ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ ಪಾಸ್‌- ದ್ವೇಷ ಭಾಷಣ ಮಾಡಿದ್ರೆ ಏನೆಲ್ಲಾ ಶಿಕ್ಷೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆ ಪಾಸ್‌- ದ್ವೇಷ ಭಾಷಣ ಮಾಡಿದ್ರೆ ಏನೆಲ್ಲಾ ಶಿಕ್ಷೆ?

ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಸರ್ಕಾರ ಪಾಸ್‌ ಮಾಡುವಲ್ಲಿ ಯಶಸ್ವಿಯಾಗಿದೆ. ಸರ್ಕಾರ ಮಂಡಿಸಿದ್ದ ಮಸೂದೆಗೆ ವಿಪಕ್ಷಗಳ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿ ಸದನದ ಬಾವಿಗಿಳಿದು ಧರಣಿ ನಡೆಸಿದರು. ವಿಧೇಯಕದ ಪ್ರತಿಗಳನ್ನು ಹರಿದು ಬಿಸಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ವಿಪಕ್ಷಗಳ ವಿರೋಧ ಹೆಚ್ಚಾಗುತ್ತಿದ್ದಂತೆ ಗದ್ದಲದ ನಡುವೆಯೇ ಮಸೂದೆಯನ್ನು ಸರ್ಕಾರ ಪಾಸ್‌ ಮಾಡಿಕೊಂಡಿತು.

ಇದನ್ನೂ ಓದಿ: ಬಿಗ್‌ಬಾಸ್‌ ಮನೆಯಲ್ಲಿ ಇರೋಕೆ ಅರ್ಹತೆ ಇಲ್ಲ.. ಮರ್ಯಾದೆ ಕ್ರಾಸ್‌ ಮಾಡ್ತೀನಿ – ಧ್ರುವಂತ್‌ ಮೇಲೆ ಕೂಗಾಡಿದ ರಕ್ಷಿತಾ!

ಮೊದಲು ಮಸೂದೆಯ ಬಗ್ಗೆ ಗೃಹ ಸಚಿವ ಡಾ. ಜಿ ಪರಮೇಶ್ವರ್ವಿ ವರಣೆ ನೀಡಿ, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ಜನ ಸಮಾಜಕ್ಕೆ ನೋವಾಗುವ ರೀತಿಯಲ್ಲಿ ಮಾತನಾಡುತ್ತಿದ್ದಾರೆ. ಇದರ ಪ್ರಮಾಣ ಜಾಸ್ತಿಯಾಗಿ ಕೊಲೆಗಳು, ಹೊಡೆದಾಟಗಳು ನಡೆದಿವೆ. ಇದನ್ನು ನಿಯಂತ್ರಣ ಮಾಡಬೇಕಾಗಿದೆ‌ ಎಂದರು. ಸಾಮಾಜಿಕ, ರಾಜಕೀಯ ಸಭೆಗಳಲ್ಲಿ ಆಡುವ ದ್ವೇಷದ ಮಾತುಗಳು ಮತ್ತೊಂದು ಸಮುದಾಯದ ಮೇಲೆ ಪರಿಣಾಮ ಬೀರುತ್ತಿದೆ. ದ್ವೇಷ ಭಾಷಣದಲ್ಲಿ ಮತ್ತೊಂದು ಸಮುದಾಯದ ಬಗ್ಗೆ ಕೆಟ್ಟ ಮಾತುಗಳನ್ನು ಆಡಲಾಗಿದೆ. ದ್ವೇಷ ಭಾಷಣ ಮಾಡುವ ವ್ಯಕ್ತಿಗಳಿಗೆ ಎಷ್ಟು ದಿನ ನಿರ್ಬಂಧ ಹೇರಲು ಸಾಧ್ಯ? ಹೀಗಾಗಿ ಕಾನೂನು ತರಲಾಗಿದೆ ಎಂದು ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಮೊದಲ ದ್ವೇಷ ಭಾಷಣ ತಪ್ಪಿಗೆ 1 ರಿಂದ 7 ವರ್ಷ ಜೈಲು, 50 ಸಾವಿರ ರೂ ದಂಡ. ದ್ವೇಷ ಭಾಷಣ ಪುನರಾವರ್ತನೆಗೆ 2 ವರ್ಷದಿಂದ ಗರಿಷ್ಠ ಶಿಕ್ಷೆ 7 ವರ್ಷ ಜೈಲು, 1 ಲಕ್ಷ ದಂಡ ವಿಧಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ. ತಪ್ಪು ಪುನರಾವರ್ತನೆಗೆ ಈ ಮೊದಲು 10 ವರ್ಷ ಜೈಲು ಇದ್ದಿದ್ದನ್ನು 7 ಕ್ಕೆ ಇಳಿಸಲಾಗಿದೆ ಅಂತ ಪರಮೇಶ್ವರ್ ಸ್ಪಷ್ಟಪಡಿಸಿದರು

Kishor KV