ಭ್ರಷ್ಟಾಚಾರದ ಪಿತಾಮಹ ಎಂದ ವಿಜಯೇಂದ್ರ ಅವರಿಗೆ ಕಾಲವೇ ಉತ್ತರ ನೀಡುತ್ತದೆ – ಡಿಸಿಎಂ ಡಿಕೆಶಿ

ಸತಿಶ್ ಜಾರಕಿಹೊಳಿ ಕೊಟ್ಟ ಡಿನ್ನರ್ ಮೀಟಿಂಗ್ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಒಟ್ಟಿಗೆ ಸೇರಿ ಊಟ ಮಾಡುವುದನ್ನು ಬೇಡ ಎಂದು ಹೇಳಲು ಆಗುತ್ತದೆಯೇ? ನನಗೇಕೆ ಅದೆಲ್ಲಾ? ಹೊರಗಡೆಯಿಂದ ಬಂದಿದ್ದೀವಿ. ಎಲ್ಲಾ ಸೇರಿರೋದ್ರಲ್ಲಿ, ಊಟ ಮಾಡೋದ್ರಲ್ಲಿ ತಪ್ಪೇನಿದೆ? ಎಂದು ಡಿಸಿಎಂ ಮರುಪ್ರಶ್ನಿಸಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಗುರುವಾರ ರಾತ್ರಿ ಡಿನ್ನರ್ ಮೀಟಿಂಗ್ ನಡೆದಿದೆಯಲ್ಲ ಎಂದು ಕೇಳಿದಾಗ ಅವರು ಈ ರೀತಿ ಉತ್ತರಿಸಿದರಲ್ಲದೇ ಎಲ್ಲ ಸೇರಿ ಊಟ ಮಾಡೋದ್ರಲ್ಲಿ ತಪ್ಪು ಹುಡುಕಬೇಡಿ ಎಂದರು.ಅಲ್ಲಿ ಬರೀ ನಾಲ್ಕೈದು ಜನ ಸೇರಿದ್ರಂತೆ ಅನ್ನೋದಕ್ಕೆ ಉತ್ತರಿಸಿ ಡಿಕೆಶಿ ಅದು ನನಗ್ಯಾಕೆ ಬೇಕು. ನನ್ನನ್ಯಾಕೆ ಈ ಪ್ರಶ್ನೆ ಕೇಳ್ತೀರಿʼ ಎಂದು ಮರು ಪ್ರಶ್ನಿಸಿದರು.
ಇದನ್ನೂ ಓದಿ: ಸಿಎಂ ಪಟ್ಟಕ್ಕಾಗಿ ದೇವಿ ಮೊರೆ ಹೋದ ಡಿಕೆಶಿ! – ಹಿಂಗಾರ ಪ್ರಸಾದ ಕರುಣಿಸುತ್ತಾಳಾ ಜಗದೀಶ್ವರಿ?
ವಿಜಯೇಂದ್ರ ಅವರಿಗೆ ಕಾಲವೇ ಉತ್ತರ ನೀಡುತ್ತದೆ
ನಿಮ್ಮನ್ನು ಭ್ರಷ್ಟಾಚಾರದ ಪಿತಾಮಹ ಎಂದು ವಿಜಯೇಂದ್ರ ಕರೆದಿರುವ ಬಗ್ಗೆ ಕೇಳಿದಾಗ, ʼವಿಜಯೇಂದ್ರ ಅವರಿಗೆ ಸೂಕ್ತ ಸಮಯದಲ್ಲಿ ಉತ್ತರ ನೀಡೋಣ. ಹೈಕಮಾಂಡ್ಗೆ ನಾವು ಎಟಿಎಂ ಎಂದು ವಿಜಯೇಂದ್ರ ಹೇಳಿದ್ದಾರೆ. ಇದನ್ನು ಅವರು ಸಾಬೀತು ಮಾಡಬೇಕು. ಯಾವ ಲೆಕ್ಕಾಚಾರದ ಮೇಲೆ ಅವರು ಆರೋಪ ಮಾಡಿದ್ದಾರೆ. ಇಲ್ಲಿ ಸರ್ಕಾರನಾ ನಾವು ದಿವಾಳಿ ಮಾಡಿ ದುಡ್ಡು ತೆಗೆದುಕೊಂಡು ಹೋಗಿ ಹೈಕಮಾಂಡ್ಗೆ ಕೊಡುತ್ತಿದ್ದೇವೆ, ನಾವು ಹೈ ಕಮಾಂಡ್ಗೆ ಎಟಿಎಂ ಎಂದು ಹೇಳಿದ್ದಾರೆ. ಈಗ ಏನು ಹೇಳಬೇಕು ಅದನ್ನು ಹೇಳಿದ್ದೇನೆ. ಉಳಿದ ಉತ್ತರಕ್ಕೆ ಸಮಯ ಬರುತ್ತದೆ, ಕಾಲವೇ ಉತ್ತರ ನೀಡುತ್ತದೆ. ಅವರಿಗೆ ಏನು ಬೇಕೋ ಆ ಉತ್ತರ ಈಗಾಗಲೇ ನೀಡಿದ್ದೇನೆʼ ಎಂದರು.
ತಮ್ಮ ಆಪ್ತ ಕಾರ್ಯದರ್ಶಿ ರಾಜೇಂದ್ರ ಪ್ರಸಾದ್ ಅವರ ಕಾರು ಅಪಘಾತದ ಬಗ್ಗೆ ಕೇಳಿದಾಗ, ʼರಾಜೇಂದ್ರ ಪ್ರಸಾದ್ ಅವರನ್ನು ವೈದ್ಯರು ತಪಾಸಣೆ ನಡೆಸಿದ್ದಾರೆ. ಯಾವುದೇ ಆತಂಕ ಪಡಬೇಕಿಲ್ಲ. ಕತ್ತಿನ ಬಳಿ ನೋವಿದೆ. ಒಂದೆರಡು ದಿನ ವಿಶ್ರಾಂತಿ ಬೇಕು ಎಂದು ಹೇಳಿದ್ದಾರೆ. ತೀವ್ರ ತರನಾದ ತೊಂದರೆ ಉಂಟಾಗಿಲ್ಲ. ದೇವಿ ಯಲ್ಲಮ್ಮನೇ ಕಾಪಾಡಿದ್ದಾಳೆ ಎಂದರು.

ನೋಡಿರಿ

