ಬೆಂಗಳೂರಿಂದ ಗೋಕರ್ಣ ಹೊರಟಿದ್ದ ಬಸ್‌ನನಲ್ಲಿ ಅಗ್ನಿ ದುರಂತ – 9 ಮಂದಿ ಸಜೀವ ದಹನ

ಚಿತ್ರದುರ್ಗದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿದೆ. ಪರಿಣಾಮ 9 ಮಂದಿ ಪ್ರಯಾಣಿಕರು ಸಜೀವದಹನವಾಗಿದ್ದಾರೆ
ಈ ಘಟನೆ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಸೀಬರ್ಡ್ ಸ್ಲೀಪರ್ ಕೋಚ್ ಬಸ್‌ಗೆ ಎದುರಿನಿಂದ ಬಂದ ಲಾರಿಯೊಂದು ಗುದ್ದಿದೆ. ಲಾರಿ ಚಾಲಕನ ಅತಿವೇಗ ಹಾಗೂ ಅಜಾಗರೂಕತೆಯಿಂದ ಡಿವೈಡರ್ ದಾಟಿ ಬಸ್ಸಿಗೆ ಡಿಕ್ಕಿ ಹೊಡೆದಿದೆ. ಲಾರಿ ಗುದ್ದಿದ ರಭಸಕ್ಕೆ ಬಸ್ಸಿಗೆ ಬೆಂಕಿ ಹೊತ್ತುಕೊಂಡು 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ 14 ಮಹಿಳೆಯರು ಹಾಗೂ 15 ಪುರುಷರು ಇದ್ದರು. ಗಾಯಗೊಂಡ 21 ಮಂದಿಯನ್ನು ಹಿರಿಯೂರು ಮತ್ತು ಚಿತ್ರದುರ್ಗದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಈ ಲಾರಿ ಡಿಕ್ಕಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತಿತ್ತು ಎಂದು ಹೇಳಲಾಗ್ತಿದೆ. ಹಿರಿಯೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ. ಘಟನೆ ಕುರಿತು ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ (KA 01 AE 5217) ಸುಗಮವಾಗಿ ಸಂಚರಿಸುತ್ತಿತ್ತು. ಆದರೆ ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಬಂದು ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಕಿಡಿ ಉಂಟಾಗಿ ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ ಎಂದು ತಿಳಿಸಿದ್ದಾರೆ.
ಪೂರ್ವ ವಲಯದ ಐಜಿಪಿ ರವಿಕಾಂತೇಗೌಡ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ನೀಡಿದ್ದು, ‘ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿದ್ದ ಬಸ್ (KA 01 AE 5217) ಸುಗಮವಾಗಿ ಸಂಚರಿಸುತ್ತಿತ್ತು. ಆದರೆ ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಡಿವೈಡರ್ ದಾಟಿ ಬಂದು ಬಸ್ಸಿನ ಡೀಸೆಲ್ ಟ್ಯಾಂಕ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಕಿಡಿ ಉಂಟಾಗಿ ಕ್ಷಣಾರ್ಧದಲ್ಲಿ ಇಡೀ ಬಸ್ ಬೆಂಕಿಯ ಕೆನ್ನಾಲಿಗೆಗೆ ತುತ್ತಾಗಿದೆ’ ಎಂದು ವಿವರಿಸಿದ್ದಾರೆ.
ಬಸ್ಸಿನಿಂದ ಎಂಟು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಮೃತರ ಗುರುತು ಪತ್ತೆ ಹಚ್ಚುವುದು ಕಷ್ಟವಾಗಿರುವುದರಿಂದ ಬೆಂಗಳೂರಿನಿಂದ ವಿಧಿವಿಜ್ಞಾನ ಮತ್ತು ಡಿಎನ್‌ಎ (DNA) ತಂಡಗಳನ್ನು ಕರೆಸಲಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ.

ನೋಡಿರಿ

