ಅಯೋಧ್ಯೆ ರಾಮಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ನಾನ್‌ವೆಜ್ ಬ್ಯಾನ್!

ರಾಮ ಕ್ಷೇತ್ರ ಅಯೋಧ್ಯೆಯಲ್ಲಿ ಮಹತ್ವದ ನಿರ್ಧಾರವೊಂದನ್ನ ಕೈಗೊಳ್ಳಲಾಗಿದೆ. ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ಅಯೋಧ್ಯೆ ಆಡಳಿತ ಮಂಡಳಿ ನಿಷೇಧಿಸಿದೆ.
ಇದನ್ನೂ ಓದಿ: ಗಿಲ್ಲಿ ಮೇಲೆ ರಕ್ಷಿತಾ ಓವರ್ ಪೊಸೆಸಿವ್! – ಬಾಗಿಲು ಓಪನ್ ಆಗುತ್ತೆ.. ಹೋಗುತ್ತೀರಿ ಎಂದ ಕಿಚ್ಚ!
ಅಯೋಧ್ಯೆ ರಾಮಮಂದಿರದ ಸುತ್ತಮುತ್ತ ಮಾಂಸಾಹಾರ ಸೇವನೆ ಬಗ್ಗೆ ಕೆಲ ದೂರುಗಳು ಕೇಳಿಬಂದಿತ್ತು. ಮಂದಿರದ ಆಸುಪಾಸಿನಲ್ಲಿಆನ್‌ಲೈನ್ ವೇದಿಕೆಗಳ ಮೂಲಕ ಪದೇ ಪದೇ ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡಲಾಗುತ್ತಿದೆ. ಅಲ್ಲದೇ ಅಯೋಧ್ಯೆಯಲ್ಲಿನ ಕೆಲವು ಹೋಟೆಲ್‌ಗಳು ಮತ್ತು ಹೋಂ ಸ್ಟೇಗಳು ಅತಿಥಿಗಳಿಗೆ ಮಾಂಸಾಹಾರ ಮತ್ತು ಮದ್ಯ ಪೂರೈಕೆ ಮಾಡುತ್ತಿವೆ ಎನ್ನುವ ಆರೋಪ ಕೇಳಿಬಂದಿದೆ. ಇದೀಗ ಪಂಚಕೋಶ ಪರಿಕ್ರಮದ ಅಡಿಯಲ್ಲಿ ರಾಮ ಮಂದಿರದ 15 ಕಿ.ಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ಪದಾರ್ಥಗಳ ವಿತರಣೆಯನ್ನ ಅಯೋಧ್ಯೆ ಆಡಳಿತ ಮಂಡಳಿ ನಿಷೇಧಿಸಿದೆ. ಅಂತಹ ಚಟುವಟಿಕೆಗಳಿಂದ ದೂರ ಇರುವಂತೆ ಅಧಿಕಾರಿಗಳು ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇನ್ನು ಅಯೋಧ್ಯೆ ಮತ್ತು ಫೈಜಾಬಾದ್ ಸಂಪರ್ಕಿಸುವ ಮಾರ್ಗವಾದ 14 ಕಿಮೀ ʻರಾಮ ಪಥʼದಲ್ಲಿ ಮದ್ಯ ಮತ್ತು ಮಾಂಸ ಮಾರಾಟ ನಿಷೇಧಿಸಲು ಅಯೋಧ್ಯೆ ಪುರಸಭೆ ಮೇ 2025 ರಲ್ಲಿ ನಿರ್ಧಾರ ತೆಗೆದುಕೊಂಡಿತ್ತು. ಆದ್ರೆ 9 ತಿಂಗಳೂ ಕಳೆದರೂ ಈ ಕಟ್ಟುನಿಟ್ಟಿನ ಕ್ರಮ ಜಾರಿಯಾಗಿರಲಿಲ್ಲ. ಇದರಿಂದ ಸುಮಾರು 20ಕ್ಕೂ ಹೆಚ್ಚು ಮಳಿಗೆಗಳು ಈ ಪ್ರದೇಶದಲ್ಲಿ ಮದ್ಯ ಮಾರಾಟ ಮಾಡುತ್ತಿವೆ ಎಂದು ಸ್ಥಳೀಯರು ಆಕ್ರೋಶ ಹೊರಹಾಕಿದ್ದರು
ಈ ಕುರಿತು ಪ್ರತಿಕ್ರಿಯಿಸಿದ ಆಹಾರ ಇಲಾಖೆಯ ಸಹಾಯಕ ಆಯುಕ್ತ ಮಾಣಿಕ್ ಚಂದ್ರ ಸಿಂಗ್, ಫೈಜಾಬಾದ್‌ನ ರೋಸ್ ಸೇರಿದಂತೆ ರಾಮ್ ಪಥ್ ನಾದ್ಯಂತದ ಮಾಂಸದ ಅಂಗಡಿಗಳನ್ನ ಸಿವಿಐಸಿ ಸಂಸ್ಥೆ ತೆಗೆದುಹಾಕಿದೆ. ನಿಷೇಧದ ಹೊರತಾಗಿಯೂ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳ ಮೂಲಕ ಪ್ರವಾಸಿಗರಿಗೆ ಮಾಂಸಾಹಾರ ಪದಾರ್ಥಗಳನ್ನ ಪೂರೈಕೆ ಮಾಡೋದು ಮುಂದುವರಿದಿದೆ ಎಂಬ ದೂರು ಕೇಳಿಬಂದಿತ್ತು. ದೂರುಗಳ ನಂತರ, ಆನ್‌ಲೈನ್‌ನಲ್ಲಿ ಮಾಂಸಾಹಾರಿ ಆಹಾರ ವಿತರಣೆಗೂ ನಿಷೇಧ ಹೇರಲಾಗಿದೆ. ಎಲ್ಲಾ ಹೋಟೆಲ್, ಮಳಿಗೆಗಳಿಗೂ ಸೂಚನೆ ನೀಡಲಾಗಿದೆ. ಕ್ರಮ ಜಾರಿಯಾಗಿರುವ ಬಗ್ಗೆ ಮತ್ತೆ ಮೇಲ್ವಿಚಾರಣೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ನೋಡಿರಿ

