ಲಕ್ಷ ಲಕ್ಷ ಪಂಗನಾಮ! – ತಂಗಿ ವಿರುದ್ಧವೇ ಕೇಸ್‌ ಕೊಟ್ಟ ನಟಿ ಕಾರುಣ್ಯ ರಾಮ್!

ಲಕ್ಷ ಲಕ್ಷ ಪಂಗನಾಮ! – ತಂಗಿ ವಿರುದ್ಧವೇ ಕೇಸ್‌ ಕೊಟ್ಟ ನಟಿ ಕಾರುಣ್ಯ ರಾಮ್!

ಸ್ಯಾಂಡಲ್‌ವುಡ್‌ನ ನಟಿ, ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಕಾರುಣ್ಯ ರಾಮ್‌ ತಮ್ಮ ಸ್ಪಂತ ತಂಗಿಯಿಂದಲೇ ಮೋಸ ಹೋಗಿದ್ದಾರೆ. ಸಮೃದ್ಧಿ ರಾಮ್‌ ನಟಿಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದು, ಇದೀಗ ಕಾರುಣ್ಯ ತಂಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಪೊಲೀಸರ ಮೊರೆ ಹೋಗಿದ್ದಾರೆ.

ಇದನ್ನೂ ಓದಿ: ದೊಡ್ಮನೆ ಮಂದಿಗೆ ಕಿಚ್ಚನ ಪತ್ರ! – ಇಲ್ಲಿ ತನಕ ಒಂದು ಲೆಕ್ಕ.. ಇನ್ಮೇಲಿಂದ ಒಂದು ಲೆಕ್ಕ ಎಂದು ಸುದೀಪ್ ಗಿಲ್ಲಿಗೆ ಹೇಳಿದ್ಯಾಕೆ?

ತಮ್ಮ ಸಹೋದರಿ ಸಮೃದ್ಧಿ ರಾಮ್, ಮನೆಯಲ್ಲಿರುವ ಹಣ, ಚಿನ್ನವನ್ನೆಲ್ಲ ದುರುಪಯೋಗ ಪಡಿಸಿಕೊಂಡು, ಮನೆ ಬಿಟ್ಟು ಹೋಗಿದ್ದಾರೆ ಎಂದು ಕಾರುಣ್ಯ ರಾಮ್‌  ದೂರು ನೀಡಿದ್ದಾರೆ. ತಂಗಿ ಸಮೃದ್ಧಿ ರಾಮ್, ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂಬವರ ವಿರುದ್ಧ ಆರ್​​ಆರ್ ನಗರದ ಸಿಸಿಬಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಏನಿದು ಘಟನೆ?

ಸಮೃದ್ಧಿ ರಾಮ್ ಅವರು ಮೇಕಪ್ ಆರ್ಟಿಸ್ಟ್‌ ಆಗಿದ್ದಾರೆ. ಆದ್ರೆ ಆಕೆ ಬೆಟ್ಟಿಂಗ್ ಆಡಿ ಸುಮಾರು 25 ಲಕ್ಷ ರೂ. ಸಾಲ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ವ್ಯವಹಾರದಲ್ಲೂ ಅಪಾರ ನಷ್ಟ ಅನುಭವಿಸಿದ್ದಾರೆ. ಖಾಸಗಿ ವ್ಯಕ್ತಿಗಳಿಂದ ಸಾಲ ಪಡೆದಿದ್ದಾರೆ. ಹೀಗಾಗಿ ಮನೆಯಲ್ಲಿದ್ದ ಚಿನ್ನ ಹಾಗೂ ಹಣವನ್ನು ಸಾಲ ತೀರಿಸಲು ಬಳಸಿಕೊಂಡು ವಂಚಿಸಿದ್ದಾರೆ. ಈಕೆ ಮಾಡಿದ ಸಾಲದ ಹಣ ಪಡೆಯಲು ಸಾಲಗಾರರು ಮನೆಗೆ ಬಂದು ಪೀಡಿಸುತ್ತಿದ್ದಾರೆ. ನನ್ನ ಹಣವನ್ನು ಬಳಕೆ ಮಾಡಿಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಸಮೃದ್ದಿ ನನ್ನನ್ನು ಮನೆಯಿಂದ ಹೊರಗೆ ಹಾಕಿದ್ದಾರೆ. ವಾಟ್ಸಪ್‌ನಲ್ಲಿ ಅಶ್ಲೀಲ ಸಂದೇಶ, ಸಾಮಾಜಿಕ ಜಾಲತಾಣದಲ್ಲಿ ಹಾಕುವ ಫೋಟೋಗಳಿಗೆ ಕೆಟ್ಟದಾಗಿ ಕಾಮೆಂಟ್ ಮಾಡಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಹಿಂದೆಯೂ ಕಾರುಣ್ಯ ರಾಮ್, ಸಮೃದ್ಧಿ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಗ ಎನ್‌ಸಿಆರ್‌ ದಾಖಲಾಗಿತ್ತು. ಈಗ ಕಾರುಣ್ಯ ರಾಮ್‌ ಸಹೋದರಿ ವಿರುದ್ಧ ಸಿಸಿಬಿಯಲ್ಲಿ ದೂರು ನೀಡಿದ್ದಾರೆ.

Shwetha M