ಕಲ್ಯಾಣ ಕರ್ನಾಟಕದ ಶಿಕ್ಷಣ ಪರಿಸ್ಥಿತಿ ಸುಧಾರಿಸಲು – ಶಿಕ್ಷಣ ತಜ್ಞರಾದ ಛಾಯಾ ದೇಗಾಂವ್ಕರ್  ಅವರ ಅಧ್ಯಕ್ಷತೆಯಲ್ಲಿಸಮಿತಿ ರಚನೆ

ಕಲ್ಯಾಣ ಕರ್ನಾಟಕದ ಶಿಕ್ಷಣ ಪರಿಸ್ಥಿತಿ ಸುಧಾರಿಸಲು  – ಶಿಕ್ಷಣ ತಜ್ಞರಾದ ಛಾಯಾ ದೇಗಾಂವ್ಕರ್  ಅವರ ಅಧ್ಯಕ್ಷತೆಯಲ್ಲಿಸಮಿತಿ ರಚನೆ

ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಪ್ರಗತಿಗೆ ಛಾಯಾ ದೇಗಾಂವ್ಕರ್ ವರದಿಯ ಶಿಫಾರಸುಗಳ ಜಾರಿಗೆ ನಮ್ಮ ಸರ್ಕಾರ ಬದ್ಧ ಎಂದು ಸಿಎಂ ಸಿದ್ದರಾಮಯ್ಯ ಸದನದಲ್ಲಿ ಘೋಷಿಸಿದರು. ಉತ್ತರ ಕರ್ನಾಟಕದ ಕುರಿತ ಚರ್ಚೆ ವೇಳೆ ಈ ಬಗ್ಗೆ ಮಾತನಾಡಿರುವ ಸಿಎಂ, ಕಲ್ಯಾಣ ಕರ್ನಾಟಕದ ಶಿಕ್ಷಣ ಪರಿಸ್ಥಿತಿಯನ್ನು ಸುಧಾರಿಸಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧ್ಯಯನ ಮಾಡಲು ಶಿಕ್ಷಣ ತಜ್ಞರಾದ ಛಾಯಾ ದೇಗಾಂವ್ಕರ್  ಅವರ ಅಧ್ಯಕ್ಷತೆಯಲ್ಲಿ ಸಮಿತಿಯೊಂದನ್ನು ರಚಿಸಿದ್ದೇವೆ. ಸಮಿತಿಯು ವರದಿ ಸಲ್ಲಿಸಲು ಸಮಯ ಕೇಳಿದೆ. ಕೂಡಲೇ ವರದಿ ಸ್ವೀಕರಿಸಿ ಸಾಧಕ ಬಾಧಕ ಪರಿಶೀಲಿಸಿ ಅನುಷ್ಠಾನ ಮಾಡಲಾಗುವುದು ಎಂದು ಸಿಎಂ ತಿಳಿಸಿದರು.

ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಕುರಿತ ಚಿಂತನೆಗಳನ್ನು ಗಮನದಲ್ಲಿಟ್ಟುಕೊಂಡೆ ಹಿಂದೆ 1980ರ ಆಸುಪಾಸಿನಲ್ಲಿ ಧರಂಸಿಂಗ್ ಅವರ ಅಧ್ಯಕ್ಷತೆಯಲ್ಲಿ ಹೈಪವರ್ ಸಮಿತಿಯನ್ನು ಪ್ರಾರಂಭಿಸಲಾಯಿತು. ಹೈ ಪವರ್ ಕಮಿಟಿ ವರದಿಯನ್ನು ಆಧರಿಸಿ 1991 ಆ ರಲ್ಲಿ ಎಚ್.ಕೆ.ಡಿ.ಬಿ. ಯನ್ನು ಪ್ರಾರಂಭಿಸಲಾಯಿತು. ಆಗ ಯಾವ ಸರ್ಕಾರ ಇತ್ತು? ಎಂದು ಪ್ರಶ್ನಿಸಿದರು. 2002ರಲ್ಲಿ ಡಾ. ಡಿ.ಎಂ. ನಂಜುಂಡಪ್ಪನವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ವರದಿ ಪಡೆದಿದ್ದೆವು. ಸದರಿ ವರದಿಯನ್ನು ಆಧರಿಸಿ ಸುಮಾರು 35,000 ಕೋಟಿ ರೂ.ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಅತ್ಯಂತ ಹಿಂದುಳಿದ, ಅತಿ ಹಿಂದುಳಿದ ಹಾಗೂ ಹಿಂದುಳಿದ ತಾಲೂಕುಗಳ ಅಭಿವೃದ್ಧಿಗಾಗಿ ಖರ್ಚು ಮಾಡಿದ್ದೇವೆ. 2002 ರಲ್ಲಿ ಯಾವ ಸರ್ಕಾರವಿತ್ತು?

