ಸರ್ಕಾರಿ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ – ವಿದ್ಯಾರ್ಥಿಗಳನ್ನು ಸೆಳೆಯಲು ಶಿಕ್ಷಣ ಇಲಾಖೆ ಕಸರತ್ತು

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ಗುಡ್‌ನ್ಯೂಸ್ ಕೊಟ್ಟಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳ ಸೆಳೆಯಲು ಶಿಕ್ಷಣ ಇಲಾಖೆ ಮುಂದಾಗಿದ್ದು, ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ.
ಇದನ್ನೂ ಓದಿ:FIR ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ಎಸ್ಕೇಪ್ – ಪೊಲೀಸರ ಜೊತೆ ರಾಜೀವ್ ಪತ್ನಿ ರಂಪಾಟ
2026-27 ಶೈಕ್ಷಣಿಕ ಸಾಲಿನ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್‌ಗಳನ್ನು ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಒಬ್ಬ ವಿದ್ಯಾರ್ಥಿಗೆ ಕನಿಷ್ಠ 6 ನೋಟ್ ಬುಕ್‌ಗಳನ್ನು ಉಚಿತವಾಗಿ ವಿತರಿಸುವ ಯೋಜನೆಯನ್ನು ರೂಪಿಸಲಾಗಿದೆ. ಮುಂದಿನ ಶೈಕ್ಷಣಿಕ ಸಾಲಿನಲ್ಲಿ ವಿದ್ಯಾರ್ಥಿಗಳನ್ನು ಸೆಳೆಯಲು ಈ ತೀರ್ಮಾನಕ್ಕೆ ಬಂದಿದೆ ಶಿಕ್ಷಣ ಇಲಾಖೆ. ಇದರಿಂದ ಪೋಷಕರ ಮೇಲಿನ ಹೊರೆ ಕಡಿಮೆಯಾಗಲಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಇತ್ತೀಚೆಗೆ ನೀಡಿದ ಹೇಳಿಕೆಯ ಪ್ರಕಾರ, ಈಗಾಗಲೇ ಸರ್ಕಾರಿ ಶಾಲೆಗಳ ಮಕ್ಕಳಿಗೆ ಉಚಿತ ಪಠ್ಯಪುಸ್ತಕಗಳು, ಸಮವಸ್ತ್ರ (ಯೂನಿಫಾರ್ಮ್), ಶೂಗಳು, ಬ್ಯಾಗ್ ಮತ್ತು ಮಧ್ಯಾಹ್ನದ ಊಟ (ಮಿಡ್-ಡೇ ಮೀಲ್) ಸೌಲಭ್ಯ ಲಭ್ಯವಿದೆ. ಆದರೆ ನೋಟ್ ಬುಕ್‌ಗಳ ಕೊರತೆಯಿಂದ ಮಕ್ಕಳು ತರಗತಿಯಲ್ಲಿ ಬರೆಯಲು ತೊಂದರೆ ಅನುಭವಿಸುತ್ತಿದ್ದರು. ಈ ಸಮಸ್ಯೆಯನ್ನು ಪರಿಹರಿಸಲು ಇಲಾಖೆ ಈ ಹೊಸ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಕರ್ನಾಟಕ ಟೆಕ್ಸ್ಟ್ ಬುಕ್ ಸೊಸೈಟಿ ಮೂಲಕ ನೋಟ್ ಬುಕ್‌ಗಳನ್ನು ಮುದ್ರಿಸಿ ವಿತರಿಸಲಾಗುವುದು. ಒಂದನೇ ತರಗತಿಯಿಂದ 12ನೇ ತರಗತಿವರೆಗಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಇದರ ಜೊತೆಗೆ ಪಿಯು ಕಾಲೇಜುಗಳ ವಿದ್ಯಾರ್ಥಿಗಳಿಗೂ ಉಚಿತ ನೋಟ್ ಬುಕ್ ಸೌಲಭ್ಯ ವಿಸ್ತರಣೆಯ ಸಾಧ್ಯತೆ ಇದೆ. ಈ ಯೋಜನೆಯ ಮೂಲಕ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಮಕ್ಕಳನ್ನು ಸೆಳೆಯುವುದು ಇಲಾಖೆಯ ಮುಖ್ಯ ಉದ್ದೇಶವಾಗಿದೆ. ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳಲ್ಲಿ ಉಚಿತ ಸೌಲಭ್ಯಗಳು ಹೆಚ್ಚಾಗಿರುವುದರಿಂದ ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸುವಂತೆ ಮನವೊಲಿಸಲು ವಿಶೇಷ ಕ್ಯಾಂಪೇನ್ ಆರಂಭಿಸಲಾಗಿದೆ. ಈಗಾಗಲೇ ಮುಂದಿನ ವರ್ಷದ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಪೋಷಕರಿಗೆ ಶಾಲೆಗಳ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡುವ ಕಾರ್ಯಕ್ರಮಗಳು ನಡೆಯುತ್ತಿವೆ.

ನೋಡಿರಿ

