ದೆಹಲಿ, ಬೆಂಗಳೂರು ಆಯ್ತು.. ಈಗ ಮಂಗಳೂರಿನಲ್ಲೂ ಕಳಪೆ ಏರ್ ಕ್ವಾಲಿಟಿ!

ದೇಶದ ಹಲವು ಭಾಗಗಳಲ್ಲಿ ಉಸಿರಾಡುವ ಗಾಳಿಯೇ ವಿಷವಾಗುತ್ತಿದೆ. ದಿನದಿಂದ ದಿನಕ್ಕೆ ಗಾಳಿಯ ಗುಣಮಟ್ಟ ಕಳಪೆಯಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಲವು ದಿನಗಳಿಂದ ವಾಯುಗುಣಮಟ್ಟ ಕುಸಿದಿದೆ. ಇದೀಗ ಕಡಲ ನಗರಿ ಮಂಗಳೂರಿನಲ್ಲೂ ಉಸಿರಾಡುವ ಗಾಳಿ ಜನರಿಗೆ ಕಂಟಕವಾಗಿ ಪರಿಣಮಿಸುತ್ತಿದೆ.
ಇದನ್ನೂ ಓದಿ: ಗಿಲ್ಲಿ ಗೆದ್ದ ಬೆನ್ನಲ್ಲೇ ಅರ್ಧ ಮೀಸೆ ಬೋಳಿಸಿಕೊಂಡ ವ್ಯಕ್ತಿ!
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗಾಳಿಯ ಗುಣಮಟ್ಟ ಕುಸಿಯುತ್ತಿದೆ. ಒಮ್ಮೊಮ್ಮೆ 200ರ ಗಡಿ ದಾಟುವ AQI, ನಗರವಾಸಿಗಳಲ್ಲಿ ಆತಂಕ ಸೃಷ್ಟಿಸುತ್ತಿದೆ. ಇದೀಗ ಮಂಗಳೂರಿನಲ್ಲೂ ವಾಯು ಗುಣಮಟ್ಟ ಕಳಪೆಯಾಗಿದ್ದು, ಇದರಿಂದ ಮಕ್ಕಳಿಗೆ, ಹಿರಿಯ ನಾಗರಿಕರಿಗೆ ಹಾಗೂ ಉಸಿರಾಟ ಸಮಸ್ಯೆ ಇರುವವರಿಗೆ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.
ಮಂಗಳೂರಿನ ಗಾಳಿಯಗುಣಮಟ್ಟ 185ಕ್ಕೆ ತಲುಪಿದ್ದು, ತೀರಾ ಕಳಪೆ ಮಟ್ಟಕ್ಕೆ ಕುಸಿದಿದೆ. ನಗರದಲ್ಲಿ PM2.5 ಮಟ್ಟ 84 ಹಾಗೂ PM10 ಮಟ್ಟ 116ಕ್ಕೆ ಏರಿಕೆಯಾಗಿದೆ. ಈ ಎರಡೂ ಪ್ರಮಾಣಗಳು ಸುರಕ್ಷಿತ ಮಿತಿಯನ್ನು ಮೀರಿದ್ದು, ಸಾರ್ವಜನಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಮಟ್ಟದಲ್ಲಿವೆ.
ವಿಶೇಷವಾಗಿ PM2.5 ಸೂಕ್ಷ್ಮ ಕಣಗಳು ಶ್ವಾಸಕೋಶದ ಆಳಕ್ಕೆ ಪ್ರವೇಶಿಸಿ ಉಸಿರಾಟದ ತೊಂದರೆ, ಆಸ್ತಮಾ ಮತ್ತು ಹೃದಯ ಸಂಬಂಧಿತ ಸಮಸ್ಯೆಗಳಿಗೆ ಕಾರಣವಾಗುವ ಸಾಧ್ಯತೆ ಇದೆ. ವಾಹನಗಳ ಅತಿಯಾದ ಬಳಕೆ, ನಿರ್ಮಾಣ ಕಾರ್ಯಗಳಿಂದ ಉಂಟಾಗುವ ಧೂಳು, ಕೈಗಾರಿಕಾ ಉತ್ಸರ್ಜನೆ ಮತ್ತು ಹವಾಮಾನದಲ್ಲಿ ಗಾಳಿಯ ಚಲನೆಯ ಕೊರತೆ ಈ ಪರಿಸ್ಥಿತಿಗೆ ಪ್ರಮುಖ ಕಾರಣಗಳಾಗಿವೆ. ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಮಾಲಿನ್ಯ ಪ್ರಮಾಣ ಇನ್ನಷ್ಟು ಹೆಚ್ಚುತ್ತಿರುವುದು ಆತಂಕಕಾರಿ ಸಂಗತಿ.
ಇಂದಿನ ಗಾಳಿಯ ಗುಣಮಟ್ಟ
ಬೆಂಗಳೂರು –169
ಮಂಗಳೂರು-185
ಮೈಸೂರು – 104
ಬೆಳಗಾವಿ – 80
ಕಲಬುರ್ಗಿ-84
ಶಿವಮೊಗ್ಗ – 64
ಬಳ್ಳಾರಿ – 168
ಹುಬ್ಬಳ್ಳಿ- 86
ಉಡುಪಿ –171
ವಿಜಯಪುರ –68

ನೋಡಿರಿ

