೊಂಡು ಜೈಲಿನೊಳಗೆ ಹೊರಟರು. ಜೈಲಿನಲ್ಲಿ ಬಿಡುಗಡೆ ಪ್ರಕ್ರಿಯೇಗಳನ್ನು ಮುಗಿಸಿ ಪತಿ ಚಿನ್ನಯ್ಯನನ್ನು ಕರೆದುಕೊಂಡು ಅವಸರದಿಂದಲೇ ಹೊರಟು ಹೋದರು.
ಶಿವಮೊಗ್ಗ ಕಾರಾಗೃಹದಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬಿಡುಗಡೆ ಪ್ರಕ್ರಿಯೆ ನಡೆಯಿತು. ಒಟ್ಟಿನಲ್ಲಿ ಜಾಮೀನು ಮಂಜೂರಾಗಿ 24 ದಿನಗಳ ಬಳಿಗೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.

ನೋಡಿರಿ

