ಚಿತ್ರದುರ್ಗ ಬಸ್ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಚಿತ್ರದುರ್ಗದ ಜಿಲ್ಲೆ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ಭೀಕರ ರಸ್ತೆ ಅಪಘಾತದಲ್ಲಿ 9ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಇದೀಗ ರಾಜ್ಯ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಸಂತಾಪ ಸೂಚಿಸಿ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ.
ಇದನ್ನೂ ಓದಿ: ಮನೆಗೆ ಬರ್ತಿದ್ದಂತೆ ಎಲ್ಲಿ ನಮ್ಮ ಟಗರು ಮರಿ ಎಂದು ಗಿಲ್ಲಿಗೆ ಬಾರಿಸಿದ ತಂದೆ! – ಗಿಲ್ಲಿಗೆ ಎಣ್ಣೆ ಸ್ನಾನ ಮಾಡಿಸಿದ ಅಮ್ಮ!
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಚಿತ್ರದುರ್ಗ ಬಳಿ ಸಂಭವಿಸಿದ ಲಾರಿ ಮತ್ತು ಬಸ್ ನಡುವಿನ ಅಪಘಾತದಲ್ಲಿ ಹಲವು ಪ್ರಯಾಣಿಕರು ಸಜೀವ ದಹನವಾದ ಘೋರ ದುರಂತದ ಸುದ್ದಿ ಕೇಳಿ ಎದೆ ನಡುಗಿತು. ಕ್ರಿಸ್ಮಸ್ ರಜೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಕೊನೆಗೊಂಡಿರುವುದು ವಿಷಾದನೀಯ. ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದರ ಜತೆಗೆ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.
ಈ ಅಪಘಾತಕ್ಕೆ ಸಂಬಂಧಿಸಿದಂತೆ ಕಾರಣದ ಬಗ್ಗೆ ಸರಿಯಾದ ತನಿಖೆ ನಡೆಸಬೇಕು. ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಘಟನೆಯಲ್ಲಿ ಗಾಯಗೊಂಡವರು ಆದಷ್ಟು ಶೀಘ್ರ ಗುಣಮುಖರಾಗಲಿ. ಮೃತರ ಆತ್ಮಕ್ಕೆ ಶಾಂತಿ ಲಭಿಸಲಿ ಎಂದು ಮತ್ತೊಮ್ಮೆ ಪ್ರಾರ್ಥಿಸುತ್ತೇನೆ. ಇನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಕೂಡ ಸಂತಾಪ ಸೂಚಿಸಿದ್ದಾರೆ.
ಹೆಲ್ಪ್ ಲೈನ್ ಪ್ರಕಟಣೆ
ಗೊರ್ಲತ್ತು ಬಳಿ ಲಾರಿ, ಬಸ್ ಭೀಕರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಹೆಲ್ಪ್ ಲೈನ್ ಪ್ರಕಟಣೆ ಮಾಡಲಾಗಿದೆ ಎಂದು ಚಿತ್ರದುರ್ಗದ ಎಸ್ಪಿ ರಂಜಿತ್ ಬಂಡಾರು ಮಾಹಿತಿ ನೀಡಿದ್ದಾರೆ. ಸಾರ್ವಜನಿಕರ ಈ ಹೆಲ್ಪ್‌ಲೈನ್ ನಂಬರ್ 9480803100, 08194222782, 9480803170 ಗೆ ತುರ್ತು ಸಹಾಯವನ್ನು ಪಡೆಯಬಹುದು ಎಮದು ಹೇಳಲಾಗಿದೆ.

ನೋಡಿರಿ

