ಕೊಹ್ಲಿ ಫ್ಯಾನ್ಸ್‌ಗೆ ಬಿಗ್‌ಶಾಕ್! – ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜನೆಗೆ ಅನುಮತಿ ಇಲ್ಲ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ವಿಜಯ್ ಹಜಾರೆ ಟ್ರೋಫಿ ಪಂದ್ಯಗಳನ್ನು ನಡೆಸಲು ಕೆಎಸ್‌ಸಿಎ ಸಿದ್ಧತೆ ನಡೆಸಿಕೊಂಡಿತ್ತು. ಆದ್ರೀಗ ಕೆಎಸ್‌ಸಿಎಗೆ ಪೊಲೀಸ್ ಇಲಾಖೆ ಶಾಕ್ ಕೊಟ್ಟಿದೆ. ವಿಜಯ್ ಹಜಾರೆ ಟೂರ್ನಿ ಪಂದ್ಯಕ್ಕೆ ಅನುಮತಿ ನೀಡಲು ನಿರಾಕರಿಸಿದೆ.
ಇದನ್ನೂ ಓದಿ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ದೊಡ್ಮನೆ! – ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟ ರಾಶಿಕಾ, ಸೂರಜ್ ಫ್ಯಾಮಿಲಿ!
ಕಳೆದ ಜುಲೈನಲ್ಲಿ ಆರ್‌ಸಿಬಿ ವಿಜಯೋತ್ಸವ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದ ಬಳಿಕ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕ್ರಿಕೆಟ್ ಪಂದ್ಯಗಳನ್ನ ಸ್ಥಗಿತಗೊಳಿಸಲಾಗಿತ್ತು. ಇಲ್ಲಿವರೆಗೂ ಯಾವುದೇ ಪಂದ್ಯ ನಡೆದಿರಲಿಲ್ಲ. ಕೆಎಸ್‌ಸಿಎ ನಾಳೆ ವಿಜಯ್ ಹಜಾರೆ ಟ್ರೋಫಿ ಪಂದ್ಯ ಆಯೋಜನೆಗೆ ಸಿದ್ಧತೆ ನಡೆಸಿತ್ತು. ದೆಹಲಿ ಮತ್ತು ಆಂಧ್ರಪ್ರದೇಶ ನಡುವೆ ಪಂದ್ಯ ನಡೆಯಬೇಕಿತ್ತು. ಪ್ರೇಕ್ಷಕರಿಗೆ ಅವಕಾಶ ಇಲ್ಲದೆ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥ ವೆಂಕಟೇಶ್ ಪ್ರಸಾದ್ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದ್ದರು. ಆದ್ರೆ ವಿಜಯ್ ಹಜಾರೆ ಟೂರ್ನಿಯ ಪಂದ್ಯಕ್ಕೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ. ಇದ್ರಿಂದಾಗಿ ಕ್ರಿಕೆಟ್ ಫ್ಯಾನ್ಸ್‌ಗೆ ನಿರಾಸೆಯಾಗಿದೆ.
ಅನುಮತಿ ನಿರಾಕರಣೆಗೆ ಕಾರಣವೇನು?
ಸ್ಟೇಡಿಯಂನಲ್ಲಿ ಇನ್ನಷ್ಟು ಸುರಕ್ಷತಾ ಕ್ರಮ ಅಳವಡಿಸಿಕೊಳ್ಳಬೇಕು ಎಂಬ ಅಭಿಪ್ರಾಯ ಬಂದಿದೆ. ಜೊತೆಗೆ ನಾಳೆ ಮ್ಯಾಚ್‌ಗೆ ವಿರಾಟ್ ಕೊಹ್ಲಿ ಆಗಮಿಸುವುದರಿಂದ ಹೊರಭಾಗದಲ್ಲಿ ಅಭಿಮಾನಿಗಳು ಸೇರುವ ಆತಂಕ ವ್ಯಕ್ತವಾಗಿದೆ.
ಸ್ಟೇಡಿಯಂ ಗೇಟ್ ಹೊರಭಾಗದಲ್ಲಿಯೇ ಕಾಲ್ತುಳಿತ ದುರಂತ ಸಂಭವಿಸಿತ್ತು. ಹೀಗಾಗಿ ನಾಳೆ ಮತ್ತಷ್ಟು ಅಭಿಮಾನಿಗಳು ಸೇರಿದರೆ ಕಷ್ಟ ಅನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಗೇಟ್ ಅಗಲೀಕರಣ ಮತ್ತು ಜನ ಒಡಾಡಲು ಅನುಕೂಲವಾಗುವ ವಾತಾವರಣವನ್ನು ಸ್ಟೇಡಿಯಂ ನಿರ್ಮಾಣ ಮಾಡದ ಕಾರಣ ಪೊಲೀಸರು ಪಂದ್ಯ ಆಯೋಜನೆಗೆ ಅನುಮತಿ ನೀಡಿಲ್ಲ.
ಬುಧವಾರ ದೆಹಲಿ ಮತ್ತು ಆಂಧ್ರಪ್ರದೇಶದ ಮಧ್ಯೆ ಮೊದಲ ಪಂದ್ಯ ನಿಗದಿಯಾಗಿತ್ತು. ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದೆಹಲಿ ಪರ ಕಣಕ್ಕೆ ಇಳಿಯಬೇಕಿತ್ತು.
ಪ್ರೇಕ್ಷಕರಿಗೆ ಅವಕಾಶ ಇಲ್ಲದೇ ಪಂದ್ಯ ಆಯೋಜಿಸಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮುಖ್ಯಸ್ಥ ವೆಂಕಟೇಶ್ ಪ್ರಸಾದ್ ಗೃಹ ಸಚಿವ ಪರಮೇಶ್ವರ್ ಅವರಲ್ಲಿ ಮನವಿ ಮಾಡಿದ್ದರು.
ಕಾಲ್ತುಳಿತದಿಂದಾಗಿ ಚಿನ್ನಸ್ವಾಮಿ ಕ್ರೀಡಾಂಗಣದಿಂದ ಪಂದ್ಯಗಳು ಬೇರೆಡೆಗೆ ಸ್ಥಳಾಂತರಗೊಂಡಿರುವ ಹಿನ್ನೆಲೆ ಕ್ರೀಡಾಂಗಣದಲ್ಲಿ ಮತ್ತೆ ಇನ್ಯಾವುದೇ ಅನಾಹುತ ಆಗದಂತೆ ಪ್ರಾರ್ಥಿಸಿ ಕೆಎಸ್‌ಸಿಎಯಿಂದ ಸೋಮವಾರ ಹೋಮ ನಡೆಸಲಾಗಿತ್ತು. ಕ್ರೀಡಾಂಗಣದ ಸಭಾಂಗಣದಲ್ಲಿ ಕೆಎಸ್‌ಸಿಎ ಅಧಿಕಾರಿಗಳು ಸುದರ್ಶನ, ಗಣಪತಿ ಹೋಮ ನೆರವೇರಿಸಿದ್ದರು.

ನೋಡಿರಿ

