ಮದುವೆ ಫಿಕ್ಸ್ ಆಗಿದ್ದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಕಾಟ – ಮಾತನಾಡಲು ಕರೆಸಿ ಯುವಕನ ಮ*ರ್ಡ*ರ್

ಮದುವೆ ಫಿಕ್ಸ್ ಆಗಿದ್ರೂ ಇನ್ಸ್ಟಾಗ್ರಾಂನಲ್ಲಿ ಕಾಟ ಕೊಡುತ್ತಿದ್ದ ನೆತ್ತರು ಕಾಫಿನಾಡಿನಲ್ಲಿ ಹರಿದಿದೆ. ಎಂಗೇಜ್ಮೆಂಟ್ ಆಗಿದ್ದ ಯುವತಿಗೆ ನಿರಂತರವಾಗಿ ಮೆಸೇಜ್ ಮಾಡಿ ಟಾರ್ಚರ್ ನೀಡುತ್ತಿದ್ದ ಎಂದು ಯುವಕನಿಗೆ ಚಾಕು ಇರಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ನಡೆದಿದೆ. ಮೃತ ಯುವಕನನ್ನು 21 ವರ್ಷದ ಮಂಜುನಾಥ್ ಎಂದು ಗುರುತಿಸಲಾಗಿದೆ. ಮಂಜುನಾಥ್ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ನಿವಾಸಿಯಾಗಿದ್ದು, ತರೀಕೆರೆ ತಾಲೂಕಿನ ಅತ್ತಿಗನಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಹೊಸ ವರ್ಷಕ್ಕೆ ಮೋದಿ ವಿಶ್ – ದೇವಸ್ಥಾನಗಳಲ್ಲಿ ವಿಶೇಷ ಪೂಜೆ
ಪರಿಚಯವಿದ್ದ ಯುವತಿಗೆ ಮಂಜುನಾಥ್ ಪದೇಪದೇ ಇನ್ಸ್ಟಾಗ್ರಾಂನಲ್ಲಿ ಮೆಸೇಜ್ ಮಾಡುತ್ತಿದ್ದನಂತೆ. ಯುವತಿಗೆ ಈಗಾಗಲೇ ವೇಣು ಎಂಬ ಯುವಕನೊಂದಿಗೆ ಮದುವೆ ನಿಶ್ಚಿತಾರ್ಥವಾಗಿದ್ದು, ‘ಎಂಗೇಜ್ಮೆಂಟ್ ಆಗಿದೆ, ಮೆಸೇಜ್ ಮಾಡಬೇಡ’ ಎಂದು ಯುವತಿ ಮಂಜುನಾಥ್ಗೆ ತಿಳಿಸಿದ್ದಳು. ಆದರೂ ಮಂಜುನಾಥ್ ಮೆಸೇಜ್ ಮಾಡುತ್ತಲೇ ಇದ್ದ. ಇದನ್ನು ಯುವತಿ ತನ್ನನ್ನು ಮದುವೆಯಾಗಲಿರುವ ಯುವಕ ವೇಣುಗೆ ತಿಳಿಸಿದ್ದಾಳೆ.
ಈ ಹಿನ್ನೆಲೆ ಮಾತನಾಡಬೇಕು ಎಂದು ಮಂಜುನಾಥ್ನನ್ನು ಕರೆಸಿಕೊಂಡ ವೇಣು ಆತನ ಮೇಲೆ ಸ್ನೇಹಿತರಾದ ಕಿರಣ್, ಅಪ್ಪು ಮತ್ತು ಮಂಜು ಜೊತೆ ಜಗಳವಾಡಿದ್ದಾನೆ. ಗಲಾಟೆ ವೇಳೆ ಮಂಜುನಾಥ್ಗೆ ಚಾಕುವಿನಿಂದ ಇರಿದು ನಾಲ್ವರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಮಂಜುನಾಥ್ನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ನೋಡಿರಿ

