ಖಾಸಗಿ ಬಸ್ ಆಯ್ತು ಈಗ ಸರ್ಕಾರಿ ಬಸ್ ಸರದಿ – ತೀರ್ಥಹಳ್ಳಿಯಲ್ಲಿ KSRTC ಬಸ್ ಡಿಕ್ಕಿಗೆ 3 ಬ*ಲಿ!

ಖಾಸಗಿ ಬಸ್ ಆಯ್ತು ಈಗ ಸರ್ಕಾರಿ ಬಸ್ ಸರದಿ – ತೀರ್ಥಹಳ್ಳಿಯಲ್ಲಿ KSRTC ಬಸ್ ಡಿಕ್ಕಿಗೆ 3 ಬ*ಲಿ!

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತಿಪುರ ಕ್ರಾಸ್‌ ಬಳಿ KSRTC ಬಸ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ  ಆಗಿ ಮೂವರು ಮೃತಪಟ್ಟಿದ್ದಾರೆ.  ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ವಿಫ್ಟ್ ಕಾರು ಮುಖಾಮುಖಿ ಡಿಕ್ಕಿಯಾಗಿ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಕ್ಕಳು ಸೇರಿದಂತೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರನ್ನು ರಿಹಾನ್ (15), ರಾಹಿಲ್ (9) ಮತ್ತು ಫಾತಿಮಾ (76) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹರ್ಮನ್‌ಪ್ರೀತ್‌ ಕೌರ್‌  ಅರ್ಧಶತಕ ಬಲ – ಗುಜರಾತ್ ವಿರುದ್ಧ ಗೆದ್ದ ಮುಂಬೈ

ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದ ನಿವಾಸಿಯಾಗಿರುವ ಫಾತಿಮಾ ಸೇರಿ ಮೂವರು ಮೃತಪಟ್ಟಿದ್ದು, ಇನ್ನಿಬ್ಬರು ವೃದ್ಧರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರೆಲ್ಲರೂ ಚನ್ನಗಿರಿಯಲ್ಲಿ ಮದುವೆ ಕಾರ್ಯಕ್ರಮ ಮುಗಿಸಿ, ವಾಪಸ್‌ ಕಿಗ್ಗಾಕ್ಕೆ ಹೋಗುತ್ತಿದ್ದರು. ಮಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುತ್ತಿದ್ದ ಬಸ್‌ ಡಿಕ್ಕಿಯಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೇಸ್‌ ದಾಖಲಸಿಕೊಂಡಿದ್ದಾರೆ.

ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದ ನಿವಾಸಿಗಳು ಎಂದು ಗುರುತಿಸಲಾಗಿದೆ. ಚಾಲಕ ಸೇರಿದಂತೆ ಇನ್ನುಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಒಂದೇ ಕುಟುಂಬದ 6 ಜನ ಪ್ರಯಾಣ ಮಾಡುತ್ತಿದ್ದರು.  ಅಪಘಾತದ ತೀವ್ರತೆಯಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ವಿಷಯ ತಿಳಿದ ತಕ್ಷಣ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಅಪಘಾತದ ಕಾರಣ ಕುರಿತು ತನಿಖೆ ಮುಂದುವರಿದಿದೆ.

Kishor KV