ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ್ರಾ ಪೊಲೀಸರು? – ಕಡೆಗೂ ಬಯಲಾಯ್ತು ಅಸಲಿ ವಿಚಾರ!

ಬಿಜೆಪಿ ಕಾರ್ಯಕರ್ತೆ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ್ರಾ ಪೊಲೀಸರು? – ಕಡೆಗೂ ಬಯಲಾಯ್ತು ಅಸಲಿ ವಿಚಾರ!

ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಬಿಜೆಪಿ ಕಾರ್ಯಕರ್ತೆಯೊಬ್ಬರಿಗೆ ಬಟ್ಟೆ ಬಿಚ್ಚಿ ಥಳಿಸಿದ ಆರೋಪ ಕೇಳಿಬಂದಿದೆ. ಕಾಂಗ್ರೆಸ್‌ನ ನಗರ ಪಾಲಿಕೆ ಸದಸ್ಯ ನೀಡಿದ ದೂರಿನ ಮೇರೆಗೆ ಪೊಲೀಸರು ಈ ರೀತಿ ದರ್ಪ ಮೆರೆದಿದ್ದಾರೆ ಎನ್ನಲಾಗುತ್ತಿದ್ದು, ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ. ಇದೀಗ ಈ ಪ್ರಕರಣದ ಅಸಲಿ ವಿಚಾರ ಬಯಲಾಗಿದೆ. ಪೊಲೀಸರು ಮಹಿಳೆಯ ಬಟ್ಟೆ ಬಿಚ್ಚಿ ಥಳಿಸಿಲ್ಲ, ತಾನೇ ಬಟ್ಟೆ ಬಿಚ್ಚಿ ಸೀನ್‌ ಕ್ರಿಯೆಟ್‌ ಮಾಡಿದ್ದಾಳೆ ಅನ್ನೋ ವಿಚಾರ ಬಯಲಾಗಿದೆ.

ಇದನ್ನೂ ಓದಿ: ದೊಡ್ಮನೆಯಲ್ಲಿ ಅಶ್ವಿನಿ 2.O ವರ್ಷನ್!‌ –  ಮುಖವಾಡ ಬದಲಾಗುತ್ತದೆ ಎಂದ ರಕ್ಷಿತಾ!

ಈ ಘಟನೆ ಜ. 5ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಧನಕ್ಕೊಳಗಾದ ಮಹಿಳೆ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಕಾಂಗ್ರೆಸ್‌ ಬಿಟ್ಟು ಬಿಜೆಪಿ ಸೇರಿದ್ದರು.  ಕಾಂಗ್ರೆಸ್ ಮತದಾರರ ಹೆಸರನ್ನು ಪಟ್ಟಿಯಿಂದ ಡಿಲೀಟ್ ಮಾಡಿಸಿದ್ದ ಆರೋಪ ಹಂಡಿ ಮೇಲೆ ಇತ್ತು. ಈ ವಿಚಾರದಲ್ಲಿ ಗಲಾಟೆ ನಡೆದಿದ್ದು, ಈ ಹಿನ್ನೆಲೆ, ಕಾಂಗ್ರೆಸ್ ಕಾರ್ಪೊರೇಟರ್ ಸುವರ್ಣ ಕಲ್ಲಕುಂಟ್ಲಾ ನೀಡಿದ ದೂರಿನ ಮೇರೆಗೆ ಕೇಶ್ವಾಪುರ ಪೊಲೀಸರು ಸುಜಾತಾ ಹಂಡಿಯನ್ನು ಬಂಧಿಸಲು ಮುಂದಾಗಿದ್ದರು. ಆದ್ರೆ ಆಕೆ ಬಂಧನಕ್ಕೆ ಪ್ರತಿರೋಧ ತೋರಿದ ಸಂದರ್ಭದಲ್ಲಿ ಸುಜಾತಾ ಹಂಡಿಯನ್ನು ಬಲವಂತವಾಗಿ ಎಳೆದು ಪೊಲೀಸ್ ವ್ಯಾನ್‌ಗೆ ಕೂರಿಸಲಾಗಿದೆ. ಈ ವೇಳೆ ಪೊಲೀಸರೇ ಮಹಿಳೆಯ ಬಟ್ಟೆ ಬಿಚ್ಚಿ ಅಮಾನುಷವಾಗಿ ಥಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೀಗ ಈ ಪ್ರಕರಣದ ಅಸಲಿ ವಿಚಾರ ಬಯಲಾಗಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಮಾತನಾಡಿದ್ದಾರೆ. ಬಂಧನ ಸಂದರ್ಭದಲ್ಲಿ ಸುಜಾತಾ ಹಂಡಿ ನಮ್ಮ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಪೊಲೀಸ್ ವಾಹನದಲ್ಲಿ ಕೂರಿಸಿದ ನಂತರ ಅವರು ತಾವೇ ಬಟ್ಟೆ ತೆಗೆದಿದ್ದಾರೆ. ಮಹಿಳಾ ಪೊಲೀಸ್ ಸಿಬ್ಬಂದಿಯ ಹೊಟ್ಟೆಗೆ ಕಚ್ಚಿ ಗಾಯಗೊಳಿಸಿದ್ದು, ಐದು ಮಂದಿ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅವರ ವಿರುದ್ಧ ಈ ಹಿಂದೆ ಕೂಡ ಹಲವು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿಕೆ ನೀಡಿದ್ದಾರೆ.

ಘಟನೆಯ ಬಳಿಕ ಕೇಶ್ವಾಪುರ ಠಾಣೆ ಪೊಲೀಸರು ಸುಜಾತಾ ಹಂಡಿ ವಿರುದ್ಧ ಹಲ್ಲೆ, ಅನುಚಿತ ವರ್ತನೆ ಸೇರಿದಂತೆ ಹಲವು ಆರೋಪಗಳಡಿ ಪ್ರಕರಣ ದಾಖಲಿಸಿದ್ದಾರೆ. ಬಂಧನದ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಅವರು ಹುಬ್ಬಳ್ಳಿಯ ಜೈಲಿನಲ್ಲಿ ಇರಿಸಲಾಗಿದೆ ಎಂದು ತಿಳಿಸಿದ್ದಾರೆ.

Shwetha M