ಎರಡು ರೈಲುಗಳ ಮಧ್ಯೆ ಅಪಘಾತ – 60ಕ್ಕೂ ಅಧಿಕ ಮಂದಿಗೆ ಗಾಯ

ಉತ್ತರಾಖಂಡದ ಚಮೋಲಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಟಾಸ್ಕ್ನಲ್ಲಿ ಬರೀ ಮೋಸ.. ಫಸ್ಟ್ ಟೈಮ್ ಸ್ಪಂದನಾ ಗೆದ್ರೂ ಬೆಲೆ ಇಲ್ಲ! – ಕಾವ್ಯಗಾಗಿ ಗಿಲ್ಲಿ ಚೀಪ್ ಗಿಮಿಕ್!
ಚಮೋಲಿ ಜಿಲ್ಲೆಯ ವಿಷ್ಣುಗಢ್-ಪಿಪಲ್ಕೋಟಿ ಜಲ ವಿದ್ಯುತ್ ಯೋಜನೆಯ ಸುರಂಗದ ಪಿಪಲ್ಕೋಟಿ ಸುರಂಗದೊಳಗೆ ಮಂಗಳವಾರ ಸಂಜೆ ಕಾರ್ಮಿಕರು ಮತ್ತು ಅಧಿಕಾರಿಗಳನ್ನು ಕರೆದೊಯ್ಯುತ್ತಿದ್ದ ಲೋಕೋ ರೈಲು ಸರಕು ರೈಲಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಸುಮಾರು 60 ಜನರು ಗಾಯಗೊಂಡಿದ್ದಾರೆ. ಅಪಘಾತದ ಸಮಯದಲ್ಲಿ ರೈಲಿನಲ್ಲಿ ಒಟ್ಟು 109 ಜನರಿದ್ದರು ಮತ್ತು ಅವರಲ್ಲಿ 60 ಜನರು ಗಾಯಗೊಂಡಿದ್ದಾರೆ ಎಂದು ಚಮೋಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ಗೌರವ್ ಕುಮಾರ್ ತಿಳಿಸಿದ್ದಾರೆ.
ಗಾಯಾಳುಗಳನ್ನು ರಕ್ಷಿಸಲಾಗಿದ್ದು, ಗಾಯಾಳುಗಳ ಸ್ಥಿತಿ ಸ್ಥಿರವಾಗಿದೆ ಎಂದು ಗೌರವ್ ಕುಮಾರ್ ತಿಳಿಸಿದ್ದಾರೆ. ಟಿಎಚ್ಡಿಸಿ (ಭಾರತ) ನಿರ್ಮಿಸುತ್ತಿರುವ ಯೋಜನೆಯ ಪಿಪಲ್ಕೋಟಿ ಸುರಂಗದೊಳಗೆ ಜನರನ್ನು ಸಾಗಿಸುವ ಒಂದು ರೈಲು ಮತ್ತು ಸಾಮಗ್ರಿಗಳನ್ನು ಸಾಗಿಸುವ ಇನ್ನೊಂದು ರೈಲು ಡಿಕ್ಕಿ ಹೊಡೆದಿದೆ. ಅಧಿಕಾರಿಗಳ ಪ್ರಕಾರ, ಲೋಕೋ ರೈಲುಗಳನ್ನು ಸುರಂಗಗಳ ಒಳಗೆ ಕಾರ್ಮಿಕರು, ಅಧಿಕಾರಿಗಳು ಮತ್ತು ನಿರ್ಮಾಣ ಕಾರ್ಯಗಳಿಗೆ ಬೇಕಾದ ಸಾಮಗ್ರಿಗಳನ್ನು ಸಾಗಿಸಲು ಬಳಸಲಾಗುತ್ತಿತ್ತು. ಗಾಯಗೊಂಡ 10 ಜನರನ್ನು ಚಿಕಿತ್ಸೆಗಾಗಿ ಗೋಪೇಶ್ವರದ ಜಿಲ್ಲಾ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಚಮೋಲಿಯ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ತಿಳಿಸಿದ್ದಾರೆ.

ನೋಡಿರಿ

