ಗೃಹಲಕ್ಷ್ಮೀಯ ಐದು ಸಾವಿರ ಕೋಟಿ ರೂ. ಹಣ ಎಲ್ಲಿಗೆ ಹೋಯ್ತು? – ಸಿಎಂ ಸಿದ್ದರಾಮ್ಯಗೆ ಟೆಂಗಿನಕಾಯಿ ಪ್ರಶ್ನೆ

ಗೃಹಲಕ್ಷ್ಮೀಯ  ಐದು ಸಾವಿರ ಕೋಟಿ ರೂ. ಹಣ ಎಲ್ಲಿಗೆ ಹೋಯ್ತು? – ಸಿಎಂ ಸಿದ್ದರಾಮ್ಯಗೆ  ಟೆಂಗಿನಕಾಯಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಯ  ಹಣ ಬಿಡುಗಡೆಗೆ ಸಂಬಂಧಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ   ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ ಮತ್ತು ಮಾರ್ಚ್ ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ ಎಂದು ಆರೋಪಿಸಿದರು. ಈ ವಿಷಯವನ್ನು ತಾವು ವಿಧಾನಸಭೆ ಅಧಿವೇಶನದಲ್ಲೇ ಪ್ರಸ್ತಾಪಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೂ ತಂದಿರುವುದಾಗಿ ತಿಳಿಸಿದರು. ಅಧಿವೇಶನದ ವೇಳೆ ಸಿಎಂ ಆದಷ್ಟು ಬೇಗ ಹಣ ವರ್ಗಾವಣೆ ಮಾಡುವ ಭರವಸೆ ನೀಡಿದ್ದರು. ಆದರೆ ಸಿಎಂ ಹೇಳಿ ಇಪ್ಪತ್ತು ದಿನಗಳಾದರೂ ಮಹಿಳೆಯರ ಖಾತೆಗೆ ಹಣ ಬಂದಿಲ್ಲ ಎಂದು ಟೀಕಿಸಿದರು.

ಇದನ್ನೂ ಓದಿ: 2029 ರಲ್ಲಿಯೂ BJP ಮೋದಿ ಜಿ ನೇತೃತ್ವದಲ್ಲಿ ಸರ್ಕಾರ ರಚಿಸುತ್ತದೆ – ಅಮಿತ್ ಶಾ

ಪೂರಕ ಬಜೆಟ್‌ನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅಗತ್ಯವಿರುವ ಐದು ಸಾವಿರ ಕೋಟಿ ರೂಪಾಯಿ ಹಣದ ಯಾವುದೇ ಪ್ರಸ್ತಾಪವೇ ಇಲ್ಲ. ಹಾಗಾದರೆ ಆ ಹಣ ಎಲ್ಲಿ ಹೋಯ್ತು ಎಂಬುದು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಟೆಂಗಿನಕಾಯಿ ಆಗ್ರಹಿಸಿದರು.ಇನ್ನು ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪವಾದ ನಂತರ ಅಧಿಕಾರಿಗಳಿಗೆ ಮಾಹಿತಿ ನೀಡದಂತೆ ತಾಕೀತು ಮಾಡಲಾಗಿದೆ ಎಂದು ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಹತ್ತನೇ ತಾರೀಖಿನಿಂದಲೇ ಅಧಿಕಾರಿಗಳಿಗೆ ಮಾಹಿತಿ ನೀಡದಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನಿರ್ದೇಶಕರಿಗೆ ಫೆಬ್ರವರಿ–ಮಾರ್ಚ್ ತಿಂಗಳ ಹಣದ ಬಗ್ಗೆ ಮಾಹಿತಿ ಕೇಳಿದ್ದರೂ ಸ್ಪಷ್ಟ ಉತ್ತರ ಸಿಕ್ಕಿಲ್ಲ ಎಂದರು.

Kishor KV