ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! – ಇನ್ಮುಂದೆ ಶೂ ಕಿರಿಕಿರಿ ಇರಲ್ಲ!

ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್! – ಇನ್ಮುಂದೆ ಶೂ ಕಿರಿಕಿರಿ ಇರಲ್ಲ!

ಸರ್ಕಾರಿ ಶಾಲೆ ಹಾಗೂ ಅನುದಾನಿತ ಶಾಲೆ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ ಶೂ ನೀಡಲಾಗುತ್ತಿದೆ. ಆದ್ರೆ ಇನ್ಮುಂದೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿ ಶೂ ಬದಲು ಚಪ್ಪಲಿ ವಿತರಿಸಲು ಮುಂದಾಗಿದೆ.

ಇದನ್ನೂ ಓದಿ: ಗಿಲ್ಲಿ ಗೆದ್ದ ಬೆನ್ನಲ್ಲೇ ಅರ್ಧ ಮೀಸೆ ಬೋಳಿಸಿಕೊಂಡ ವ್ಯಕ್ತಿ!

ಕರ್ನಾಟಕದಲ್ಲಿ ಪ್ರತಿ ವರ್ಷ ಶೂ ಮತ್ತು ಸಾಕ್ಸ್ ವಿತರಣೆ ಮಾಡಲಾಗುತ್ತಿದೆ. ಪ್ರಸ್ತುತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ನೀಡಲಾಗುತ್ತಿದೆ.ಆದ್ರೆ ಪ್ರತಿದಿನ ಶೂ ಧರಿಸುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಮಳೆಗಾಲ ಮತ್ತು ಬೇಸಿಗೆ ಕಾಲದಲ್ಲಿ ದೀರ್ಘಕಾಲ ಶೂ ಧರಿಸುವುದರಿಂದ ವಿದ್ಯಾರ್ಥಿಗಳಿಗೆ ಹಲವು ಸಮಸ್ಯೆಗಳು ಎದುರಾಗುತ್ತಿವೆ ಎಂಬ ದೂರುಗಳು ಕೇಳಿಬಂದಿವೆ. ಇದೀಗ ಕೆಲವು ಜಿಲ್ಲೆಗಳಲ್ಲಿ ಶಾಲಾ ಮಕ್ಕಳಿಗೆ ಶೂ ಬದಲಿಗೆ ಚಪ್ಪಲಿ ವಿತರಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ, ಪ್ರಾದೇಶಿಕ ಹವಾಮಾನಕ್ಕೆ ತಕ್ಕಂತೆ ಪಾದರಕ್ಷೆಗಳನ್ನು ಒದಗಿಸಲು ಇಲಾಖೆ ಮುಂದಾಗಿದೆ.

ಈ ಯೋಜನೆಯನ್ನು ಜಾರಿಗೆ ತರುವ ಮೊದಲು, ಯಾವ ಜಿಲ್ಲೆಗಳಲ್ಲಿ ಚಪ್ಪಲಿಗೆ ಹೆಚ್ಚಿನ ಬೇದಿಕೆ ಇದೆ ಎಂಬ ಬಗ್ಗೆ ಮಾಹಿತಿ ಕಲೆಹಾಕಲು ಶಿಕ್ಷಣ ಇಲಾಖೆಯು ಉಪನಿರ್ದೇಶಕರಿಗೆ ಸೂಚನೆ ನೀಡಿದೆ. ವಿಶೇಷವಾಗಿ ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯವು ಈ ಬಗ್ಗೆ ವರದಿ ನೀಡುವಂತೆ ನಿರ್ದೇಶಿಸಿದೆ. ಶೂ ಧರಿಸಲು ಕಷ್ಟವಾಗುವ ಪ್ರದೇಶಗಳ ಜಿಲ್ಲೆಗಳ ಪಟ್ಟಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಒಂದರಿಂದ 5 ನೇ ತರಗತಿ ವಿದ್ಯಾರ್ಥಿಗೆ ತಲಾ 265 ರೂಪಾಯಿ, 6 ರಿಂದ 8 ನೇ ತರಗತಿ ವಿದ್ಯಾರ್ಥಿಗೆ ತಲಾ 295 ರೂಪಾಯಿ, 9ರಿಂದ 10 ನೇ ತರಗತಿ ವಿದ್ಯಾರ್ಥಿಗೆ ತಲಾ 325 ರೂಪಾಯಿ ನಿಗದಿ ಮಾಡಲಾಗಿದೆ.

Shwetha M