ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ ಕೇಸ್! – ನಾಲ್ವರು ಅರೆಸ್ಟ್!

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಭಾನುವಾರ ಕಲ್ಲು ತೂರಾಟ ನಡೆದಿದೆ. ಇದೀಗ ಈ ಪ್ರಕರಣದ ಸಂಬಂಧ ನಾಲ್ವರನ್ನ ಅರೆಸ್ಟ್ ಮಾಡಲಾಗಿದೆ.
ಇದನ್ನೂ ಓದಿ: ರಾಶಿಕಾಗೆ ಹೊಡೆದ ರಕ್ಷಿತಾ? – ನಾಮಿನೇಷನ್‌ನಲ್ಲಿ ನಡೆಯಿತು ದೊಡ್ಡ ಹೈಡ್ರಾಮಾ!
ಏನಿದು ಘಟನೆ?
ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಭಾನುವಾರ (ಜ.4) ದೇವಿಯ ತೇರು ಎಳೆಯುತ್ತಿರುವ ವೇಳೆ ತೇರಿನ ಮೇಲೆ ಹಾಗೂ ಮಾಲಾಧಾರಿಗಳ ಮೇಲೆ ಕಿಡಿಗೇಡಿಗಳು ಕಲ್ಲು ಎಸೆದಿದ್ದರು.
ಮೂವರಿಗೆ ಕಲ್ಲು ಬಿದ್ದಿರುವ ಬಗ್ಗೆ ಆರೋಪ ಕೇಳಿಬಂದಿತ್ತು. ಕಲ್ಲು ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದರು. ಮಗು, ಯುವತಿ, ವಯಸ್ಕ ಮಹಿಳೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಿದ್ದರು. ಕಿಡಿಗೇಡಿಗಳನ್ನು ಬಂಧಿಸುವಂತೆ ಬಿಗಿಪಟ್ಟು ಹಿಡಿಯಲಾಗಿತ್ತು.
ತೇರಿನ ಮೇಲೆ ಅನ್ಯ ಕೋಮಿನವರಿಂದ ಕಲ್ಲು ಎಸೆದ ಆರೋಪ ಹೊರಿಸಲಾಗಿದೆ. ಓಂ ಶಕ್ತಿ ಮಾಲೆ ಧರಿಸಿದ್ದ ಮಗುವಿಗೂ ಕಲ್ಲೇಟು ಬಿದ್ದಿದೆ. ಘಟನೆ ಬಳಿಕ ಓಂ ಶಕ್ತಿ ಮಾಲಾಧಾರಿಗಳು ಜೆಜೆಆರ್ ನಗರ ಠಾಣೆಯ ಮುಂದೆ ಜಮಾಯಿಸಿ ಕ್ರಮಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
ಇನ್ನು ಈ ಪ್ರಕರಣದ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ನಾಲ್ಕೈದು ಜನ ಚಿಕ್ಕ ಹುಡುಗರು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ ಕೈಗೊಳ್ಳುತ್ತಾರೆ ಎಂದರು.

ನೋಡಿರಿ

