ನ್ಯೂಜಿಲೆಂಡ್ ವಿರುದ್ಧ ಎಡವಿದ ಗಿಲ್ ಪಡೆ – ಟೀಂ IND ಕೈ ಹಿಡಿಯಲಿಲ್ಲ ಕೆಎಲ್ ಶತಕ

ಭರವಸೆಯ ಬ್ಯಾಟರ್ ಡ್ಯಾರಿಲ್ ಮಿಚೆಲ್ ಭರ್ಜರಿ ಶತಕ ಹಾಗೂ ವಿಲ್ ಯಂಗ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ ನ್ಯೂಜಿಲೆಂಡ್ ಎರಡನೇ ಏಕದಿನ ಪಂದ್ಯದಲ್ಲಿ 7 ವಿಕೆಟ್ಗಳಿಂದ ಭಾರತ ತಂಡವನ್ನು ಮಣಿಸಿದೆ. ಎಲ್ ರಾಹುಲ್ ಅವರ ಶತಕದ ಹೊರತಾಗಿಯೂ ಭಾರತ ತಂಡ 2ನೇ ಪಂದ್ಯದಲ್ಲಿ ಎಡವಿದೆ. ಡ್ಯಾರಿಲ್ ಮಿಚೆಲ್ ಅವರ ಭರ್ಜರಿ ಶತಕದ ಬಲದಿಂದ ನ್ಯೂಜಿಲೆಂಡ್ ತಂಡ, ರಾಜ್ಕೋಟ್ನಲ್ಲಿ ಆತಿಥೇಯರಿಗೆ ತಿರುಗೇಟು ನೀಡಿತು. ಇದರೊಂದಿಗೆ ಎರಡು ಪಂದ್ಯಗಳ ಅಂತ್ಯಕ್ಕೆ ಉಭಯ ತಂಡಗಳು ಏಕದಿನ ಸರಣಿಯಲ್ಲಿ 1-1 ಸಮಬಲ ಕಾಯ್ದುಕೊಂಡಿವೆ. ಮೂರನೇ ಹಾಗೂ ಸರಣಿ ನಿರ್ಣಾಯಕ ಪಂದ್ಯ ಇಂದೋರ್ನ ಹೋಳ್ಕರ್ ಕ್ರೀಡಾಂಗಣದಲ್ಲಿ ಜನವರಿ 18 ರಂದು ನಡೆಯಲಿದೆ. ಈ ಪಂದ್ಯವನ್ನು ಗೆಲ್ಲುವ ತಂಡ ಸರಣಿಯನ್ನು ಮುಡಿಗೇರಿಸಿಕೊಳ್ಳಲಿದೆ.
ಇದನ್ನೂ ಓದಿ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಂಕ್ರಾಂತಿ ಗಿಫ್ಟ್! – ಹಳದಿ ಮಾರ್ಗದಲ್ಲಿ ಹೊಸ ರೈಲು ಸಂಚಾರ ಆರಂಭ
ಬುಧವಾರ ಇಲ್ಲಿನ ನಿರಂಜನ್ ಶಾ ಕ್ರೀಡಾಂಗಣದಲ್ಲಿ ಭಾರತ ತಂಡ ನೀಡಿದ್ದ 285 ರನ್ಗಳ ಗುರಿಯನ್ನು ಹಿಂಬಾಲಿಸಿದ ನ್ಯೂಜಿಲೆಂಡ್ ತಂಡ, ಆರಂಭಿಕ ಹಿನ್ನಡೆ ಅನುಭವಿಸಿದರೂ ಡ್ಯಾರಿಲ್ ಮಿಚೆಲ್ (131* ರನ್) ಶತಕ ಹಾಗೂ ವಿಲ್ ಯಂಗ್ (87) ಅವರ ಅರ್ಧಶತಕದ ಬಲದಿಂದ 47.3 ಓವರ್ಗಳಿಗೆ 3 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿ ಗೆಲುವಿನ ನಗೆ ಬೀರಿತು. ಆ ಮೂಲಕ ಏಕದಿನ ಸರಣಿ ಗೆಲ್ಲುವ ಆಸೆಯನ್ನು ಜೀವಂತವಾಗಿರಿಸಿಕೊಂಡಿತು. ಕಿವೀಸ್ ಪರ ಮ್ಯಾಚ್ ವಿನ್ನಿಂಗ್ ಶತಕ ಬಾರಿಸಿದ ಡ್ಯಾರಿಲ್ ಮಿಚೆಲ್ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.
ಭಾರತ ತಂಡ ನೀಡಿದ್ದ ಗುರಿ ಹಿಂಬಾಲಿಸಿದ್ದ ಕಿವೀಸ್, ಬಹುಬೇಗ ಡೆವೋನ್ ಕಾನ್ವೆ (16) ಹಾಗೂ ಹೆನ್ರಿ ನಿಕೋಲ್ಸ್ (10) ಅವರ ವಿಕೆಟ್ಗಳನ್ನು ಕಳೆದುಕೊಂಡಿತು. ಆ ಮೂಲಕ ಪ್ರವಾಸಿಗರು 46 ರನ್ಗಳಿಗೆ ಎರಡು ವಿಕೆಟ್ ಕಳೆದುಕೊಂಡು ಆರಂಭಿಕ ಆಘಾತಕ್ಕೆ ಒಳಗಾಗಿತ್ತು. ಆದರೆ, ಮೂರನೇ ವಿಕೆಟ್ಗೆ ಜೊತೆಯಾದ ಡ್ಯಾರಿಲ್ ಮಿಚೆಲ್ ಹಾಗೂ ವಿಲ್ ಯಂಗ್ 162 ರನ್ಗಳ ನಿರ್ಣಾಯಕ ಜೊತೆಯಾಟವನ್ನು ಆಡಿ ಪಂದ್ಯದ ದಿಕ್ಕನ್ನು ಬದಲಿಸಿದರು. ಈ ಜೋಡಿಯನ್ನು ಬೇರ್ಪಡಿಸಲು ಭಾರತದ ಬೌಲರ್ಗಳಿಂದ ಜಾಸ್ತಿ ಹೊತ್ತು ಸಾಧ್ಯವಾಗಲಿಲ್ಲ. ಭರ್ಜರಿ ಬ್ಯಾಟ್ ಮಾಡಿದ ಯಂಗ್, 98 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 87 ರನ್ ಗಳಿಸಿ ಶತಕದಂಚಿನಲ್ಲಿ ಕುಲ್ದೀಪ್ ಯಾದವ್ಗೆ ವಿಕೆಟ್ ಒಪ್ಪಿಸಿದರು.

ನೋಡಿರಿ

