ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ! –  ಈ ಮಾರ್ಗದಲ್ಲಿ ಮೆಟ್ರೋ ಸೇವೆ 1 ಗಂಟೆ ಲೇಟ್‌ !

ನಾಳೆ ನಮ್ಮ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ! –  ಈ ಮಾರ್ಗದಲ್ಲಿ ಮೆಟ್ರೋ ಸೇವೆ 1 ಗಂಟೆ ಲೇಟ್‌ !

ಸಿಲಿಕಾನ್‌ ಸಿಟಿ ಮಂದಿಗೆ ಮಹತ್ವದ ಸುದ್ದಿಯಿದೆ. ನಾಳೆ ಈ ಮಾರ್ಗದಲ್ಲಿ ಮೆಟ್ರೋ ಸೇವೆ ಒಂದು ಗಂಟೆ ತಡವಾಗಿ ಆರಂಭವಾಗಲಿದೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಇದನ್ನೂ ಓದಿ: ಸೀಕ್ರೆಟ್‌ ರೂಮ್‌ನಲ್ಲಿ ನೆಮ್ಮದಿ ಇಲ್ಲ ಎಂದ ರಕ್ಷಿತಾಗೆ ಟಾಂಗ್‌ ಕೊಟ್ಟ ಕಿಚ್ಚ ಸುದೀಪ್!‌

ನಮ್ಮ ಮೆಟ್ರೋ ಹಳದಿ ಮಾರ್ಗ ಆರ್‌.ವಿ. ರಸ್ತೆಯಿಂದ ಬೊಮ್ಮಸಂದ್ರದವರೆಗೆ ಸಂಪರ್ಕ ಕಲ್ಪಿಸುತ್ತದೆ. ಈ ಮಾರ್ಗದಲ್ಲಿ ನಾಳೆ ಒಂದು ಗಂಟೆ ತಡವಾಗಿ ಮೆಟ್ರೋ ಸೇವೆ ಆರಂಭವಾಗಲಿದೆ. ಮೆಟ್ರೋದಲ್ಲಿ ತುರ್ತು ವ್ಯವಸ್ಥಾ ನಿರ್ವಹಣೆ, ನವೀಕರಣ ಕಾರ್ಯ ನಡೆಸಲಾಗುತ್ತಿದೆ. ಈ ಹಿನ್ನೆಲೆ ಇದೇ ಡಿ.21 (ಭಾನುವಾರ) ಹಳದಿ ಮಾರ್ಗದ ಮೆಟ್ರೋ ರೈಲು ಸೇವೆಗಳು ನಿಗದಿತ ಸಮಯಕ್ಕಿಂತ ಒಂದು ಗಂಟೆ ತಡವಾಗಿ ಆರಂಭವಾಗಲಿವೆ ಎಂದು ಬಿಎಂಆರ್‌ಸಿಎಲ್‌ ಮಾಹಿತಿ ನೀಡಿದೆ.

ಹಳದಿ ಮಾರ್ಗದಲ್ಲಿ ಭಾನುವಾರ ಮೊದಲ ರೈಲು ಸೇವೆ ಬೆಳಿಗ್ಗೆ 7.00 ಗಂಟೆಯ ಬದಲಾಗಿ ಬೆಳಿಗ್ಗೆ 8.00 ಗಂಟೆಗೆ ಪ್ರಾರಂಭವಾಗಲಿದೆ. ಬಳಿಕ ಸಾಮಾನ್ಯ ವೇಳಾಪಟ್ಟಿಯಂತೆ ರೈಲು ಸಂಚರಿಸಲಿದೆ. ಈ ಬದಲಾವಣೆ ಕೇವಲ ಒಂದು ದಿನಕ್ಕೆ ಮಾತ್ರ ಅನ್ವಯವಾಗಲಿದೆ ಎಂದು ತಿಳಿಸಿದೆ. ಇನ್ನು ನೇರಳೆ ಹಾಗೂ ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಪ್ರಯಾಣಿಕರು ಈ ತಾತ್ಕಾಲಿಕ ಬದಲಾವಣೆಯನ್ನು ಗಮನಿಸಿ, ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್‌ ಮನವಿ ಮಾಡಿದೆ.

ಪ್ರಯಾಣಿಕರಿಗೆ ಉಂಟಾಗುವ ಯಾವುದೇ ಅಸೌಕರ್ಯಕ್ಕೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತಿದ್ದು, ಸಾರ್ವಜನಿಕರಿಂದ ನಿರಂತರ ಸಹಕಾರ ಮತ್ತು ಸಹನೆಯನ್ನು ಕೋರುತ್ತದೆ ಎಂದು ತಿಳಿಸಿದೆ.

Shwetha M