ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! – ಇನ್ಮುಂದೆ ಶಾಲೆಗಳಲ್ಲಿ ಮೊಳಗಲಿದೆ ವಾಟರ್ ಬೆಲ್!

ಶಾಲಾ ವಿದ್ಯಾರ್ಥಿಗಳ ಆರೋಗ್ಯದ ದೃಷ್ಠಿಯಿಂದ ರಾಜ್ಯ ಸರ್ಕಾರ ಹೊಸ ಹೊಸ ಯೋಜನೆಗಳನ್ನು ಪರಿಚಯಿಸುತ್ತಲೇ ಇದೆ. ಇದೀಗ ಹೊಸ ಯೋಜನೆಯೊಂದನ್ನು ಶಿಕ್ಷಣ ಇಲಾಖೆ ಪರಿಚಯಿಸಿದೆ. ಇನ್ಮುಂದೆ ಶಾಲೆಗಳಲ್ಲಿ ವಾಟರ್ ಬೆಲ್ ಅನುಷ್ಠಾನಗೊಳಿಸಲಾಗುತ್ತಿದೆ.
ಇದನ್ನೂ ಓದಿ: ರಾಜ್ಯ ರಾಜಕೀಯಕ್ಕೆ ನಾನು ಬರುತ್ತೇನೆ! – ಹೆಚ್ಡಿ ಕುಮಾರಸ್ವಾಮಿ ಹೊಸ ಪ್ಲ್ಯಾನ್ ಏನು?
ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ್ಗೆ, ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ ನೀರು ಕುಡಿಯುವಂತೆ ಜ್ಞಾಪಿಸಲು ವಾಟರ್ ಬೆಲ್ ಬಾರಿಸುವುದು ಸೂಕ್ತವಾಗಿರುತ್ತದೆ. ಇದೀಗ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ವಾಟರ್ ಬೆಲ್ ನಿಯಮ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿರುವ ಎಲ್.ಕೆ.ಜಿ, ಯು.ಕೆ.ಜಿ ಒಳಗೊಂಡಂತೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗ, ನೀರು ಕುಡಿಯುವಂತೆ ಜ್ಞಾಪಿಸಲು ‘ವಾಟರ್ ಬೆಲ್ʼ (ನೀರಿನ ಗಂಟೆ) ಬಾರಿಸುವ ನಿಯಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಅಂದ್ಹಾಗೆ 2019ರಲ್ಲೇ ಕರ್ನಾಟಕದ ಶಾಲೆಗಳಲ್ಲೂ ವಾಟರ್ ಬೆಲ್ ಜಾರಿಗೊಳಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿತ್ತು. ಪ್ರತಿ ದಿನ ಮೂರು ಬಾರಿ ಮಕ್ಕಳು ನೀರು ಕುಡಿಯಲು ನೆನಪಿಸಲು ನಿಯಮಾವಳಿಗಳನ್ನು ರೂಪಿಸಲಾಗಿತ್ತು. ಬೆಳಗ್ಗೆ 10:35, ಮಧ್ಯಾಹ್ನ 12 ಹಾಗೂ 2 ಗಂಟೆಗೆ ವಾಟರ್ ಬೆಲ್ ಬಾರಿಸಲು ಸೂಚಿಸಲಾಗಿತ್ತು. ಇದೀಗ ಈ ನಿಯಮವನ್ನು ಅನುಷ್ಠಾನಗೊಳಿಸುವ ಸಂಬಂಧ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ನೋಡಿರಿ