ಇದನ್ನೂ ಓದಿ: ಪ್ರಧಾನಿ ಮೋದಿ ಜೊತೆ ನಗು ನಗುತ್ತಾ ಹರಟೆ ಹೊಡೆದ ಪ್ರಿಯಾಂಕಾ ಗಾಂಧಿ & ಖರ್ಗೆ

ವಾಜಪೇಯಿಯವರ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವು ಆರ್ಟಿಕಲ್ 371 ಜೆ ಕೊಡಲು ಸಾಧ್ಯವಿಲ್ಲ ಎಂದಿದ್ದರು. ಆದರೆ ಮನಮೋಹನ್ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರದಲ್ಲಿ 6-11-2013 ರಂದು ಕಲ್ಯಾಣ ಕರ್ನಾಟಕ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದ್ದ ವಿಶೇಷ ಸ್ಥಾನಮಾನದ 371 ಜೆ ಅನುಷ್ಠಾನ ಮಾಡಲಾಯಿತು. 371 ಜೆ ಅನುಷ್ಠಾನವಾದ ಮೇಲೆ ಆ ಭಾಗದ ಅಭಿವೃದ್ಧಿಗಾಗಿ 24,778 ಕೋಟಿ ರೂಗಳನ್ನು ಒದಗಿಸಿದ್ದೇವೆ. ಇದುವರೆಗೆ ಸುಮಾರು 14,800 ಕೋಟಿ ರೂ ಗಳಿಗಿಂತ ಹೆಚ್ಚಿನ ಅನುದಾನಗಳನ್ನು ಖರ್ಚು ಮಾಡಲಾಗಿದೆ ಎಂದು ಸಿಎಂ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶಗಳನ್ನು ಸೃಷ್ಟಿಸಿದ್ದು ನಮ್ಮ ಸರ್ಕಾರ. 371 ಜೆ ಸ್ಥಾನಮಾನ ದೊರೆತ ನಂತರ ತಾಂತ್ರಿಕ, ವೈದ್ಯಕೀಯ ಶಿಕ್ಷಣ ಹಾಗೂ ಇನ್ನಿತರ ಪದವಿ ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಶೇ.70 ರಷ್ಟು ಸ್ಥಾನಗಳನ್ನು ಮತ್ತು ರಾಜ್ಯದ ಉಳಿದ ಭಾಗಗಳಲ್ಲಿ ಶೇ.8 ರಷ್ಟು ಸ್ಥಾನಗಳನ್ನು ಈ ಭಾಗದ ಅಭ್ಯರ್ಥಿಗಳಿಗೆ ಮೀಸಲಿಡಲಾಗಿದೆ. ಇದರ ಪರಿಣಾಮ 2014-15 ರಿಂದ 2024 ರ ಶೈಕ್ಷಣಿಕ ಸಾಲಿನವರೆಗೆ 10,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ವೈದ್ಯಕೀಯ, 31,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ಇದಲ್ಲದೆ 12,000 ಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳು ದಂತ ವೈದ್ಯಕೀಯ, ಹೋಮಿಯೋಪತಿ, ಕೃಷಿ ಸಂಬAಧಿತ, ಬಿ-ಫಾರ್ಮಸಿ/ ಡಿ-ಫಾರ್ಮಸಿ ಕೋರ್ಸುಗಳು ಮುಂತಾದವುಗಳಿಗೆ ಮೀಸಲಾತಿ ಸೌಲಭ್ಯದಿಂದ ಉನ್ನತ ಶಿಕ್ಷಣ ಪಡೆಯಲು ಸಾಧ್ಯವಾಗಿದೆ. ಈ ವರ್ಷದ ಅಂಕಿ ಅಂಶಗಳೂ ಸೇರಿದರೆ ಇನ್ನಷ್ಟು ಹೆಚ್ಚಿನ ವಿದ್ಯಾರ್ಥಿಗಳಿಗೆ ಅನುಕೂಲವಾಗಿರುವುದು ತಿಳಿಯುತ್ತದೆ.

Kishor KV