ದಲಿತ ಶಾಸಕರು, ಸಚಿವರು ಹಾಗೂ ಉದ್ಯಮಿಗಳ ಸಭೆ – ಸತೀಶ್ ಜಾರಕಿಹೊಳಿ ಕೊಟ್ಟ ಸಂದೇಶವೇನು?

ದಲಿತ ಶಾಸಕರು, ಸಚಿವರು ಹಾಗೂ ಉದ್ಯಮಿಗಳ ಸಭೆ – ಸತೀಶ್ ಜಾರಕಿಹೊಳಿ ಕೊಟ್ಟ ಸಂದೇಶವೇನು?

ಕಾಂಗ್ರೆಸ್‌ ಪಕ್ಷದಲ್ಲಿ ಸಿಎಂ ಬದಲಾವಣೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಪಕ್ಷದ ಶಮನವಾಗಿದ್ದರೂ ಪಕ್ಷದ ಆಂತರಿಕ ವಲಯದಲ್ಲಿ ಮಾತ್ರ ಹಗ್ಗಜಗ್ಗಾಟ ಸದ್ದಿಲ್ಲದೇ ನಡೆಯುತ್ತಿದೆ. ನಾಯಕರು ದಿನಕ್ಕೊಂದು ಡಿನ್ನರ್‌ ಮೀಟಿಂಗ್‌ ನಡೆಸುವ ಮೂಲಕ ತಮ್ಮ-ತಮ್ಮ ಬಣಗಳ ಶಕ್ತಿ ಪ್ರದರ್ಶನ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸುಮಾರು 40ಕ್ಕೂ ಹೆಚ್ಚು ಶಾಸಕರಿಗೆ ಔತಣ ಕೂಟ ನೀಡಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಪಕ್ಷಾತೀತವಾಗಿ ದಲಿತ ಶಾಸಕರು, ಸಚಿವರು ಹಾಗೂ ಉದ್ಯಮಿಗಳ ಸಭೆ ನಡೆಸಿದ್ದು, ಈ ಬೆಳವಣಿಗೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

ಬೆಳಗಾವಿ ನಗರದ ಖಾಸಗಿ ಹೋಟೆಲ್‌ನಲ್ಲಿಸತೀಶ್ ಜಾರಕಿಹೊಳಿಯವರು ಸಭೆ ನಡೆಸಿದ್ದು, ಈ ಸಭೆಯಲ್ಲಿ ದಲಿತ ಮುಖ್ಯಮಂತ್ರಿ ವಿಷಯ ಪ್ರಸ್ತಾಪವಾಗದಿದ್ದರೂ ದಲಿತ ರಾಜಕಾರಣಿಗಳು ಹಾಗೂ ಉದ್ಯಮಿಗಳ ಸಮಸ್ಯೆ ಆಲಿಸುವ ನೆಪದಲ್ಲಿ ದಲಿತ ಸಿಎಂ ಬೇಡಿಕೆಯನ್ನು ಮುನ್ನೆಲೆಗೆ ತಂದಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ.

ಇದನ್ನೂಓದಿ: ಒಮಾನ್‌ನಲ್ಲೂ ಯಕ್ಷಗಾನದ ರಂಗು – ಮಸ್ಕನ್‌ನಲ್ಲಿ ಕರ್ನಾಟಕದ ಕಲೆಗೆ ಮೋದಿ ಫಿದಾ

ಈ ಔತಣಕೂಟದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ​​ಮುನಿಯಪ್ಪ, ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್, ಟಿ. ರಘುಮೂರ್ತಿ, ಎ.ಆರ್. ಕೃಷ್ಣಮೂರ್ತಿ, ಕಾಂಗ್ರೆಸ್‌ನ ರಘುಮೂರ್ತಿ, ಪರಿಷತ್ತಿನ ಸದಸ್ಯ ಛಲವಾದಿ ನಾರಾಯಣಸ್ವಾಮಿ, ದುರ್ಯೋಧನ ಐಹೊಳೆ ಮತ್ತು ಬಿಜೆಪಿಯ ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ, ಜೆಡಿಎಸ್‌ನ ಕರೆಮ್ಮ ನಾಯಕ್ ಸೇರಿದಂತೆ ಎಲ್ಲಾ ಪಕ್ಷಗಳ 33 ಶಾಸಕರು ಭಾಗವಹಿಸಿದ್ದರು.

ಸಿದ್ದರಾಮಯ್ಯ ನಂತರ ರಾಜ್ಯದಲ್ಲಿ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕೆಂದು ಕೆಲ ದಲಿತ ಶಾಸಕರು ಬಯಸಿದ್ದಾರೆ. ಆದರೆ, ಗೃಹ ಸಚಿವ ಪರಮೇಶ್ವರ್ ಅವರ ಆಸಕ್ತಿಯ ಕೊರತೆ ಅವರನ್ನು ನಿರಾಶೆಗೊಳಿಸಿದೆ ಎಂದು ಶಾಸಕರೊಬ್ಬರು ಹೇಳಿದ್ದಾರೆ. ಈ ಹಿಂದೆ ಮಾತನಾಡಿದ್ದ ಛಲವಾದಿ ನಾರಾಯಣ ಸ್ವಾಮಿಯವರು, ಕಾಂಗ್ರೆಸ್‌ನಲ್ಲಿರುವ ದಲಿತ ನಾಯಕರು ಪವರ್‌ ಲೆಸ್‌. ಅವರಿಗೆ ತಾಕತ್ತೇ ಇಲ್ಲ. ಪಕ್ಷವನ್ನು ಸರಿಯಾಗಿ ಕೇಳಿದ್ದರೆ 2013ರಲ್ಲಿಯೇ ದಲಿತರೊಬ್ಬರು ಮುಖ್ಯಮಂತ್ರಿಯಾಗುತ್ತಿದ್ದರು ಎಂದು ಹೇಳಿದ್ದರು.

 

 

Kishor KV