ಗೊತ್ತಿಲ್ಲದೇ 39 ರ ಆಂಟಿ ಪ್ರೀತಿಯಲ್ಲಿ ಬಿದ್ದ – ಮದುವೆ ಆಗು ಎಂದಿದ್ದಕ್ಕೆ ರಾತ್ರೋರಾತ್ರಿ ಕಥೆಯನ್ನೇ ಮುಗಿಸಿದ!

ಈಗ್ ಈಗ ಪ್ರೀತಿ ಪ್ರೇಮದ ಬಲೆಯಲ್ಲಿ ಬಿದ್ದು ಪ್ರಾಣ ಕಳೆದುಕೊಳ್ಳುವರ ಸಂಖ್ಯೆ ಹೆಚ್ಚಿದೆ. ಅದರಂತೆ ಬೆಂಗಳೂರಿನಲ್ಲಿ ಘಟನೆ ನಡೆದಿದೆ. ಡಿಸೆಂಬರ್ 24ರ ರಾತ್ರಿ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ಮನೆಯೊಂದರಲ್ಲಿ ಒಂಟಿಯಾಗಿದ್ದ ಸ್ಟಾಫ್ ನರ್ಸ್ ಭೀಕರ ಅಂತ್ಯವಾಗಿದೆ. ಬಾಡಿಗೆ ಮನೆಯಲ್ಲಿ ಒಂಟಿಯಾಗಿದ್ದ ಸಂದರ್ಭದಲ್ಲಿ ಮನೆಯೊಳಗೆ ಪ್ರವೇಶಿದ ಆಕೆಯ ಪ್ರಿಯಕರ ಆಕೆಯ ಹತ್ಯೆ ಮಾಡಿದ್ದು, ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮದುವೆಯಾಗದೆ ಒಂಟಿಯಾಗಿದ್ದ 39 ವರ್ಷದ ಮಮತಾ, ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಕುಮಾರಸ್ವಾಮಿ ಲೇಔಟ್‌ನಲ್ಲಿ ತಮ್ಮ ಸ್ನೇಹಿತೆಯೊಂದಿಗೆ ಬಾಡಿಗೆ ಮನೆ ಮಾಡಿಕೊಂಡಿದ್ದರು. ಡಿಸೆಂಬರ್ 24ರಂದು ಆಕೆಯ ಸ್ನೇಹಿತೆ ಊರಿಗೆ ತೆರಳಿದ್ದರಿಂದ ಆ ದಿನ ರಾತ್ರಿ ಮಮತಾ ಒಬ್ಬರೇ ಮನೆಯಲ್ಲಿದ್ದರು. ಇದೇ ಸಮಯಕ್ಕೆ ಕಾದು ಕುಳಿತಿದ್ದ ಆರೋಪಿ ಸುಧಾಕರ್, ರಾತ್ರೋ ರಾತ್ರಿ ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದಾನೆಂದು ತಿಳಿದುಬಂದಿದೆ. ಡಿಸೆಂಬರ್ 25ರಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ. ಹತ್ಯೆಯ ಮಾಹಿತಿ ದೊರಕುತ್ತಿದ್ದಂತೆ, ಕುಮಾರಸ್ವಾಮಿ ಲೇಔಟ್‌ನ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಇದನ್ನೂ ಓದಿ: ಮಾರ್ಕ್ Vs 45.. ಗೆದ್ದಿದ್ದು ಯಾರು? – 2 ವಾರ.. 3 ಸಿನಿಮಾ.. ಕಲೆಕ್ಷನ್ ಎಷ್ಟು?
ಸುಧಾಕರ್ ಮತ್ತು ಮಮತಾ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಯಲ್ಲಿದ್ದರು. ಮಮತಾ ತನಗಿಂತ ವಯಸ್ಸಿನಲ್ಲಿ ಹಿರಿಯವಳೆಂದು ತಿಳಿಯದ ಸುಧಾಕರ್ ಪ್ರೀತಿಯಲ್ಲಿ ಬಿದ್ದಿದ್ದ. ಆದರೆ ಸುಧಾಕರ್‌ಗೆ ಇತ್ತೀಚೆಗೆ ಕುಟುಂಬಸ್ಥರು ಬೇರೆ ಯುವತಿಯೊಂದಿಗೆ ನಿಶ್ಚಿತಾರ್ಥ ಮಾಡಿಸಿದ್ದರು. ಈ ವಿಷಯ ತಿಳಿದ ಮಮತಾ, ಕೋಪಗೊಂಡು ತನ್ನನ್ನೇ ಮದುವೆಯಾಗಬೇಕು ಎಂದು ಒತ್ತಾಯಿಸಿದ್ದರು. ಅಷ್ಟೇ ಅಲ್ಲದೇ ತನ್ನನ್ನು ಬಿಟ್ಟು ಬೇರೆ ಮದುವೆಯಾದರೆ ತಾನು ಆತ್ಮಹತ್ಯೆ ಮಾಡಿಕೊಂಡು ಸುಧಾಕರ್ ಹಾಗೂ ಅವರ ಕುಟುಂಬವನ್ನು ಸಂಕಷ್ಟಕ್ಕೆ ಒಳಪಡಿಸುವುದಾಗಿ ಬೆದರಿಕೆ ಹಾಕಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಈ ಒತ್ತಡದಿಂದ ಆತಂಕಕ್ಕೊಳಗಾದ ಸುಧಾಕರ್, ಮಮತಾಳನ್ನು ಹತ್ಯೆ ಮಾಡಲು ನಿರ್ಧರಿಸಿದ್ದ. ಡಿಸೆಂಬರ್ 24ರಂದು ಮಮತಾ ಒಬ್ಬರೇ ಇದ್ದ ಸಂದರ್ಭ ಮನೆಗೆ ತೆರಳಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ನೋಡಿರಿ

