ಮುಂಬೈಗೆ ಅಣ್ತಮ್ಮನ ಬಲ – ಸರ್ಫರಾಝ್ ಖಾನ್, ಮುಶೀರ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್

ಮುಂಬೈಗೆ ಅಣ್ತಮ್ಮನ ಬಲ – ಸರ್ಫರಾಝ್ ಖಾನ್, ಮುಶೀರ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್

ವಿಜಯ ಹಝಾರೆ ಟೂರ್ನಿಯಲ್ಲಿ ಮುಂಬೈ ತಂಡಕ್ಕೆ ಅಣ್ತಮ್ಮನ ಬಲ ಬಂದಿದೆ. ಮುಂಬೈ ತಂಡದ ಪರ ಸರ್ಫರಾಝ್ ಖಾನ್ ಹಾಗೂ ಮುಶೀರ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಇದನ್ನೂ ಓದಿ:ಕಿವೀಸ್ ವಿರುದ್ಧದ ಏಕದಿನ ಸರಣಿ ಮುನ್ನ ಗಿಲ್, ಕೆ.ಎಲ್ ಮಹತ್ವದ ನಿರ್ಧಾರ – ರಾಹುಲ್, ಜಡೇಜಾ ಈ ನಿರ್ಧಾರಕ್ಕೆ ಬಂದಿದ್ಯಾಕೆ?

ವಿಜಯ ಹಝಾರೆ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಮುಂಬೈ ತಂಡದ ಸರ್ಫರಾಝ್ ಖಾನ್ ಹಾಗೂ ಮುಶೀರ್ ಖಾನ್ ಪ್ರಚಂಡ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಜೈಪುರದ ಜೈಪುರಿಯ ವಿದ್ಯಾಲಯ ಮೈದಾನದಲ್ಲಿ ಗೋವಾ ಮತ್ತು ಮುಂಬೈ ತಂಡಗಳ ನಡುವೆ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ತಂಡಕ್ಕೆ ಯಶಸ್ವಿ ಜೈಸ್ವಾಲ್ (46) ಉತ್ತಮ ಆರಂಭ ಒದಗಿಸಿದ್ದರು. ಜೈಸ್ವಾಲ್ ತಂಡಕ್ಕೆ ಆಸರೆಯಾಗಿ ನಿಂತ ಮುಶೀರ್ ಖಾನ್ 66 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 60 ರನ್ ಬಾರಿಸಿದರು. ಇನ್ನು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸರ್ಫರಾಝ್ ಖಾನ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಆರಂಭದಿಂದಲೇ ಗೋವಾ ಬೌಲರ್​ಗಳ ಬೆಂಡೆತ್ತಿದ ಸರ್ಫರಾಝ್ ಮೈದಾನದ ಮೂಲೆ ಮೂಲೆಗೂ ಸಿಕ್ಸ್-ಫೋರ್​ಗಳನ್ನು ಬಾರಿಸಿದರು. ಈ ಮೂಲಕ ಕೇವಲ 56 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಕೂಡ ಸಿಡಿಲಬ್ಬರದ ಮುಂದುವರೆಸಿದ ಸರ್ಫರಾಝ್ ಖಾನ್ 14 ಭರ್ಜರಿ ಸಿಕ್ಸ್ ಹಾಗೂ 9 ಫೋರ್​ಗಳೊಂದಿಗೆ ಕೇವಲ 75 ಎಸೆತಗಳಲ್ಲಿ 157 ರನ್​ ಚಚ್ಚಿದರು. ಇತ್ತ ಸರ್ಫರಾಝ್-ಮುಶೀರ್ ಖಾನ್ ಸಹೋದರರ ಜುಗಲ್​ಬಂಧಿಯೊಂದಿಗೆ 40 ಓವರ್​ಗಳಲ್ಲೇ ಮುಂಬೈ ತಂಡದ ಸ್ಕೋರ್​ 300ರ ಗಡಿದಾಟಿತು.

ಮುಂಬೈ ತಂಡವು 50 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಬರೋಬ್ಬರಿ 444 ರನ್ ಕಲೆಹಾಕಿದೆ. ಇದು ವಿಜಯ ಹಝಾರೆ ಟೂರ್ನಿಯಲ್ಲಿ ದಾಖಲಾದ ನಾಲ್ಕನೇ ಗರಿಷ್ಠ ಸ್ಕೋರ್ ಎಂಬುದು ವಿಶೇಷ.

Sulekha