ಬೆಳ್ಳಂಬೆಳಗ್ಗೆ ಭ್ರಷ್ಟರ ಬೇಟೆ – ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಲೋಕಾಯುಕ್ತ ರೈಡ್

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. 4 ಜಿಲ್ಲೆಗಳಲ್ಲಿ ಲೋಕಾಯುಕ್ತ ತಂಡಗಳು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ರೈಡ್ ಮಾಡಿ, ಕಡತಗಳ ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ರಾಯಚೂರು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಹಲವು ಅಧಿಕಾರಿಗಳ ಮನೆಗಳು, ಕಚೇರಿಗಳು ಲೋಕಾಯುಕ್ತ ಅಧಿಕಾರಿಗಳ ದಾಳಿಗೆ ಈಡಾಗಿವೆ. ಈ ಅಧಿಕಾರಿಗಳ ಮೇಲೆ ವ್ಯಾಪಕ ಭ್ರಷ್ಟಾಚಾರ, ಹಗರಣಗಳ ಆರೋಪಗಳು ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ.
ಇದನ್ನೂ ಓದಿ: RCB ಮಾಸ್ಟರ್ ಮೈಂಡ್ DK – ಹರಾಜಿನಲ್ಲೇ SMART ಐಡಿಯಾ
ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕನ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ. ಬಾಗಲಕೋಟೆಯ ಜಿಲ್ಲಾಪಂಚಾಯತ್ ಯೋಜನಾ ನಿರ್ದೇಶಕ ಎಸ್.ಎಂ.ಕಾಂಬಳೆ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆ, ಗದಗ ಜಿಲ್ಲೆ ನರಗುಂದ ಮನೆಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ವಿಜಯಪುರ ಜಿಲ್ಲೆಯ ಬಾಗೇವಾಡಿಯ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಪ್ಪ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡಸಿದ್ದಾರೆ. ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಮಾರುತಿ ಯಶವಂತ ಮಾಳವಿ ಮನೆ ಮೇಲೆ ದಾಳಿಯಾಗಿದೆ. ರಾಯಚೂರು ಜಿಲ್ಲೆಯಲ್ಲಿ ನಿವೃತ್ತ ಮಹಿಳಾ ಅಧಿಕಾರಿ ವಿಜಯಲಕ್ಷ್ಮೀ ಮನೆಯಲ್ಲಿ ಲೋಕಾಯಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ನೋಡಿರಿ

