ಬಳ್ಳಾರಿಯಲ್ಲಿ ಬ್ಯಾನರ್ ಗಲಾಟೆ ಕೇಸ್! – ಸತೀಶ್ ರೆಡ್ಡಿ ಗ*ನ್ಮ್ಯಾನ್ಗಳು ನಾಪತ್ತೆ!

ವಾಲ್ಮೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ಸಂಬಂಧ ಬಳ್ಳಾರಿಯಲ್ಲಿ ನಡೆದ ಗಲಾಟೆ ರಕ್ತಸಿಕ್ತವಾಗಿ ಮಾರ್ಪಟ್ಟಿದ್ದು, ಇದೀಗ ಇನ್ನಷ್ಟು ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಈಗಾಗಲೇ ಶ್ರೀರಾಮುಲು, ಜನಾರ್ದನ ರೆಡ್ಡಿ, ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ದೂರು ದಾಖಲಾಗಿದೆ. ಇದ್ರ ಬೆನ್ನಲ್ಲೇ ಸತೀಶ್ ರೆಡ್ಡಿ ಖಾಸಗಿ ಗನ್ಮ್ಯಾನ್ಗಳು ನಾಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಸೂರ್ಯೋದಯವೋ.. ಸೂರ್ಯಾಸ್ತವೋ? – ಗಂಭೀರ ಸ್ಥಿತಿಯಿಂದ ಹೊರಬರುತ್ತಾ ಟೆಸ್ಟ್?
ಬ್ಯಾನರ್ ಅಳವಡಿಕೆ ವಿಚಾರವಾಗಿ ಶಾಸಕ ಜನಾರ್ದನ ರೆಡ್ಡಿ ನಿವಾಸದ ಬಳಿ ಗಲಾಟೆ ವೇಳೆ ನಡೆದ ಫೈರಿಂಗ್ನಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಗೆ ತಗುಲಿರುವ ಗುಂಡು ಪೊಲೀಸರದ್ದಲ್ಲ, ಖಾಸಗಿ ವ್ಯಕ್ತಿಗಳದ್ದು ಎಂದು ಎಸ್ಪಿ ಸ್ಪಷ್ಟಪಡಿಸಿದ್ದರು. ಘಟನೆಗೆ ಸಂಬಂಧಿಸಿದ ವಿಡಿಯೋಗಳು ರಿಲೀಸ್ ಆಗಿದ್ದು, ಗಲಾಟೆ ವೇಳೆ ಸತೀಶ್ ರೆಡ್ಡಿ ಗನ್ಮ್ಯಾನ್ಗಳು ಫೈರಿಂಗ್ ಮಾಡಿರುವುದು ಕಂಡುಬಂದಿದೆ.
ಈಗಾಗಲೇ ಜನಾರ್ದನ ರೆಡ್ಡಿ ಹಾಗೂ ಸತೀಶ್ ರೆಡ್ಡಿಗೆ ಸಂಬಂಧಿಸಿದ ಗನ್ಮ್ಯಾನ್ಗಳಿಂದ ಪೊಲೀಸರು 5 ಗನ್ಗಳನ್ನು ವಶಕ್ಕೆ ಪಡೆದಿದ್ದಾರೆ. ಗನ್ಗಳನ್ನ ವಶಕ್ಕೆ ಪಡೆದ ಬೆನ್ನಲ್ಲೇ ಸತೀಶ್ ರೆಡ್ಡಿ ಖಾಸಗಿ ಗನ್ಮ್ಯಾನ್ಗಳು ನಾಪತ್ತೆಯಾಗಿದ್ದಾರೆ. ಒಟ್ಟು ನಾಲ್ವರು ಗನ್ಮ್ಯಾನ್ಗಳು ಎಲ್ಲಿಗೆ ನಾಪತ್ತೆಯಾಗಿದ್ದಾರೆಂಬ ಸುಳಿವು ಪತ್ತೆಯಾಗಿಲ್ಲ. ಯಾರ ಗುಂಡು ಮೃತನಿಗೆ ತಗುಲಿದೆ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನೋಡಿರಿ

