ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು! – ಆಸ್ಪತ್ರೆಗೆ ದಾಖಲಾದ ಕೈ ನಾಯಕಿ!   

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆರೋಗ್ಯದಲ್ಲಿ ಏರುಪೇರು! – ಆಸ್ಪತ್ರೆಗೆ ದಾಖಲಾದ ಕೈ ನಾಯಕಿ!   

ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್‌ ಗಂಗಾ ರಾಮ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಪ್ರೀತಿಸಿ ಮದುವೆಯಾದ ಎರಡೇ ದಿನಕ್ಕೆ ತಾಳಿ ಕಿತ್ತೆಸೆದ ಯುವತಿ! – ಪಾಗಲ್‌ ಪ್ರೇಮಿ ಮಾಡಿದ್ದೇನು ಗೊತ್ತಾ?

ಸೋನಿಯಾ ಗಾಂಧಿ ಅವರು ದೀರ್ಘಕಾಲದ ಕೆಮ್ಮಿನಿಂದ ಬಳಲುತ್ತಿದ್ದಾರೆ. ಸೋಮವಾರ ರಾತ್ರಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಈ ಹಿನ್ನೆಯಲ್ಲಿ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ವೈದ್ಯರು ತಪಾಸಣೆ ನಡೆಸುತ್ತಿದ್ದಾರೆ. ದೆಹಲಿಯಲ್ಲಿ ಮಾಲಿನ್ಯ ಹೆಚ್ಚಾದ ಹಿನ್ನೆಲೆಯಲ್ಲಿ ಕೆಮ್ಮು ಮತ್ತಷ್ಟು ಹೆಚ್ಚಾಗಿದೆ ಎಂದು ಹೇಳಲಾಗ್ತಿದೆ.

ಸೋನಿಯಾ ಗಾಂಧಿ ಕೆಲವು ತಿಂಗಳ ಹಿಂದೆ, ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಯಿಂದಾಗಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದರು. ಫೆಬ್ರವರಿಯಲ್ಲಿ ಅವರ ಆಸ್ಪತ್ರೆಗೆ ಒಂದು ದಿನ ಚಿಕಿತ್ಸೆ ನೀಡಲಾಯಿತು. ಆ ಸಮಯದಲ್ಲಿ ಅವರು ಗ್ಯಾಸ್ಟ್ರೋಎಂಟರಾಲಜಿ ತಜ್ಞರ ಮೇಲ್ವಿಚಾರಣೆಯಲ್ಲಿದ್ದರು. ಜೂನ್ 19 ರಂದು, ಹೊಟ್ಟೆಗೆ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆದ ನಂತರ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಜೂನ್ 15 ರಂದು ಹೊಟ್ಟೆಯ ಸೋಂಕಿಗೆ ಒಳಗಾಘಿದ್ದರು, ನಂತರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ದಿನಗಳಿಂದ,ಗಾಂಧಿಯವರ ಮೇಲೆ ತೀವ್ರ ವೈದ್ಯಕೀಯ ನಿಗಾ ಇಡಲಾಗಿತ್ತು.

ಜೂನ್ 7 ರಂದು ಕೂಡ ಕಾಂಗ್ರೆಸ್ ನಾಯಕಿ ಹಿಮಾಚಲ ಪ್ರದೇಶದ ಶಿಮ್ಲಾದ ಇಂದಿರಾ ಗಾಂಧಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಹೋಗಿದ್ದರು, ಕೆಲವು ಸಣ್ಣಪುಟ್ಟ ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರನ್ನು ಕರೆತರಲಾಗಿತ್ತು ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿಯ ಪ್ರಧಾನ ಸಲಹೆಗಾರ (ಮಾಧ್ಯಮ) ನರೇಶ್ ಚೌಹಾಣ್ ಹೇಳಿದ್ದರು.

ಸೆಪ್ಟೆಂಬರ್ 2022 ರಲ್ಲಿ, ಸೋನಿಯಾ ಗಾಂಧಿ ವೈದ್ಯಕೀಯ ತಪಾಸಣೆಗಾಗಿ ಅಮೆರಿಕಕ್ಕೆ ಹೋಗಲು ಮುಂದಾಗಿದ್ದರು, ಆದರೆ ಕೋವಿಡ್-19 ಕೋವಿಡ್​ನಿಂದಾಗಿ ಆ ಭೇಟಿಯನ್ನು ಮುಂದೂಡಲಾಗಿತ್ತು. ಆ ಪ್ರವಾಸದಲ್ಲಿ ಅವರ ಮಗ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಇದ್ದರು.

Shwetha M