ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ವಿ. ಸೋಮಣ್ಣ ಲಾಬಿ? – ಕಮಲ ಪಾಳಯದಲ್ಲೂ ನಾಯತಕ್ವ ಬದಲಾವಣೆ?

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ವಿ. ಸೋಮಣ್ಣ ಲಾಬಿ? – ಕಮಲ ಪಾಳಯದಲ್ಲೂ ನಾಯತಕ್ವ ಬದಲಾವಣೆ?

ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯಾಗುತ್ತಿದೆ. ಕಾಂಗ್ರೆಸ್‌ನಲ್ಲಿ ಸಿಎಂ ಬದಲಾವಣೆ ಕೂಗು ಜೋರಾಗಿದೆ. ಡಿಕೆ ಶಿವಕುಮಾರ್‌ ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟಿದ್ದಾರೆ. ಇದ್ರ ನಡುವೆ ಬಿಜೆಪಿಯಲ್ಲೂ ರಾಜ್ಯಾಧ್ಯಕ್ಷ ಸ್ಥಾನದ ಕುರಿತು ಹಗ್ಗ ಜಗ್ಗಾಟ ನಡೆಯುತ್ತಿದೆ.

ಇದನ್ನೂ ಓದಿ: ರಾಜ್ಯದ ಗೃಹಲಕ್ಷ್ಮೀಯರಿಗೆ ಗುಡ್‌ನ್ಯೂಸ್!‌ – ಈ ವಾರವೇ ಬರಲಿದೆ ಗೃಹಲಕ್ಷ್ಮಿ 2000 ಹಣ!

ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರ ಸದ್ದು ಮಾಡ್ತಿದೆ. ಈಗಾಗಲೇ ಬಿಜೆಪಿ ನಾಯಕರು ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ನಾನಾ ಕಾರಣ ನೀಡಿ ದೆಹಲಿ ಪ್ರವಾಸ ಮಾಡುತ್ತಾ ವರಿಷ್ಠರನ್ನು ಭೇಟಿಯಾಗಿದ್ದಾರೆ. ಇದೀಗ ರಾಜ್ಯಾಧ್ಯಕ್ಷ ಸ್ಥಾನಕ್ಕಾಗಿ ಬಂಡಾಯ ನಾಯಕರೊಂದಿಗೆ ಕೇಂದ್ರ ಸಚಿವ ವಿ. ಸೋಮಣ್ಣ ಅವರೂ ಕೂಡ ಲಾಬಿ ನಡೆಸುತ್ತಿದ್ದಾರೆ ಎಂಬ ಮಾತು ಕೇಳಿ ಬಂದಿದೆ. ಈ ಬಗ್ಗೆ ವಿ ಸೋಮಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ಸೋಮಣ್ಣ, ನಾನು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ಮೇಲೆ ನನಗೆ ಯಾವುದೇ ಆಸಕ್ತಿಯಿಲ್ಲ. ಈ ಕುರಿತು ತೀರ್ಮಾನವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಗೃಹ ಸಚಿವ ಅಮಿತ್ ಶಾ ಅವರ ಸೂಚನೆಯ ಮೇರೆಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ತುಮಕೂರು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದೇನೆ. ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಬಿಜೆಪಿ ಈಗಾಗಲೇ ಗೌರವ ನೀಡಿದೆ ಎಂದು ತಿಳಿಸಿದರು.

Shwetha M