ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಅಟ್ಟಹಾಸ! – ಯುವತಿಗೆ ಕಿರುಕುಳ ನೀಡಿದ ಯುವಕರು!

ಸಿಲಿಕಾನ್‌ ಸಿಟಿಯಲ್ಲಿ ಪುಂಡರ ಅಟ್ಟಹಾಸ! – ಯುವತಿಗೆ ಕಿರುಕುಳ ನೀಡಿದ ಯುವಕರು!

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ಮೂವರು ಪುಂಡರು ಯುವತಿಗೆ ಕಿರುಕುಳ ನೀಡಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಅರಮನೆ ಬಳಿ ಭಾರಿ ಭದ್ರತಾ ಲೋಪ? – ಸಿಸಿಟಿವಿ ಇದ್ರೂ ಸೆರೆಯಾಗಿಲ್ಲ ಸ್ಫೋ*ಟದ ದೃಶ್ಯ!

ಈ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಬಿಟಿಎಂ ಲೇಔಟ್‌ನಲ್ಲಿ ನಡೆದಿದೆ. ಡಿ.25ರಂದು ರಾತ್ರಿ 12 ಗಂಟೆಯ ಸುಮಾರಿಗೆ ಘಟನೆ ನಡೆದಿದೆ.  ಸ್ಕೂಟಿಯಲ್ಲಿ ಹೆಲ್ಮೆಟ್ ಧರಿಸಿ ಹೋಗುತ್ತಿದ್ದ ಯುವತಿಗೆ ಮತ್ತೊಂದು ಸ್ಕೂಟಿಯಲ್ಲಿ ಬಂದ ಮೂವರು ಯುವಕರು ಸುಮಾರು 2 ಕಿಲೋ ಮೀಟರ್ ರಸ್ತೆಯುದ್ದಕ್ಕೂ ಕಿರುಕುಳ ನೀಡಿದ್ದಾರೆ. ಹೆಲ್ಮೆಟ್ ಕೂಡ ಧರಿಸದೇ ಅಡ್ಡಾದಿಡ್ಡಿ ಚಾಲನೆ ಮಾಡಿದ ಪುಂಡರು ಬೇಕು ಅಂತಲೇ ಯುವತಿಯ ಸ್ಕೂಟಿಯ ಮುಂದೆ ಹೋಗಿ ಅಡ್ಡಾದಿಡ್ಡಿಯಾಗಿ ಸ್ಕೂಟಿ ಚಾಲನೆ ಮಾಡಿದ್ದಾರೆ. ಅಲ್ಲದೇ 2 ಕಿ.ಮೀ ಯುವತಿಯನ್ನು ಫಾಲೋ ಮಾಡಿದ್ದಾರೆ. ಇದೇ ವೇಳೆ ಹಿಂಬದಿ ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯೊಬ್ಬರು ಯುವತಿಗೆ ಕಿರುಕುಳ ನೀಡುತ್ತಿರುವ ವೀಡಿಯೋ ಸೆರೆ ಹಿಡಿದು ಎಕ್ಸ್ನಲ್ಲಿ ಪೊಲೀಸರಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಿದ್ದಾರೆ.

ಸದ್ಯ ಸುದ್ದುಗುಂಟೆ ಪಾಳ್ಯ ಪೊಲೀಸರು ಈ ವೀಡಿಯೋಗೆ ಎಕ್ಸ್‌ನಲ್ಲಿ ಉತ್ತರಿಸಿದ್ದಾರೆ. ಕಿರುಕುಳ ನೀಡಿದ ಪುಂಡರ ಬೈಕ್ ನಂಬರ್ ಪತ್ತೆ ಮಾಡಿದ್ದು, ಮೂವರನ್ನು  ವಶಕ್ಕೆ ಪಡೆದು ವಿಚಾರಣೆ ಮಾಡೋದಾಗಿ ತಿಳಿಸಿದ್ದಾರೆ.

Shwetha M